ICC World Cup 2023: ರೋಹಿತ್ ಶರ್ಮಾ ಪಂದ್ಯಾವಳಿಯಲ್ಲಿ ಉತ್ತಮ ಫಾರ್ಮ್ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಹೊಸದೊಂದು ವಿಶ್ವ ದಾಖಲೆ ನಿರ್ಮಿಸುವ ಮೂಲಕ ಅವರು ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿಯೇ ಶ್ರೇಷ್ಠ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.
Glenn Maxwell Records in ODI: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಿದರು.
ICC World Cup 2023: ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 25 ವರ್ಷಕ್ಕೂ ಮುನ್ನ ಅತಿಹೆಚ್ಚು ಶತಕ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ರಚಿನ್ ರವೀಂದ್ರ ಅವರು ಮುರಿದು ವಿಶೇಷ ದಾಖಲೆ ನಿರ್ಮಿಸಿದ್ದಾರೆ.
Netherlands vs Afghanistan : ಶುಕ್ರವಾರ ಲಕ್ನೋದಲ್ಲಿ ನೆದರ್ಲ್ಯಾಂಡ್ಸ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಐಸಿಸಿ ಟೂರ್ನಿಯಲ್ಲಿ ತಂಡವೊಂದರ ಹೆಸರಿನಲ್ಲಿ ಅತ್ಯಂತ ಕಳಪೆ ರೆಕಾರ್ಡ್ ದಾಖಲಾಗಿದೆ.
Rishabh Pant and Axar Patel Visits Tirumala Temple: ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಟೀಂ ಇಂಡಿಯಾ ಆಟಗಾರರಾದ ರಿಷಬ್ ಪಂತ್ ಮತ್ತು ಅಕ್ಸರ್ ಪಟೇಲ್ ಅವರು ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ.
IND vs SL, World Cup 2023: ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಮೊದಲ ಟೀಂ ಇಂಡಿಯಾವನ್ನು ಬ್ಯಾಟಿಂಗ್’ಗೆ ಆಹ್ವಾನಿಸಿತು. ಆದರೆ ಭಾರತದ ಬ್ಯಾಟ್ಸ್’ಮನ್’ಗಳು ಅಬ್ಬರಿಸಿದ್ದೇ ಅಬ್ಬರಿಸಿದ್ದು… 50 ಓವರ್’ಗಳ ಪಂದ್ಯದಲ್ಲಿ ಬರೋಬ್ಬರಿ 357 ರನ್ ಕಲೆ ಹಾಕಿದ ಟೀಂ ಇಂಡಿಯಾ ಲಂಕಾ ಬೌಲರ್’ಗಳ ಬೆವರಿಳಿಸಿತು.
Odi World Cup 2023 ODI World Cup 2023: ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ನಿರ್ಣಾಯಕ ಪಂದ್ಯವಾಗಲಿದೆ. ಪುಣೆ ಮೈದಾನದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಸೆಮಿಫೈನಲ್ ಮತ್ತು ಟಾಪ್-7 ಸ್ಥಾನ ಪಡೆಯಲು ಅಗ್ರ-4ರಲ್ಲಿ ಸ್ಥಾನ ಪಡೆಯುವುದು ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ.. ಈ ಪಂದ್ಯಕ್ಕೂ ಚಾಂಪಿಯನ್ಸ್ ಟ್ರೋಫಿಗೂ ಲಿಂಕ್ ಇರುವುದರಿಂದ.. ಹೇಗಾದರೂ ಮಾಡಿ ಈ ಹೋರಾಟವನ್ನು ಗೆಲ್ಲಲೇಬೇಕೆಂದು ಎರಡೂ ತಂಡಗಳು ಹಠ ಹಿಡಿದಿವೆ.
ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ಗೆ ಶ್ರೀಲಂಕಾ ಶಾಕ್ ನೀಡಿದೆ. ಲಂಕಾದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿರುವ ಆಂಗ್ಲರು ಅಲ್ಪಮೊತ್ತಕ್ಕೆ ಕುಸಿತ ಕಂಡಿದ್ದಾರೆ.
Cricket Betting: ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ವಿರುದ್ದ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ 39 ಸಾವಿರ ಹಣ ಹಾಗೂ ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ICC World Cup 2023: ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಐಸಿಸಿ ವಿಶ್ವಕಪ್ ಟೂರ್ನಿಯ ಮುಂದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಲಿದ್ದಾರೆ. ಅಕ್ಟೋಬರ್ 19ರ ಗುರುವಾರ ಬಾಂಗ್ಲಾದೇಶದ ವಿರುದ್ಧ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಬ್ರಿಯಾನ್ ಲಾರಾ ಹೆಸರಿನಲ್ಲಿರುವ ಶ್ರೇಷ್ಠ ದಾಖಲೆ ಮುರಿಯುವ ಸಾಧ್ಯತೆಯಿದೆ.
ICC World Cup 2023: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ 13ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ಗೆ ಅಫ್ಘಾನಿಸ್ತಾನ ತಂಡವು 285 ರನ್ಗಳ ಗುರಿ ನೀಡಿದೆ.
ICC World Cup 2023: ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ 8-0 ಅಂತರದಲ್ಲಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್ ಗಳಲ್ಲಿ 191 ರನ್ ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 30.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿ ಗೆಲುವು ಸಾಧಿಸಿತು.
ICC World Cup 2023, IND vs PAK: ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ನಡುವೆ ಅಹಮದಾಬಾದ್ನಲ್ಲಿ ಐಸಿಸಿ ಏಕದಿನ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಪಾಕಿಸ್ತಾನಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಅಲ್ಪಮೊತ್ತಕ್ಕೆ ಕುಸಿತ ಕಂಡಿದೆ.
IND vs PAK, ICC World Cup 2023: ಅ.14ರ ಶನಿವಾರ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯವು ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯಲಿದೆ. ಹೀಗಾಗಿ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Team India won against Afghanistan in World Cup: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ್ದಾರೆ. ಈ ಮೂಲಕ ಅನೇಕ ದಿಗ್ಗಜರ ದಾಖಲೆಗಳೇ ಪತನಗೊಂಡಿವೆ. ಇನ್ನು ವೆಸ್ಟ್ ಇಂಡೀಸ್ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ರೋಹಿತ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.