ರೈಲ್ವೇ ನಿಲ್ದಾಣದಲ್ಲಿ ಉಚಿತ ವೈಫೈ ಕುರಿತ ಬಿಗ್ ಅಪ್ಡೇಟ್

Free Wifi: ಪ್ರಯಾಣಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯಗಳನ್ನು ರೈಲ್ವೇಯಿಂದ ಒದಗಿಸಲಾಗುತ್ತಿದೆ. ಇದರಿಂದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಭವವನ್ನು ಸುಧಾರಿಸಬಹುದು. ಇದೀಗ, ರೈಲ್ವೇ ನಿಲ್ದಾಣದಲ್ಲಿ ಉಚಿತ ವೈಫೈಗೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಮಾಹಿತಿ ನೀಡಿದ್ದಾರೆ. 

Written by - Yashaswini V | Last Updated : Oct 7, 2022, 09:53 AM IST
  • ಪ್ರಯಾಣಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆ ಇಲಾಖೆಯು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ.
  • ಇದರಿಂದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಭವವನ್ನು ಸುಧಾರಿಸಬಹುದು.
  • ಇದರಲ್ಲಿ ಪ್ರಯಾಣಿಕರಿಗೆ ಉಚಿತ ವೈ-ಫೈ ಸೌಲಭ್ಯವೂ ಸೇರಿದೆ.
ರೈಲ್ವೇ ನಿಲ್ದಾಣದಲ್ಲಿ ಉಚಿತ ವೈಫೈ ಕುರಿತ ಬಿಗ್ ಅಪ್ಡೇಟ್  title=
Free WiFi in railway stations

ಉಚಿತ ವೈಫೈ:  ಆರಾಮವಾಗಿ ಪ್ರಯಾಣಿಸಲು ರೈಲು ಪ್ರಯಾಣ ತುಂಬಾ ಅನುಕೂಲಕರ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಪ್ರತಿದಿನ ಲಕ್ಷಾಂತರ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ.  ಅಲ್ಲದೆ, ರೈಲುಮಾರ್ಗದ ಮೂಲಕ ಪ್ರಯಾಣ ಮಾಡುವುದು ಇತರ ಪ್ರಯಾಣದ ವಿಧಾನಗಳಿಗಿಂತ ಆರ್ಥಿಕ ದೃಷ್ಟಿಯಿಂದಲೂ ಸಹಕಾರಿ ಆಗಿದೆ. ಭಾರತೀಯ ರೈಲ್ವೆ ಸಹ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ಸೌಲಭ್ಯಗಳನ್ನು ಒದಗಿಸುತ್ತಲೇ ಇರುತ್ತದೆ. ಇದೀಗ, ರೈಲ್ವೇ ನಿಲ್ದಾಣದಲ್ಲಿ ಉಚಿತ ವೈಫೈಗೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಮಾಹಿತಿ ನೀಡಿದ್ದಾರೆ. 

ವಾಸ್ತವವಾಗಿ, ಪ್ರಯಾಣಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆ ಇಲಾಖೆಯು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದರಿಂದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಅನುಭವವನ್ನು ಸುಧಾರಿಸಬಹುದು. ಇದರಲ್ಲಿ ಪ್ರಯಾಣಿಕರಿಗೆ ಉಚಿತ ವೈ-ಫೈ ಸೌಲಭ್ಯವೂ ಸೇರಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಸ್ಮಾರ್ಟ್ಫೋನ್ ಬಳಸುತ್ತಾರೆ. ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ ಸೌಲಭ್ಯವನ್ನೂ ಆರಂಭಿಸಲಾಗಿದೆ. 

ಇದನ್ನೂ ಓದಿ- ಕಿಸಾನ್ ಕ್ರೆಡಿಟ್ ಕಾರ್ಡ್‌ಗಾಗಿ ಬ್ಯಾಂಕ್ ಸುತ್ತುವ ಅವಶ್ಯಕತೆ ಇಲ್ಲ, ಮೊಬೈಲ್‌ನಿಂದ ಈ ಕೆಲಸ ಮಾಡಿದರಷ್ಟೇ ಸಾಕು

ಹೆಚ್ಚಿನ ವೇಗದ ವೈಫೈ: 
ರೈಲ್ವೇ ನಿಲ್ದಾಣದಲ್ಲಿ ಉಚಿತ ವೈಫೈ ಸೇವೆಯ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಟ್ವೀಟ್ ಮಾಡುವ ಮೂಲಕ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಮೂಲಕ, ರೈಲ್ವೇ ಸಚಿವಾಲಯದ 6105 ರೈಲು ನಿಲ್ದಾಣಗಳಲ್ಲಿ ಜನರಿಗೆ ಉಚಿತ ವೈಫೈ ಸೌಲಭ್ಯ ಲಭ್ಯವಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಅಲ್ಲದೆ, ವೈಫೈ ಸೌಲಭ್ಯವು ಅತ್ಯಂತ ಸುರಕ್ಷಿತ ಮತ್ತು ಹೆಚ್ಚಿನ ವೇಗವಾಗಿದೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ- SBI: ವಿಶೇಷ ನಿಶ್ಚಿತ ಠೇವಣಿ ಯೋಜನೆ ಅನ್ನು ಮಾರ್ಚ್ 31, 2023 ರವರೆಗೆ ವಿಸ್ತರಿಸಿದ ಎಸ್‌ಬಿಐ

ವಾಸ್ತವವಾಗಿ, ದೇಶದಲ್ಲಿ 7 ಸಾವಿರಕ್ಕೂ ಹೆಚ್ಚು ರೈಲು ನಿಲ್ದಾಣಗಳಿವೆ, ಅವುಗಳಲ್ಲಿ 6 ಸಾವಿರಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಉಚಿತ ವೈಫೈ ಸೌಲಭ್ಯವಿದೆ ಮತ್ತು ಉಚಿತ ವೈಫೈ ನಿಲ್ದಾಣಗಳ ಸಂಖ್ಯೆಯನ್ನು ನಿರಂತರವಾಗಿ ಹೆಚ್ಚಿಸಲು ರೈಲ್ವೆಯು ಪ್ರಯತ್ನಿಸುತ್ತಿದೆ ಎಂಬುದು ಗಮನಾರ್ಹ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News