ಫ್ರೀ ರೇಶನ್ ಜೊತೆಗೆ ಈ ಸೌಲಭ್ಯ ಕೂಡಾ ಇನ್ನು ಸಂಪೂರ್ಣ ಉಚಿತ ! ಪಡಿತರ ಚೀಟಿದಾರರಿಗೆ ಜಾಕ್ ಪಾಟ್

Free Ration Scheme Update:  ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಉಚಿತ ಪಡಿತರ ಸೌಲಭ್ಯದ ಪ್ರಯೋಜನವನ್ನು ನೀವೂ ಪಡೆದುಕೊಳ್ಳುತ್ತಿದ್ದರೆ ಇನ್ನು ಮುಂದೆ ನಿಮಗೆ ಮತ್ತೊಂದು ಲಾಭ ಸಿಗಲಿದೆ.  

Written by - Ranjitha R K | Last Updated : Jul 4, 2023, 09:22 AM IST
  • ಉಚಿತ ಪಡಿತರವನ್ನು ಪಡೆದುಕೊಳ್ಳುವವರಿಗೆ ಮತ್ತೊಂದು ಸಿಹಿ ಸುದ್ದಿ.
  • ಸಿಗಲಿದೆ ಉಚಿತ ಚಿಕಿತ್ಸೆಯ ಲಾಭ
  • ಈಗಾಗಲೇ ಹೆಸರಿರುವವರಿಗೆ ಕಾರ್ಡ್‌ಗಳನ್ನು ಮಾಡಲಾಗುತ್ತಿದೆ
ಫ್ರೀ ರೇಶನ್ ಜೊತೆಗೆ ಈ ಸೌಲಭ್ಯ ಕೂಡಾ ಇನ್ನು ಸಂಪೂರ್ಣ ಉಚಿತ ! ಪಡಿತರ ಚೀಟಿದಾರರಿಗೆ ಜಾಕ್ ಪಾಟ್  title=

Free Ration Scheme Update : ಉಚಿತ ಪಡಿತರವನ್ನು  ಪಡೆದುಕೊಳ್ಳುವವರಿಗೆ ಮತ್ತೊಂದು ಸಿಹಿ ಸುದ್ದಿ. ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಉಚಿತ ಪಡಿತರ ಸೌಲಭ್ಯದ ಪ್ರಯೋಜನವನ್ನು ನೀವೂ ಪಡೆದುಕೊಳ್ಳುತ್ತಿದ್ದರೆ ಇನ್ನು ಮುಂದೆ ನಿಮಗೆ ಮತ್ತೊಂದು ಲಾಭ ಸಿಗಲಿದೆ. ಈ ವಿಚಾರವನ್ನು ಸರಕಾರವೇ ಪ್ರಕಟಿಸಿದೆ. ಸರ್ಕಾರದ ಯೋಜನೆಯ ಪ್ರಕಾರ, ಅಂತ್ಯೋದಯ ಕಾರ್ಡ್ ಹೊಂದಿರುವವರು ಉಚಿತ ಪಡಿತರ ಜೊತೆಗೆ ಉಚಿತ ಚಿಕಿತ್ಸೆಯ ಸೌಲಭ್ಯವನ್ನೂ ಪಡೆಯಲಿದ್ದಾರೆ. 

ಸಿಗಲಿದೆ ಉಚಿತ ಚಿಕಿತ್ಸೆಯ ಲಾಭ: 
ಅಂತ್ಯೋದಯ ಕಾರ್ಡ್ ಹೊಂದಿರುವ ಎಲ್ಲರಿಗೂ ಉಚಿತ ಚಿಕಿತ್ಸೆಯ ಸೌಲಭ್ಯ ಕಲ್ಪಿಸುವ ಸಲುವಾಗಿ ಆಯುಷ್ಮಾನ್ ಕಾರ್ಡ್‌ಗಳನ್ನು ಮಾಡಿಸಲಾಗುವುದು ಎಂದು ಸರ್ಕಾರ  ಹೇಳಿದೆ. ಇದಕ್ಕಾಗಿ ದೊಡ್ಡ ಮಟ್ಟದ ಪ್ರಚಾರ ನಡೆಸಲಾಗುತ್ತಿದೆ.

ಇದನ್ನೂ ಓದಿ : ನಾಲ್ಕು ತಿಂಗಳ ಬಳಿಕ ದುಬಾರಿಯಾಯಿತು LPG ದರ ! ಈಗ ಗ್ಯಾಸ್ ಸಿಲಿಂಡರ್ ಗೆ ಪಾವತಿ ಮಾಡಬೇಕಾಗಿರುವುದು ಇಷ್ಟು

ಜಿಲ್ಲಾ ಮಟ್ಟದಲ್ಲಿ ಆಂದೋಲನ : 
ಸರ್ಕಾರದ ವತಿಯಿಂದ ನೀಡಲಾಗುವ ಈ ಸೌಲಭ್ಯ ಅನೇಕ ಕೇಂದ್ರಗಳಲ್ಲಿ ಲಭ್ಯವಿದೆ.  ಸಾರ್ವಜನಿಕ ಸೌಕರ್ಯ ಕೇಂದ್ರದಲ್ಲಿ ಪಡಿತರ ಚೀಟಿ ತೋರಿಸಿ ಆಯುಷ್ಮಾನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಆಯುಷ್ಮಾನ್ ಕಾರ್ಡ್ ಮಾಡಿಸಲು ಆದೇಶ ನೀಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಈಗಾಗಲೇ ಹೇಳಿದೆ. ಈ ಅಭಿಯಾನವನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದೆ.

ಈಗಾಗಲೇ ಹೆಸರಿರುವವರಿಗೆ ಮಾಡಲಾಗುತ್ತಿದೆ ಕಾರ್ಡ್‌ :
ಸರ್ಕಾರದ ಈ ನಿರ್ಧಾರದ ಹಿನ್ನೆಲೆಯಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಕಾಯಿಲೆಗೆ ಚಿಕಿತ್ಸೆ ಪಡೆಯಲು ಯೋಚನೆ ಮಾಡಬೇಕಾಗಿಲ್ಲ. ಪ್ರಸ್ತುತ, ಸರ್ಕಾರದಿಂದ ಹೊಸ ಆಯುಷ್ಮಾನ್ ಕಾರ್ಡ್‌ಗಳನ್ನು ನೀಡಲಾಗುತ್ತಿಲ್ಲ. ಬದಲಿಗೆ ಈಗಾಗಲೇ ಪಟ್ಟಿಯಲ್ಲಿ ಹೆಸರಿರುವವರಿಗೆ ಕಾರ್ಡ್‌ಗಳನ್ನು ಮಾಡಿಸಲಾಗುತ್ತಿದೆ. 

ಇದನ್ನೂ ಓದಿ : 2,000 ರೂ. ಮುಖಬೆಲೆಯ ಶೇ.76ರಷ್ಟು ನೋಟುಗಳು ಬ್ಯಾಂಕ್‌ಗಳಿಗೆ ವಾಪಸ್: ಆರ್‌ಬಿಐ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News