Hassan Pen Drive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ..!

Hassan Pen Drive Case: ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. 

Written by - Puttaraj K Alur | Last Updated : May 11, 2024, 01:28 PM IST
  • ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ
  • ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಟ್ರೋಲ್‌ ಪೇಜ್‌ ಅಡ್ಮಿನ್‌ ಬಂಧನ
  • ಪ್ರಜ್ವಲ್‌ ರೇವಣ್ಣ ವಿಡಿಯೋ ಅಪ್ಲೋಡ್‌ ಮಾಡಿದ್ದ ಆರೋಪಿ
Hassan Pen Drive Case: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ..! title=
ಟ್ರೋಲ್‌ ಪೇಜ್‌ ಅಡ್ಮಿನ್‌ ಬಂಧನ!

Hassan Pen Drive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ.

ಅಶ್ಲೀಲ ವಿಡಿಯೋ ಹಾಗೂ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಪ್ವಜ್ವಲ್‌ ರೇವಣ್ಣ ಪ್ರಕರಣ ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈಗಾಗಲೇ ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿದೆ. SIT ಅಧಿಕಾರಿಗಳು ಸಹ ಪ್ರಕರಣದ ತನಿಖೆ ನಡೆಸುತ್ತಿದ್ದು, ಪ್ರಜ್ವಲ್‌ ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ. 

ಇದನ್ನೂ ಓದಿ: Loksabha Election 2024: ಭಾರತದ ಯಾವ ರಾಜ್ಯವು ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿದೆ?

ಈ ನಡುವೆ ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. 

ಪ್ರಜ್ವಲ್​ ರೇವಣ್ಣರ ಅಶ್ಲೀಲ ವಿಡಿಯೋಗಳು ಎಂದು ಫೇಸ್‌ಬುಕ್, ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದ ಆರೋಪಿ ಪ್ರಜ್ವಲ್ ಎಂಬಾತನನ್ನು ಬಂಧಿಸಲಾಗಿದೆ. ಈ ಸಂಬಂಧ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ IPC ಸೆಕ್ಷನ್​ 67,67 (A) ಕಲಂ ಅಡಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News