ಕೈತಪ್ಪಿದ ಸಾಗರ ಟಿಕೆಟ್; ಕಾಂಗ್ರೆಸ್ ಸೇರಿದ ಬೇಳೂರು ಗೋಪಾಲಕೃಷ್ಣ

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

Last Updated : Apr 22, 2018, 06:29 PM IST
ಕೈತಪ್ಪಿದ ಸಾಗರ ಟಿಕೆಟ್; ಕಾಂಗ್ರೆಸ್ ಸೇರಿದ ಬೇಳೂರು ಗೋಪಾಲಕೃಷ್ಣ  title=
Pic : Twitter/@ @INCKarnataka

ಬೆಂಗಳೂರು : ಕರ್ನಾಟಕ ಚುನಾವಣೆಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅತೃಪ್ತ ರಾಜಕೀಯ ನಾಯಕರ ಪಕ್ಷಾಂತರ ಇಂದೂ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಹೇಳಿದ್ದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

ಇಲ್ಲಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಪಕ್ಷದ ಧ್ವಜವನ್ನು ನೀಡುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ವಾಗತಿಸಿದರು. ನಂತರ ಮಾತನಾಡಿದ ಅವರು, ಎರಡು ಬಾರಿ ಶಾಸಕರಾಗಿರುವ ಬೇಳೂರು ಗೋಪಾಲಕೃಷ್ಣ ಅವರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಖುಷಿ ತಂದಿದೆ. ಯಾವುದೇ ಷರತ್ತು ವಿಧಿಸದೇ ಪಕ್ಷಕ್ಕೆ ಸೇರಿರುವ ಬೇಳೂರು, ಜನಮಾನಸದಲ್ಲಿ ಒಳ್ಳೆಯ ಹೆಸರು ಮಾಡಿರುವ ನಾಯಕ. ಅವರ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಬರಲಿದೆ ಎಂದರು. 

ನಂತರ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, "ಬಿಜೆಪಿ ಯಾವುದೇ ತತ್ವ, ಸಿದ್ಧಾಂತಗಳಿಲ್ಲದ ಬೋಗಸ್ ಪಕ್ಷ. ಅಂತಹ ಪಕ್ಷದಲ್ಲಿ ಇದ್ದುಕೊಂಡು ಸಾಕಷ್ಟು ನೋವನ್ನು ಅನುಭವಿಸಿದ್ದೇನೆ. ನನ್ನ ಹಾಗೂ ಸೋದರ ಮಾವ ಕಾಗೋಡು ತಿಮ್ಮಪ್ಪ ಅವರ ನಡುವೆ ವೈಮನಸ್ಸು ಇದ್ದುದು ನಿಜ. ಆದರೆ ಇದೀಗ ನಾನು ಕಾಂಗ್ರೆಸ್ ಸೇರಿದ್ದು, ಇಬ್ಬರು ಒಟ್ಟಾಗಿ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸುತ್ತೇವೆ" ಎಂದು ಅವರು ಹೇಳಿದರು.

2004 ಮತ್ತು 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ತಮ್ಮ ಸೋದರ ಮಾವ ಕಾಗೋಡು ತಿಮ್ಮಪ್ಪ ವಿರುದ್ಧ ಗೆಲುವು ಸಾಧಿಸಿದ್ದ ಬೇಳೂರು ಗೋಪಾಲಕೃಷ್ಣ ಅವರು, 2013ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.

Trending News