Anant Ambani pre wedding: 51 ಸಾವಿರ ಜನರಿಗೆ ಅನ್ನಸಂತರ್ಪಣೆ ಮೂಲಕ ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್‌ ಸಮಾರಂಭಕ್ಕೆ ಚಾಲನೆ

Anant Ambani pre wedding : ಜಾಮ್‌ನಗರದ ರಿಲಯನ್ಸ್ ಟೌನ್‌ಶಿಪ್ ಬಳಿಯ ಜೋಗ್ವಾಡ್ ಗ್ರಾಮದಲ್ಲಿ ಮುಕೇಶ್ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸೇರಿದಂತೆ ಅಂಬಾನಿ ಕುಟುಂಬದ ಇತರ ಸದಸ್ಯರು ಹಳ್ಳಿಗರಿಗೆ ಸಾಂಪ್ರದಾಯಿಕ ಗುಜರಾತಿ ಆಹಾರವನ್ನು ಉಣಬಡಿಸಿದರು.

Written by - Zee Kannada News Desk | Last Updated : Feb 29, 2024, 07:07 AM IST
  • ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ
  • ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ
  • ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್‌ ಸಮಾರಂಭ
Anant Ambani pre wedding: 51 ಸಾವಿರ ಜನರಿಗೆ ಅನ್ನಸಂತರ್ಪಣೆ ಮೂಲಕ ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್‌ ಸಮಾರಂಭಕ್ಕೆ ಚಾಲನೆ title=

ಜಾಮ್‌ನಗರ : ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆಯಲ್ಲಿನ ಶುಭ ಸಮಾರಂಭಕ್ಕೆ ಚಾಲನೆ ಸಿಕ್ಕಿದೆ. ಅಂಬಾನಿ ಕುಟುಂಬದ ಕಿರಿಯ ಮಗ ಮತ್ತು ಕೈಗಾರಿಕೋದ್ಯಮಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ಸಿದ್ಧತೆ ನಡೆದಿದೆ. ಅನಂತ್ ಅಂಬಾನಿ ಅವರ ವಿವಾಹಪೂರ್ವ ಕಾರ್ಯಕ್ರಮಗಳು ಅನ್ನ ಸಂತರ್ಪಣೆಯೊಂದಿಗೆ ಪ್ರಾರಂಭವಾಯಿತು. 

ಜಾಮ್‌ನಗರದ ರಿಲಯನ್ಸ್ ಟೌನ್‌ಶಿಪ್ ಬಳಿಯ ಜೋಗ್ವಾಡ್ ಗ್ರಾಮದಲ್ಲಿ ಮುಕೇಶ್ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸೇರಿದಂತೆ ಅಂಬಾನಿ ಕುಟುಂಬದ ಇತರ ಸದಸ್ಯರು ಹಳ್ಳಿಗರಿಗೆ ಸಾಂಪ್ರದಾಯಿಕ ಗುಜರಾತಿ ಆಹಾರವನ್ನು ಉಣಬಡಿಸಿದರು. ರಾಧಿಕಾ ಅವರ ಅಜ್ಜಿ ಮತ್ತು ಪೋಷಕರಾದ ವೀರೇನ್ ಮತ್ತು ಶೈಲಾ ಮರ್ಚೆಂಟ್ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸುಮಾರು 51 ಸಾವಿರ ಸ್ಥಳೀಯ ನಿವಾಸಿಗಳಿಗೆ ಆಹಾರ ನೀಡಲಾಯಿತು. ಇದು ಮುಂದಿನ ಕೆಲವು ದಿನಗಳವರೆಗೆ ಮುಂದುವರಿಯುತ್ತದೆ.

ಇದನ್ನೂ ಓದಿ: ಮಾರ್ಚ್ 11ರಿಂದ ಬೆಂಗಳೂರು - ಕೊಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ 

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಆಚರಣೆಗಳಿಗಾಗಿ ಸ್ಥಳೀಯ ಸಮುದಾಯದ ಆಶೀರ್ವಾದ ಪಡೆಯಲು ಅಂಬಾನಿ ಕುಟುಂಬವು ಅನ್ನ ಸಂತರ್ಪಣೆಯನ್ನು ಆಯೋಜಿಸಿದೆ. ಭೋಜನದ ನಂತರದಲ್ಲಿ ಕಾರ್ಯಕ್ರಮಕ್ಕೆ ಬಂದವರು ಸಾಂಪ್ರದಾಯಿಕ ಜನಪದ ಸಂಗೀತವನ್ನು ಆನಂದಿಸಿದರು. ಖ್ಯಾತ ಗುಜರಾತಿ ಗಾಯಕಿ ಕೀರ್ತಿದನ್ ಗಧ್ವಿ ತಮ್ಮ ಗಾಯನದ ಮೂಲಕ ಆನಂದಗೊಳಿಸಿದರು. 

ಅಂದ ಹಾಗೆ ಮುಕೇಶ್ ಅಂಬಾನಿ ಅವರ ಕುಟುಂಬದಲ್ಲಿ ಈ ರೀತಿ ಅನ್ನ ಸಂತರ್ಪಣೆ ಸಂಪ್ರದಾಯ ಹಳೆಯದು. ಈ ಹಿಂದೆ ನೀತಾ ಅಂಬಾನಿ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿಯೂ ದೇಶದಾದ್ಯಂತ ಅನ್ನದಾನ ಆಯೋಜಿಸಲಾಗಿತ್ತು. ಅಂಬಾನಿ ಕುಟುಂಬವು ಮಂಗಳಕರ ಕಾರ್ಯಕ್ರಮ ನಡೆಸುವ ಸಂದರ್ಭಗಳಲ್ಲಿ ಅನ್ನ ಸಂತರ್ಪಣೆ ಮಾಡುತ್ತಾ ಬರುತ್ತಿದೆ. 

ಇದನ್ನೂ ಓದಿ: Delhi metro : ಹಳದಿ ಮಾರ್ಗದಲ್ಲಿ ಚಲಿಸುತ್ತಿದ್ದ ಮೆಟ್ರೋ ಗೆ ಸಿಲುಕಿ ಓರ್ವ ವ್ಯಕ್ತಿಯ ಸಾವು 

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ದೇಶದಲ್ಲಿ ಜನರು ಬಿಕ್ಕಟ್ಟಿನಲ್ಲಿ ಇದ್ದಂಥ ಸಂದರ್ಭದಲ್ಲೂ ರಿಲಯನ್ಸ್ ಫೌಂಡೇಷನ್, ಅನಂತ್ ಅಂಬಾನಿ ಹಾಗೂ ಅವರ ತಾಯಿ ನೀತಾ ಅಂಬಾನಿ  ನೇತೃತ್ವದಲ್ಲಿ, ವಿಶ್ವದ ಅತಿದೊಡ್ಡ ಆಹಾರ ವಿತರಣೆ ಕಾರ್ಯಕ್ರಮವನ್ನು ನಡೆಸಿತು. ಕುಟುಂಬದ ಸಂಪ್ರದಾಯವನ್ನು ಮುಂದುವರಿಸಿದ್ದು, ಅನಂತ್ ಅಂಬಾನಿ ವಿವಾಹ ಪೂರ್ವ ಕಾರ್ಯಕ್ರಮಗಳನ್ನು ಅನ್ನ ಸಂತರ್ಪಣೆಯನ್ನು ಪ್ರಾರಂಭಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News