ಬಿಜೆಪಿಯಿಂದ ಸರ್ಕಾರಿ ಸಂಸ್ಥೆಗಳ ದುರುಪಯೋಗ: ಸಿದ್ದರಾಮಯ್ಯ

ಅಧಿಕಾರದ ಗದ್ದುಗೆ ಏರಲೇಬೇಕೆಂಬ ಉದ್ದೇಶದಿಂದ ಬಿಜೆಪಿ ನಾಯಕರು ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

Last Updated : May 9, 2018, 02:42 PM IST
ಬಿಜೆಪಿಯಿಂದ ಸರ್ಕಾರಿ ಸಂಸ್ಥೆಗಳ ದುರುಪಯೋಗ: ಸಿದ್ದರಾಮಯ್ಯ  title=

ಮೈಸೂರು: ಅಧಿಕಾರದ ಗದ್ದುಗೆ ಏರಲೇಬೇಕೆಂಬ ಉದ್ದೇಶದಿಂದ ಬಿಜೆಪಿ ನಾಯಕರು ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ಐಟಿ ದಾಳಿಗಳಿಗೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾನು 12 ಚುನಾವಣೆಗಳನ್ನು ನೋಡಿದ್ದೇನೆ. ಆದರೆ ಇದೇ ಮೊದಲಬಾರಿಗೆ ಚುನಾವಣೆ ಸಂದರ್ಭದಲ್ಲಿ ಐಟಿ ದಾಳಿ ನಡೆಯುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಮನೆ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ. ಆದರೆ ಬಿಜೆಪಿಗರ ಮನೆ ಮೇಲೆ ಉದ್ದೇಶ ಪೂರ್ವಕವಾಗಿ ದಾಳಿ ನಡೆಸಲಾಗಿದ್ದು, ರಾಜಕೀಯ ಪ್ರೇರಿತ ಎಂಬುದನ್ನು ಮರೆಮಾಚಲು ಬಿಜೆಪಿ ಪ್ರಯತ್ನಿಸುತ್ತಿದೆ  ಎಂದು ಆರೋಪಿಸಿದರು. 

ಮತದಾರ ಗುರುತಿನ ಚೀಟಿ ಅಕ್ರಮ; ಕಾಂಗ್ರೆಸ್ಗೆ ಸದಾನಂದ ಗೌಡ ಸವಾಲು 

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್ಮೆಂಟ್'ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮತದಾರ ಗುರುತಿನ ಚೀಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ಬಗ್ಗೆ ಏನೂ ಹೇಳಲೂ ಇಷ್ಟಪಡುವುದಿಲ್ಲ. ಈ ಬಗ್ಗೆ ಚುನಾವಣಾ ಅಧಿಕಾರಿಗಳು ತನಿಖೆ ಮಾಡಲಿ. ಕೇಂದ್ರದಲ್ಲಿ ಬಿಜೆಪಿಯದ್ದೇ ಸರ್ಕಾರ ಇದೆ. ತನಿಖೆ ಮಾಡಿಸಲಿ ಎಂದು ಹೇಳಿದರು. 

ಅಕ್ರಮವಾಗಿ ಸಂಗ್ರಹಿಸಿದ್ದ 9000ಕ್ಕೂ ಅಧಿಕ ಮತದಾರರ ಗುರುತಿನ ಚೀಟಿ ಪತ್ತೆ

ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ಒಂದರಲ್ಲಿ ಮಂಗಳವಾರ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 9,746 ಮತದಾರರ ಗುರುತಿನ ಚೀಟಿ ಪತ್ತೆಯಾಗಿದ್ದು, ಚುನಾವಣಾ ಅಧಿಕಾರಿಗಳು ಅದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳೂ ಆರೋಪ-ಪ್ರತ್ಯಾರೋಗಳಲ್ಲಿ ತೊಡಗಿವೆ.

Trending News