Govt Jobs: PUC ಪಾಸಾದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

SSC Stenographer Jobs: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Written by - Puttaraj K Alur | Last Updated : Aug 11, 2023, 05:06 PM IST
  • ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಹುದ್ದೆಗಳ ನೇಮಕಾತಿ
  • ಸ್ಟೆನೋಗ್ರಾಫರ್ ಗ್ರೇಡ್ 'ಸಿ' ಮತ್ತು 'ಡಿ' ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
  • 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
Govt Jobs: PUC ಪಾಸಾದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ title=
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್ 'ಸಿ' ಮತ್ತು 'ಡಿ' ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಗಸ್ಟ್ 23ರೊಳಗೆ https://ssc.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕೆ ಲೋಕಸಭಾದಿಂದ ಕಾಂಗ್ರೆಸ್‌ನ ಅಧೀರ್ ಚೌಧರಿ ಅಮಾನತು

ನೇಮಕಾತಿಯ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ : 02-08-2023

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 23-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 24-08- 2023

SSC ಸ್ಟೆನೋಗ್ರಾಫರ್ ಪರೀಕ್ಷೆ ದಿನಾಂಕ: 2023ರ ಅಕ್ಟೋಬರ್ 12 ಮತ್ತು 13  

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ 080-25502520 ಸಂಖ್ಯೆಗೆ ಕರೆ ಮಾಡಬಹುದು. ಸೋಮವಾರದಿಂದ ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ SSC ಮುಖ್ಯ ಕಚೇರಿಯ ವೆಬ್‍ಸೈಟ್‍ https://ssc.nic.in ಮತ್ತು SSC ಬೆಂಗಳೂರಿನ ಸ್ಥಳೀಯ ಕಚೇರಿಯ ವೆಬ್‍ಸೈಟ್‍ www.ssckkr.kar.nic.in ನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: Weird News: 70 ಸಾವಿರ ಕೊಟ್ಟು ಹೆಣ್ಣು ಖರೀದಿಸಿ ಮದುವೆಯಾಗಿ ಕೊಂದ..!  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News