Horticulture Department: ತೋಟಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ರೈತರಿಂದ ಅರ್ಜಿ ಆಹ್ವಾನ

 ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹಾಂತೇಶ ಅವರು ತಿಳಿಸಿದ್ದಾರೆ.

Written by - Manjunath N | Last Updated : Mar 27, 2024, 12:16 AM IST
  • ಪ್ರಧಾನಮಂತ್ರಿ ಕೃಷಿ ಸಿಂಚಾಯನ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯವನ್ನು ನೀಡಲಾಗುವುದು
  • ಅರ್ಹ ರೈತರು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Horticulture Department: ತೋಟಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ರೈತರಿಂದ ಅರ್ಜಿ ಆಹ್ವಾನ title=

ಬಳ್ಳಾರಿ: ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿಗಾಗಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಡಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ (ಜಿಪಂ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹಾಂತೇಶ ಅವರು ತಿಳಿಸಿದ್ದಾರೆ.

ಸೌಲಭ್ಯಗಳು:

ಫಲಾನುಭವಿ ಆಧಾರಿತ ನರೇಗಾ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಣ್ಣ, ಅತಿ ಸಣ್ಣ ರೈತರಿಗೆ ಬಾಳೆ, ಅಂಜೂರ, ತಾಳೆಬೆಳೆ, ದಾಳಿಂಬೆ, ಸಪೋಟ, ಮಾವು, ನುಗ್ಗೆ, ತೆಂಗು, ಪಪ್ಪಾಯ ಮತ್ತು ಪೇರಲ ಬೆಳೆಗಳನ್ನು ಬೆಳೆಯಲು ಹಾಗೂ ಕೊಳವೆ ಬಾಯಿ ಮರುಪೂರ್ಣ ಘಟಕ ಮಾಡಲು ಸಹಾಯಧನ ನೀಡಲಾಗುವುದು.

ಇದನ್ನೂ ಓದಿ-The Great Indian Kapil Show ಟ್ರೇಲರ್ ಬಿಡುಗಡೆ, ಷೋಗೆ ಗುಥ್ಥಿ ಪಾತ್ರದ ಮರುಪ್ರವೇಶ!

ನೀರಾವರಿ ಸೌಕರ್ಯವುಳ್ಳ ರೈತರು ತಮ್ಮ ಜಮೀನುಗಳಲ್ಲಿ ಕಾಮಗಾರಿ ಕೈಗೊಂಡಲ್ಲಿ ನರೇಗಾ ಯೋಜನೆಯ ಅನುದಾನ ಬಳಸಿ ಕೂಲಿ ಮೊತ್ತವನ್ನು ಮತ್ತು ಸಾಮಗ್ರಿ ವೆಚ್ಚವನ್ನು ಆನ್‍ಲೈನ್ ಮೂಲಕ ಪಾವತಿ ಮಾಡಲಾಗುತ್ತದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿಹೊಂಡ, ಹೊಸ ಪ್ರದೇಶ ವಿಸ್ತರಣೆ, ದಾಳಿಂಬೆ, ಅಂಜೂರ, ಈರುಳ್ಳಿ ಶೇಖರಣಾ ಘಟಕ, ಪಾಲಿಹೌಸ್ ನಿರ್ಮಾಣ ಮಾಡಿಕೊಳ್ಳಲು ಸಹಾಯಧನ ನೀಡಲಾಗುವುದು.

ಪ್ರಧಾನಮಂತ್ರಿ ಕೃಷಿ ಸಿಂಚಾಯನ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯವನ್ನು ನೀಡಲಾಗುವುದು.ಅರ್ಹ ರೈತರು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News