Karnataka Budget 2024: ಮಹಿಳೆಯರ ಸ್ವಾವಲಂಬನೆಗಾಗಿ ಗ್ರಾಮೀಣ ಭಾಗಗಳಲ್ಲಿ ಕೆಫೆಸಂಜೀವಿನಿ

Karnataka Budget 2024: ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ.  ವೆಚ್ಚಮಾಡಿ 50 ಕೆಫೆಗಳನ

Written by - Yashaswini V | Last Updated : Feb 16, 2024, 12:54 PM IST
  • ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
  • ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುವುದು.
Karnataka Budget 2024: ಮಹಿಳೆಯರ ಸ್ವಾವಲಂಬನೆಗಾಗಿ ಗ್ರಾಮೀಣ ಭಾಗಗಳಲ್ಲಿ ಕೆಫೆಸಂಜೀವಿನಿ  title=

Latest news on Karnataka state budget 2024: ಗ್ರಾಮೀಣ ಪ್ರದೇಶದಲ್ಲಿ  ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಈ ಘೋಷಣೆ ಮಾಡಿರುವುದಕ್ಕೆ  ವೈದ್ಯಕೀಯ ಶಿಕ್ಷಣ ಜೀವನೋಪಾಯ  ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 
 
ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ.  ವೆಚ್ಚಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನ ೆನೀಡಿದರು. 
 
ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿಕಿಯೋಕ್ಸ್‍ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆ ಎಂದರು. 

ಇದನ್ನೂ ಓದಿ- Karnataka Budget 2024: ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುವುದು. 
 
ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವಕೋರ್ಸ್‍ಗಳಲ್ಲಿ ವಿಷಯಾಧಾರಿತ ಉದ್ಯಮಶೀಲತೆ ಅಭಿವೃದ್ಧಿತರಬೇತಿಯನ್ನು 25 ಸಾವಿರ ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು ಎಂದು  ಹೇಳಿದರು. 
 
ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆಉದ್ಯೋಗ ಆಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರಲು ಯುವ ಸಮೃದ್ಧಿ ಉದ್ಯೋಗ ಮೇಳವನ್ನುರಾಜ್ಯದ ವಿವಿಧ ಭಾಗದಲ್ಲೂ ಆಯೋಜಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. 

ಕೈಗಾರಿಕೆ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯಸಂಡೂರಿನಲ್ಲಿ  ಸ್ಕಿಲ್ ಅಕಾಡೆಮಿ ಸ್ಥಾಪನೆ, ಜಿಟಿಟಿಸಿ ಬಹು ಕೌಶಲ್ಯಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತುಮೈಸೂರಿನ ವರುಣಾದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆಮಾಡುವುದಾಗಿ ಹೇಳಿದ್ದಾರೆ.  ಮೊದಲ ಹಂತದ ಯೋಜನೆಯನ್ನು ಮೂರು ವರ್ಷಗಳ  ಅವಧಿಯಲ್ಲಿ ಅಂದಾಜು 120 ಕೋಟಿ ರೂ.ಅನುಷ್ಠಾನ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. 
 
ಬಳ್ಳಾರಿ ಮತ್ತು  ಚಿತ್ರದುರ್ಗದಲ್ಲಿ  ಜಿಲ್ಲಾ ಖನಿಜ ನಿಧಿಯ ಮೂಲಕಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್  ಸಹಯೋಗದೊಂದಿಗೆ 150  ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಪ್ರಾರಂಭ ಮಾಡುವುದಾಗಿ ತಿಳಿಸಿದ್ದಾರೆ. 

ಇದನ್ನೂ ಓದಿ- Karnataka Budget: ಸಿಲಿಕಾನ್ ಸಿಟಿಯನ್ನು ವಿಶ್ವದರ್ಜೆಗೇರಿಸಲು ಬ್ರಾಂಡ್‌ ಬೆಂಗಳೂರು ಪರಿಕಲ್ಪನೆ

ಎಲೆಕ್ಟ್ರಾನಿಕ್ಸ್ ಮತ್ತು ಕಮುನಿಕೇಷನ್, ಮೆಕ್ಯಾಟ್ರಾನಿಕ್ಸ್‍, ಎಲೆಕ್ಟ್ರಿಕಲ್ಸ್ , ಎಲೆಕ್ಟ್ರಾನಿಕ್ಸ್‍, ಎಂಜನಿಯರಿಂಗ್, ರೋಬೊಟೆಕ್ಸ್‍ಘಿ ಇತ್ಯಾದಿಹೆಚ್ಚುವರಿ ಡಿಪ್ಲೊಮಾ ಕೋರ್ಸ್‍ಗಳನ್ನು ಜಿಟಿಟಿಸಿ ಮಾದರಿಯಲ್ಲಿ ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ 15 ಸಾವಿರವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದು ಅಭಿಪ್ರಾಯಪಟ್ಟಿದ್ದಾರೆ. 
 
ಕಲಬುರಗಿಯ ಕೆಜಿಟಿಟಿಐನಲ್ಲಿ ಸಿಎನ್‍ಸಿ ಯಂತ್ರವನ್ನುಕೇಂದ್ರೀಕರಿಸುವ ಮೊದಲ ಜೇಷ್ಠತಾ ಕೇಂದ್ರವನ್ನು 16 ಕೋಟಿ ವೆಚ್ಚದಲ್ಲಿ ಸ್ಥಾಪನೆ, ಐಟಿಐ ಜಿಟಿಟಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂಹನ ತರಬೇತಿಗೆ 5 ಕೋಟಿ ನೀಡಲಾಗುವುದು, ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು  ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ   ಯುವ ಪ್ರತಿಕ್ಷಣಾರ್ಥಿಗಲನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್‍ನ್ನು ಆಯೋಜಿಸಲಾಗುವುದು ಎಂದುತಿಳಿಸಿದ್ದಾರೆ.
 
ಉದ್ಯೋಗ ಶೀಲತೆಯನ್ನು ಹೆಚ್ಚಿಸಲು ಡೂಯಲ್ ಸಿಸ್ಟಮ್ ಆïಟ್ರೈನಿಂಗ್(ಡಿಎಸ್‍ಟಿ)ನ್ನು ರಾಜ್ಯದ ಎಲ್ಲಾ ಐಟಿಐಗಳಲ್ಲಿ ಕೈಗಾರಿಕೆಗಳುಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿವಿಸ್ತರಿಸಲಾಗುವುದು ಎಂದಿದ್ದಾರೆ. 
 
ಒಂದು ಲಕ್ಷ ಮಹಿಳಾ ಸ್ವಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಟುಕ, ಕುರಿ, ಮೇಕೆ ಸಾಗಾಣಿಕೆ, ಜೇನು ಸಾಕಾಣಿಕೆ ಮತ್ತು ಕಿರುಉದ್ಯಮ ಸ್ಥಾಪಿಸಲು 100 ಕೋಟಿ  ವೆಚ್ಚ ಮಾಡುವುದಾಗಿಹೇಳಿರುವುದು ಸ್ವಾಗತಾರ್ಹ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News