ಆಸ್ಪತ್ರೆ ಬೆಡ್‌ ಮೇಲೆ ಕುಳಿತು ತಮ್ಮ ರೋಗದ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸಿದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ..! ವಿಡಿಯೋ ವೈರಲ್‌

Endometriosis disease : ಶಮಿತಾ ಶೆಟ್ಟಿ ಆಸ್ಪತ್ರೆಯ ಬೆಡ್ ಮೇಲೆ ಕುಳಿತು ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಅಭಿಮಾನಿಗಳಿಗೆ ವಿವರಿಸಿದ್ದಾರೆ.. ವಿಶೇಷವಾಗಿ ಮಹಿಳೆಯರಿಗೆ ಮನವಿಯೊಂದನ್ನು ಮಾಡಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..

Written by - Krishna N K | Last Updated : May 16, 2024, 07:33 PM IST
    • ನಟಿ ಶಿಲ್ಪಾ ಶೆಟ್ಟಿ ಸಹೋದರಿ ನಟಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲು.
    • ನಟಿ ಶಮಿತಾ ಶೆಟ್ಟಿ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
    • ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ ಶಮಿತಾ.
ಆಸ್ಪತ್ರೆ ಬೆಡ್‌ ಮೇಲೆ ಕುಳಿತು ತಮ್ಮ ರೋಗದ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸಿದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ..! ವಿಡಿಯೋ ವೈರಲ್‌ title=

Shamita Shetty hospitalized : ಬಿಟೌನ್‌ ಸ್ಟಾರ್‌ ನಟಿ ಶಿಲ್ಪಾ ಶೆಟ್ಟಿ ಸಹೋದರಿ ನಟಿ ಶಮಿತಾ ಶೆಟ್ಟಿ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಮಿತಾ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಧ್ಯ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಹೌದು.. ಶಮಿತಾ ಶೆಟ್ಟಿ ಆಸ್ಪತ್ರೆಯ ಬೆಡ್ ಮೇಲೆ ಕುಳಿತು ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಅಭಿಮಾನಿಗಳಿಗೆ ವಿವರಿಸಿದ್ದಾರೆ.. ವಿಶೇಷವಾಗಿ ಮಹಿಳೆಯರಿಗೆ ಮನವಿಯೊಂದನ್ನು ಮಾಡಿದ್ದಾರೆ. ಎಂಡೋಮೆಟ್ರಿಯಾಸಿಸ್ ಸಮಸ್ಯೆಯಿಂದ ಬಳಲುತ್ತಿರುವ ನಟಿ, ಈ ಖಾಯಿಲೆ ಬಗ್ಗೆ ಎಚ್ಚರ ಇರುವಂತೆ ಮನವಿ ಮಾಡಿಕೊಂಡಿದ್ದಾರೆ. 

ಇದನ್ನೂ ಓದಿ: ಪುಷ್ಪಾ 2 ವಿಲನ್‌ ಅನಸೂಯಾ ಫಸ್ಟ್ ಲುಕ್ ಔಟ್‌..! ರಗಡ್‌ ಲುಕ್‌ನಲ್ಲಿ ಜಬರದಸ್ತ್‌ ಆ್ಯಂಕರ್ 

ಸ್ವತಃ ಶಿಲ್ಪಾ ಶೆಟ್ಟಿ ಈ ವಿಡಿಯೋವನ್ನು ಮಾಡಿದ್ದಾರೆ ವಿಡಿಯೋದಲ್ಲಿ.. ಎಲ್ಲ ಮಹಿಳೆಯರು ದಯವಿಟ್ಟು ಎಂಡೋಮೆಟ್ರಿಯಾಸಿಸ್ ಎಂದರೇನು ಅಂತ ಮೊದಲು ತಿಳಿದುಕೊಳ್ಳಿ, ಶೇ 40 ಮಹಿಳೆಯರಿಗೆ ಈ ಸಮಸ್ಯೆ ಇರುತ್ತದೆ. ಇದು ತೀವ್ರ ನೋವು ಉಂಟು ಮಾಡುವ ಖಾಯಿಲೆಯಾಗಿದ್ದು, ಸಾಧ್ಯವಾದಷ್ಟು ಇದರ ಬಗ್ಗೆ ಜಾಗೃತಿ ಮೂಡಿಸಿ ಅಂತ ಶಮಿತಾ ಹೇಳಿದ್ದಾರೆ.

‘ಮೊಹಬತ್ತೇನ್’ ಎಂಬ ಸಿನಿಮಾ ಮೂಲಕ ಬಾಲಿವುಡ್‌ಗೆ ಕಾಲಿಟ್ಟ ಶಮಿತಾ ಶೆಟ್ಟಿ 2008ರ ನಂತರ ಚಿತ್ರರಂಗದಿಂದ ದೂರವಾಗಿದ್ದರು. ಬಿಗ್​ಬಾಸ್, ಝಲಕ್ ದಿಕ್​ಲಾಜಾ, ಸೇರಿದಂತೆ ಕೆಲವು ರಿಯಾಲಿಟಿ ಶೋಗಳ ಮೂಲಕ ಕಮ್‌ಬ್ಯಾಕ್‌ ಮಾಡಿದ ನಟಿ, 2023 ರಲ್ಲಿ ‘ದಿ ಕೆನೆಂಟ್’ ಸಿನಿಮಾದ ಮೂಲಕ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಂಡರು. ಸದ್ಯ ಕೆಲವು ವೆಬ್ ಸೀರಿಸ್ ನಲ್ಲಿ ನಿರತರಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News