ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ ತೊರೆಯಲು ಕಾರಣ ಡ್ರೆಸ್ಸಿಂಗ್‌ ರೂಮ್‌ನಲ್ಲಿ ನಡೆದ ʻಆ ಘಟನೆʼಯೇ!?

Hardik Pandya And Rohit Sharma Fight: ಐಪಿಎಲ್ 2024ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸತತ ಸೋಲು ಕಾಣುತ್ತಿದೆ.

Written by - Chetana Devarmani | Last Updated : Apr 6, 2024, 11:50 AM IST
  • ಮುಂಬೈ ಇಂಡಿಯನ್ಸ್‌ ತೊರೆಯಲಿರುವ ರೋಹಿತ್ ಶರ್ಮಾ
  • ಮುಂಬೈ ಇಂಡಿಯನ್ಸ್ ತಂಡ ಸತತ ಸೋಲು
  • ಡ್ರೆಸ್ಸಿಂಗ್ ರೂಮ್‌ನಲ್ಲಿ ಪಾಂಡ್ಯ ಮತ್ತು ರೋಹಿತ್ ಜಗಳ
ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ ತೊರೆಯಲು ಕಾರಣ ಡ್ರೆಸ್ಸಿಂಗ್‌ ರೂಮ್‌ನಲ್ಲಿ ನಡೆದ ʻಆ ಘಟನೆʼಯೇ!? title=

Rohit Sharma Fight With Hardik Pandya: ಐಪಿಎಲ್ 2024ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸತತ ಸೋಲು ಕಾಣುತ್ತಿದೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ನಡುವೆ ಒಂದು ಘಟನೆ ನಡೆದಿದೆ ಎನ್ನಲಾಗ್ತಿದೆ. 

ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ ನಂತರ ಮುಂಬೈ ಇಂಡಿಯನ್ಸ್ ತಂಡದ ಪರಿಸ್ಥಿತಿ ಹದಗೆಟ್ಟಿದೆ. ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ತಂಡದ ಕ್ಯಾಪ್ಟನ್‌ ಆಗಿ ಮಾಡಲಾಗಿದೆ. ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರ ನಿರ್ಧಾರಗಳು ಐಪಿಎಲ್ ಆರಂಭದಿಂದಲೂ ತೀವ್ರ ಟೀಕೆಗೆ ಒಳಗಾಗಿವೆ. ಮುಂಬೈ ಇದುವರೆಗೆ ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ.

ವರದಿಗಳ ಪ್ರಕಾರ, ಮುಂಬೈ ಇಂಡಿಯನ್ಸ್ (MI) ಮಾಜಿ ನಾಯಕ ರೋಹಿತ್ ಶರ್ಮಾ ಅವರು IPL 2024 ರಲ್ಲಿ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದ ನಿರ್ಧಾರಗಳ ಬಗ್ಗೆ ಅತೃಪ್ತಿ ಹೊಂದಿದ್ದಾರೆ. ಇದುವರೆಗೆ ಆಡಿದ ಪಂದ್ಯಗಳಲ್ಲಿ ಮುಂಬೈನ ಕಳಪೆ ಪ್ರದರ್ಶನದ ಬಳಿಕ ಡ್ರೆಸ್ಸಿಂಗ್ ರೂಮ್‌ನಲ್ಲಿ ಹಾರ್ದಿಕ್‌ ಪಾಂಡ್ಯ ಮತ್ತು ರೋಹಿತ್‌ ಶರ್ಮಾ ನಡುವೆ ಮಾತಿನ ಸಮರ ನಡೆದಿದೆ ಎನ್ನಲಾಗಿದೆ. ಪಾಂಡ್ಯ ಮತ್ತು ರೋಹಿತ್‌ ನಡುವೆ ಅನೇಕ ಬಾರಿ ವಾಗ್ವಾದಗಳು ನಡೆದಿವೆ ಎಂದು ಹೇಳಲಾಗಿದೆ. 

ಇದನ್ನೂ ಓದಿ: IPL 2024: MS Dhoni ವೀಕ್ಷಿಸಲು ಬಂದ ಅಭಿಮಾನಿಗಳ ಹುಚ್ಚಾಟ, ನಿಯಂತ್ರಣ ತಪ್ಪಿದ ಗುಂಪು Watch Video 

ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದ ಬಗ್ಗೆ ರೋಹಿತ್ ಶರ್ಮಾ ಅಸಮಾಧಾನಗೊಂಡಿದ್ದಾರೆ. ಇದು ಡ್ರೆಸ್ಸಿಂಗ್ ರೂಮ್‌ನಲ್ಲಿಯೂ ಕಾಣಿಸುತ್ತಿದೆ. ಇವರಿಬ್ಬರ ನಡುವೆ ಬಿರುಕು ಉಂಟು ಮಾಡಿದೆ. ಕೆಲವು ನಿರ್ಧಾರದ ವೇಳೆ ಹಾರ್ದಿಕ್ ಪಾಂಡ್ಯ  ಮತ್ತು ರೋಹಿತ್‌ ಶರ್ಮಾ ನಡುವೆ ಹಲವು ವಾಗ್ವಾದಗಳು ನಡೆದಿವೆ ಹೇಳಲಾಗ್ತಿದೆ. ಇದು ಡ್ರೆಸ್ಸಿಂಗ್ ರೂಮ್‌ ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ.  

ಈ ನಡುವೆ ಹಾರ್ದಿಕ್‌ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಮತ್ತೊಮ್ಮೆ ರೋಹಿತ್ ಶರ್ಮಾಗೆ ನಾಯಕತ್ವ ನೀಡಲು ಮುಂಬೈ ಫ್ರಾಂಚೈಸಿ ನಿರ್ಧರಿಸಿದೆ ಎಂದು ಸಹ ಹೇಳಲಾಗ್ತಿದೆ. ಆದರೆ ಮುಂಬೈ ತಂಡದ ನಾಯಕತ್ವದ ಜವಾಬ್ದಾರಿಯನ್ನು ಮತ್ತೊಮ್ಮೆ ನಿಭಾಯಿಸಲು ರೋಹಿತ್ ಶರ್ಮಾ ಸಿದ್ಧರಿಲ್ಲವಂತೆ. ಅವರು ಇದನ್ನು ನಿರಾಕರಿಸಿದ್ದಾರಂತೆ ಎಂದು ಹೇಳಲಾಗಿದೆ. ಈ ಐಪಿಎಲ್‌ ಸೀಸನ್ ಮುಗಿದ ನಂತರ ರೋಹಿತ್ ಮುಂಬೈ ತೊರೆಯಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಇದನ್ನೂ ಓದಿ: CSK VS SRH : 166ರನ್ ಟಾರ್ಗೆಟ್ ನೀಡಿದ ಚೆನ್ನೈ ಸೂಪರ್ ಕಿಂಗ್ಸ್, ತವರಿನಲ್ಲಿ ಗೆಲುವಿನ ಪತಾಕೆ ಹಾರಿಸುತ್ತಾ SRH

ಮುಂಬೈ ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ಅವರ ನಡೆಯನ್ನು ವಿರೋಧಿಸಿದ್ದಾರೆ. ಮುಂಬೈ ನಾಯಕ ಪಾಂಡ್ಯ ಮೇಲೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಐದು ಬಾರಿಯ ಐಪಿಎಲ್ ಚಾಂಪಿಯನ್ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಅಧಿಕಾರ ಹಸ್ತಾಂತರಿಸಿರುವುದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಸತತ ಸೋಲಿನ ಹಿನ್ನಲೆಯಲ್ಲಿ ಹಾರ್ದಿಕ್ ನಾಯಕತ್ವದ ಬಗ್ಗೆಯೂ ಚರ್ಚೆಯಾಗುತ್ತಿದೆ. 

ಒಟ್ಟಾರೆ ಮುಂಬೈ ತಂಡದಲ್ಲಿ ಹಾರ್ದಿಕ್‌ ಪಾಂಡ್ಯ ಹಾಗೂ ರೋಹಿತ್ ಶರ್ಮಾ ನಡುವಿನ ಮುನಿಸು ಆಟದ ಮೇಲೂ ಪರಿಣಾಮ ಬೀರುತ್ತಿದೆ ಎನ್ನಲಾಗಿದೆ. ಈ ಕ್ರಮದಲ್ಲಿ ಮುಂಬೈ ಇಂಡಿಯನ್ಸ್‌ ಮ್ಯಾನೇಜ್‌ಮೆಂಟ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News