ವಿಜಯಪುರದಲ್ಲಿ ಲುಲು ಗ್ರೂಪ್ ನಿಂದ ₹300 ಕೋಟಿ ಹೂಡಿಕೆ

ವಿಶ್ವ ಆರ್ಥಿಕ ವೇದಿಕೆಯ ದಾವೋಸ್‌ ಶೃಂಗಸಭೆಯಲ್ಲಿನ ಒಪ್ಪಂದಗಳ ಫಲ; ₹23 ಸಾವಿರ ಕೋಟಿಗೂ ಹೆಚ್ಚಿನ ಬಂಡವಾಳ ಆಕರ್ಷಿಸುವಲ್ಲಿ  ಕರ್ನಾಟಕ ಸಫಲ

Written by - Yashaswini V | Last Updated : Jan 24, 2024, 01:39 PM IST
  • ಲುಲು ಗ್ರೂಪ್‌, ಬಿಎಲ್‌ ಅಗ್ರೊ ವಿಜಯಪುರದಲ್ಲಿ ತಮ್ಮ ನೆಲೆ ವಿಸ್ತರಿಸಲಿವೆ.
  • ವಿಜಯಪುರದಲ್ಲಿ ₹ 300 ಕೋಟಿ ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸುವ ಉದ್ದೇಶಕ್ಕೆ ಬಂಡವಾಳ ಹೂಡಿಕೆ ಮಾಡಲು ಲುಲು ಸಮೂಹವು ಯೋಜಿಸಿದೆ.
  • ಬಿಎಲ್‌ ಅಗ್ರೊ ಕಂಪನಿಯು ವಿಜಯಪುರದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣಾ ಘಟಕವನ್ನು ಆರಂಭಿಸಲಿದೆ.
ವಿಜಯಪುರದಲ್ಲಿ ಲುಲು ಗ್ರೂಪ್ ನಿಂದ ₹300 ಕೋಟಿ ಹೂಡಿಕೆ title=

ಬೆಂಗಳೂರು:  ವಿಶ್ವ ಆರ್ಥಿಕ ವೇದಿಕೆಯ ದಾವೋಸ್‌ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ ₹ 23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ’  ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ  ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ.

ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ದಾವೋಸ್ ಪ್ರವಾಸದ ಫಲಶ್ರುತಿ ತಿಳಿಸುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ  ಎಂ.ಬಿ.ಪಾಟೀಲ, ‘ನೆಸ್ಲೆ, ಎಚ್‌ಪಿ, ಎಚ್‌ಸಿಎಲ್‌, ವೋಲ್ವೊ ಗ್ರೂಪ್‌, ಐಕಿಯಾ, ಸೋನಿ, ಮೈಕ್ರೊಸಾಫ್ಟ್‌, ಹಿಟಾಚಿ ಮತ್ತಿತರ ಜಾಗತಿಕ ಉದ್ಯಮಗಳ ಪ್ರಮುಖರ ಜೊತೆಗೆ ರಾಜ್ಯದ ನಿಯೋಗವು 50ಕ್ಕೂ ಹೆಚ್ಚಿನ ಸಭೆಗಳನ್ನು ನಡೆಸಿತು. ಬೆಂಗಳೂರಿನಲ್ಲಿ 100 ಮೆಗಾವಾಟ್ ಸಾಮರ್ಥ್ಯದ ಬೃಹತ್‌ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್ ವರ್ಕ್ಸ್ ಕಂಪನಿಯು ₹ 20,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ಪ್ರಕಟಿಸಿದೆ. ಇದರಿಂದ 1000 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.   ಡಿಜಿಟಲ್ ಕೌಶಲ ವೃದ್ಧಿ ಪ್ರಕ್ರಿಯೆ ಹಮ್ಮಿಕೊಳ್ಳಲು ಮೈಕ್ರೊಸಾಫ್ಟ್ ವಾಗ್ದಾನ ಮಾಡಿದೆ. ಗ್ರಾಮೀಣ ಪ್ರದೇಶ ಕೇಂದ್ರೀತ ಆರ್ಥಿಕ ಬೆಳವಣಿಗೆ  ಉತ್ತೇಜಿಸಲು ಹಿಟಾಚಿ ಕಂಪನಿಯು ‘ಎಂಒಯು’ಗೆ ಸಹಿ ಹಾಕಿದೆ’ ಎಂದರು.

ಇದನ್ನೂ ಓದಿ- Ram Mandir: ಅಂಬಾನಿಯಿಂದ ಹಿಡಿದು ಅಡಾಣಿವರೆಗೆ ರಾಮ ಮಂದಿರಕ್ಕೆ ಯಾರು ಎಷ್ಟು ದೇಣಿಗೆ ನೀಡಿದ್ದಾರೆ?

‘ಬೆಂಗಳೂರಿನ ಆಚೆ’ಗೂ  ಕೈಗಾರಿಕೆಗಳ ಅಭಿವೃದ್ಧಿಗೆ ಸಮಾನ ಕೊಡುಗೆ ನೀಡಲು ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮ ವಹಿವಾಟು ಆರಂಭಿಸಲು ಹಲವಾರು ಕಂಪನಿಗಳು ಆಸಕ್ತಿ ತೋರಿಸಿವೆ.  ವಿಜಯಪುರ, ಹುಬ್ಬಳ್ಳಿ – ಧಾರವಾಡ, ಬೆಳಗಾವಿ ಮತ್ತಿತರ ಸ್ಥಳಗಳಲ್ಲಿ  ಕೈಗಾರಿಕೆಗಳ ಸಮಾನ ಅಭಿವೃದ್ಧಿ ಸಾಧಿಸುವುದಕ್ಕೆ ಕೊಡುಗೆ ನೀಡುವ ಹಲವಾರು ಉಪಕ್ರಮಗಳನ್ನು ಹಮ್ಮಿಕೊಳ್ಳಲಿವೆ’ ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ: 
ಲುಲು ಗ್ರೂಪ್‌, ಬಿಎಲ್‌ ಅಗ್ರೊ ವಿಜಯಪುರದಲ್ಲಿ ತಮ್ಮ ನೆಲೆ ವಿಸ್ತರಿಸಲಿವೆ. ವಿಜಯಪುರದಲ್ಲಿ ₹ 300 ಕೋಟಿ ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸುವ ಉದ್ದೇಶಕ್ಕೆ ಬಂಡವಾಳ ಹೂಡಿಕೆ ಮಾಡಲು ಲುಲು ಸಮೂಹವು ಯೋಜಿಸಿದೆ. 

ಬಿಎಲ್‌ ಅಗ್ರೊ ಕಂಪನಿಯು ವಿಜಯಪುರದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣಾ ಘಟಕವನ್ನು ಆರಂಭಿಸಲಿದೆ.  ದೇಶಿ  ಮತ್ತು ರಫ್ತು ಮಾರುಕಟ್ಟೆಗಳಿಗೆ ಪೂರೈಸಲು ಸ್ಥಳೀಯ ಆಹಾರ ಉತ್ಪನ್ನಗಳನ್ನು  ಖರೀದಿಸಿ ಅವುಗಳ ಶ್ರೇಣೀಕರಣ, ವಿಂಗಡಣೆ ಮತ್ತು ಪ್ಯಾಕೇಜಿಂಗ್‌ ಉದ್ದೇಶಕ್ಕೆ ಈ ಘಟಕ ನೆರವಾಗಲಿದೆ.

ಇದನ್ನೂ ಓದಿ- ಚಿನ್ನ, ಬೆಳ್ಳಿ ಮೇಲಿನ ಆಮದು ಸುಂಕ ಏರಿಕೆ:ಬಂಗಾರದ ಬೆಲೆಯ ಮೇಲೆ ಆಗುವುದೇ ಪರಿಣಾಮ?

ಸ್ಮಾರ್ಟ್ ಸಿಟಿ ಮೂಲಸೌಲಭ್ಯ, ನವೀಕರಿಸಬಹುದಾದ ಇಂಧನ ಪರಿಹಾರಗಳು, ಡೇಟಾ ಕೇಂದ್ರಗಳು ಮತ್ತು ಸಂಬಂಧಿತ ವಲಯಗಳಲ್ಲಿ ವಿವಿಧ ಕಂಪನಿಗಳಿಂದ ಒಟ್ಟಾರೆ ₹3,000 ಕೋಟಿ  ಮೊತ್ತದ ಬಂಡವಾಳ ಹೂಡಿಕೆಯ ಒಳಹರಿವು ಕಂಡುಬಂದಿದೆ.

ಎಬಿ ಇನ್‌ಬೇವ್‌ ಇಂಡಿಯಾ ಕಂಪನಿಯು ಕರ್ನಾಟಕದಲ್ಲಿ ತನ್ನ ಮದ್ಯ ತಯಾರಿಕಾ ಘಟಕಗಳ ತಯಾರಿಕಾ ಸಾಮರ್ಥ್ಯ ಹೆಚ್ಚಿಸಲು ₹ 400 ಕೋಟಿ ಮೊತ್ತದ ಬಂಡವಾಳ ತೊಡಗಿಸುವ ಇಂಗಿತ ವ್ಯಕ್ತಪಡಿಸಿದೆ’ ಎಂದು ಸಚಿವರು ವಿವರ ನೀಡಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಎಸ್ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಶ್ರೀಮತಿ ಕಪೂರ್‌ಕೌರ್‌,  ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಿಇಒ ಡಾ. ಮಹೇಶ್‌ ಮತ್ತಿತರ ಉನ್ನತ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News