ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ : ಡಿಸಿಎಂ ಡಿ.ಕೆ. ಶಿವಕುಮಾರ್

ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : May 17, 2024, 04:56 PM IST
    • ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ
    • ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ
    • ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ
ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ : ಡಿಸಿಎಂ ಡಿ.ಕೆ. ಶಿವಕುಮಾರ್ title=

ಬೆಂಗಳೂರು : ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ. 

ಇದನ್ನೂ ಓದಿ: ಎನ್‍ಇಪಿಗೆ ತಿಲಾಂಜಲಿ ಇಟ್ಟಿರುವುದೇ ರಾಜ್ಯ ಸರ್ಕಾರದ ಸಾಧನೆ: ಎಸ್.ಸುರೇಶ್ ಕುಮಾರ್

ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ. ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದರು. 

ಇಂದು ಅಧಿಕಾರಿಗಳ ಜತೆ ನಡೆದ ಸಭೆ ಬಗ್ಗೆ ಕೇಳಿದಾಗ, ಬರಗಾಲ, ಕುಡಿಯುವ ನೀರು, ಮೇವಿನ ಸಮಸ್ಯೆ ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ಮಾಡಿದ್ದೇವೆ. ಬೆಂಗಳೂರಿನಲ್ಲಿ ಮಳೆ ಪರಿಣಾಮ ಕುರಿತು ಪ್ರತ್ಯೇಕ ಸಭೆ ಮಾಡುತ್ತೇನೆ. ಬತ್ತಿ ಹೋಗಿರುವ ಕೆರೆಗಳಿಗೆ ಪರಿಷ್ಕರಿಸಿದ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News