ಜಯನಗರದ ಶಾಸಕ ವಿಜಯ್ ಕುಮಾರ್ ವಿಧಿವಶ

ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ವಿಜಯ್ ಕುಮಾರ್ ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದರು. ನಂತರ ಅವರನ್ನು ಕೂಡಲೇ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Last Updated : May 4, 2018, 08:29 AM IST
ಜಯನಗರದ ಶಾಸಕ ವಿಜಯ್ ಕುಮಾರ್ ವಿಧಿವಶ title=
Pic: social media

ಬೆಂಗಳೂರು: ಜಯನಗರದ ಬಿಜೆಪಿ ಶಾಸಕ ವಿಜಯ್ ಕುಮಾರ್(60) ಗುರುವಾರ ರಾತ್ರಿ ವಿಧಿವಶರಾದರು. ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ವಿಜಯ್ ಕುಮಾರ್ ಕ್ಷೇತ್ರದಲ್ಲಿ ಗುರುವಾರ ಚುನಾವಣಾ ಪ್ರಚಾರ ಮಾಡುವಾಗ ಕುಸಿದು ಬಿದ್ದರು. ನಂತರ ಅವರನ್ನು ಕೂಡಲೇ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ, ಗುರುವಾರ ತಡರಾತ್ರಿ 01:00 ಗಂಟೆಗೆ ವಿಧಿವಶರಾದರು ಎಂದು ಜಯದೇವ ಆಸ್ಪತ್ರೆ ನಿರ್ದೇಶಕ  ಡಾ. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.

1958 ರಲ್ಲಿ ಬೆಂಗಳೂರಿನಲ್ಲಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ವಿಜಯ್ ಕುಮಾರ್, ಲೇಟ್ ಪಿ ಎನ್ ನಾರಾಯಣ್ ಹಾಗೂ ಶಂಕ್ರಮ್ಮ ದಂಪತಿಗಳ ನಾಲ್ಕನೇ ಮಗನಾಗಿ ಜನಿಸಿದ್ದರು. ಬಿಎಂಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದ ವಿಜಯ್ ಕುಮಾರ್, ಸಿವಿಲ್ ಕಂಟ್ರಾಕ್ಟರ್ ಆಗಿ ಕೆಲಸ ನಿರ್ವಹಿಸಿದ್ದರು.

1990 ರಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ವಿಜಯ್ ಕುಮಾರ್, ಬೆಂಗಳೂರು ನಗರ ಬಿಜೆಪಿ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2008ರಲ್ಲಿ ಮೊದಲ ಬಾರಿಗೆ ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ಆಯ್ಕೆಯಾಗಿದ್ದ ವಿಜಯ್ ಕುಮಾರ್ ಮತ್ತು 2013ರಲ್ಲಿ  ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾದರು. 

 

 

Trending News