300 Unit Free Electricity : ಜನಸಾಮಾನ್ಯರಿಗೆ ಬಂಪರ್ ! ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್

300 Unit Free Electricity:ಬಜೆಟ್ ಭಾಷಣದ ವೇಳೆ ವಿತ್ತ ಸಚಿವ ಸೀತಾರಾಮನ್ ಅವರು ಒಂದು ಕೋಟಿ ಮನೆಗಳಿಗೆ ಸೌರಶಕ್ತಿ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲಾಗುವುದು . 

Written by - Ranjitha R K | Last Updated : Feb 1, 2024, 12:35 PM IST
  • ಒಂದು ಕೋಟಿ ಮನೆಗಳಿಗೆ ಸೌರಶಕ್ತಿ ಸೌಲಭ್ಯ
  • ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌
  • ಒಂದು ಕೋಟಿ ಮನೆಗಳಿಗೆ ಉಚಿತ ವಿದ್ಯುತ್
300 Unit Free Electricity : ಜನಸಾಮಾನ್ಯರಿಗೆ ಬಂಪರ್ ! ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್  title=

300 Unit Free Electricity : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024 ರ ಬಜೆಟ್ ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಹಣಕಾಸು ಸಚಿವರು ದೇಶದಲ್ಲಿ ಸೌರಶಕ್ತಿಗೆ ಉತ್ತೇಜನ ನೀಡುವುದಾಗಿ ಹೇಳಿದ್ದಾರೆ. ದರೊಂದಿಗೆ ದೇಶದಲ್ಲಿ ದುಬಾರಿ ವಿದ್ಯುತ್ ಸಮಸ್ಯೆ ನೀಗಿಸಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ. ಬಜೆಟ್ ಭಾಷಣದ ವೇಳೆ ವಿತ್ತ ಸಚಿವ ಸೀತಾರಾಮನ್ ಅವರು ಒಂದು ಕೋಟಿ ಮನೆಗಳಿಗೆ ಸೌರಶಕ್ತಿ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲಾಗುವುದು . 

ಒಂದು ಕೋಟಿ ಮನೆಗಳಿಗೆ ಉಚಿತ ವಿದ್ಯುತ್ :
ರೂಫ್ ಟಾಪ್ ಸೋಲಾರ್ ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇದು ದೇಶದ ವಿದ್ಯುತ್ ಸಮಸ್ಯೆಯನ್ನು ನಿಭಾಯಿಸಲು ಸಾಕಷ್ಟು ಸಹಾಯ ಮಾಡುತ್ತದೆ.

ಇದನ್ನೂ ಓದಿ : Union Budget 2024 : ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ..! ಮಹತ್ವದ ನಿರ್ಧಾರ ಪ್ರಕಟ

80 ಕೋಟಿ ಜನರಿಗೆ ಉಚಿತ ರೇಶನ್ :

ಜನ ಸಾಮಾನ್ಯರಿಗಾಗಿ ಮೋದಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಳೆದ 10 ವರ್ಷಗಳಲ್ಲಿ ಪ್ರತಿಯೊಬ್ಬರಿಗೂ ಈ ಯೋಜನೆಗಳು ತಲುಪುವಂತಾಗಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಿರ್ಮಲ ಸೀತಾರಾಮನ್ ಹೇಳಿದ್ದಾರೆ.    ಎಲ್ಲರಿಗೂ ಗ್ಯಾಸ್, ನೀರು, ಬ್ಯಾಂಕ್ ಖಾತೆ ಒದಗಿಸುವ  ಗುರಿಯನ್ನು ಸರ್ಕಾರ ಹೊಂದಿದೆ ಎಂದಿದ್ದಾರೆ. 80 ಕೋಟಿ ಜನರಿಗೆ ಉಚಿತ ಪಡಿತರ  ನೀಡಲಾಗುತ್ತಿದೆ ಎದ್ನು ಅವರು ಇದೇ ವೇಳೆ ಹೇಳಿದ್ದಾರೆ.  

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಪಡಿಸುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರ ಮುನ್ನಡೆಯುತ್ತಿದೆ. ಮೀನುಗಾರಿಕೆ ಉತ್ಪಾದನೆ ದ್ವಿಗುಣಗೊಂಡಿದೆ. 'ಮತ್ಸ್ಯ ಸಂಪದ ಯೋಜನೆ ಮೂಲಕ 55 ಲಕ್ಷ ಜನರಿಗೆ ಹೊಸ ಉದ್ಯೋಗ ಸಿಕ್ಕಿದೆ ಎಂದಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News