ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ಸಿದ್ದರಾಮಯ್ಯ ರಾಜೀನಾಮೆ!

ಬಿಜೆಪಿ ಬಹುಮತ ಗಳಿಸಿ ಸರ್ಕಾರ ರಚನೆಯ ಸಾಧ್ಯತೆ ಹೆಚ್ಚಾಗಿರುವುದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಎದುರಾಗಿದೆ. 

Last Updated : May 15, 2018, 01:16 PM IST
ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ಸಿದ್ದರಾಮಯ್ಯ ರಾಜೀನಾಮೆ! title=

ಬೆಂಗಳೂರು: ರಾಜ್ಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ವಿಧಾನಸಭಾ ಚುನಾವಣೆ ಕಡೆಯ ಹಂತ ತಲುಪಿದ್ದು, ಲೇಟೆಸ್ಟ್ ಟ್ರೆಂಡ್ಸ್ ಪ್ರಕಾರ ಬಿಜೆಪಿ 103 ಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 69 ಮತ್ತು ಜೆಡಿಎಸ್ 41 ಸ್ಥಾನ ಮತ್ತು ಇತರರು 2 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. 

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಬಿಜೆಪಿ ಸರ್ಕಾರ ರಚನೆ ಸಾಧ್ಯತೆ

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವ ಎಲ್ಲಾ ಸಾಧ್ಯತೆಗಳೂ ನಿಚ್ಚಳವಾಗಿದೆ. ಪೂರ್ಣ ಬಹುಮತ ಗಳಿಸಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಹಿನ್ನಡೆ ಸಾಧಿಸಿದ್ದು, ಹೀನಾಯ ಸೋಲು ಕಂಡಿದೆ. ಮತ್ತೊಂದೆಡೆ ತಮ್ಮ ಸ್ವ ಕ್ಷೇತ್ರದಲ್ಲೇ ಸೋಲನುಭವಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮುಖಭಂಗವಾಗಿದೆ. ಬಾದಾಮಿ ಕ್ಷೇತ್ರದಲ್ಲಿ ಶ್ರೀರಾಮುಲು ಅವರ ವಿರುದ್ಧ ಅಲ್ಪ ಮುನ್ನಡೆ ಸಾಧಿಸಿದ್ದು, ಫಲಿತಾಂಶ ಕುತೂಹಲ ಕೆರಳಿಸಿದೆ.

ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯಗೆ ಮುಖಭಂಗ; ಜಿ.ಟಿ.ದೇವೇಗೌಡಗೆ ಗೆಲುವು

ಪ್ರಸ್ತುತ ಚುನಾವಣಾ ಫಲಿತಾಂಶದಿಂದ ತಲೆಕೆಡಿಸಿಕೊಂಡಿರುವ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಹೊಂಡುವ ಸಂಬಂಧ ತೀವ್ರ ಚರ್ಚೆಯಲ್ಲಿ ತೊಡಗಿದೆ. ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರ ನಿವಾಸ ಕಾವೇರಿಗೆ ತೆರಳಿ ಸಭೆ ನಡೆಸುತ್ತಿದ್ದಾರೆ. ಬಿಜೆಪಿ ಬಹುಮತ ಗಳಿಸಿ ಸರ್ಕಾರ ರಚನೆಯ ಸಾಧ್ಯತೆ ಹೆಚ್ಚಾಗಿರುವುದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಎದುರಾಗಿದೆ. ಹಾಗಾಗಿ ಇಂದು ಸಂಜೆ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ ಮುಂದಿನ ನಡೆ ಬಗ್ಗೆ ಆಲೋಚಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

Trending News