Job Alert: 513 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ

Job Openings in Kolar: ಕೋಲಾರದ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

Written by - Puttaraj K Alur | Last Updated : Mar 16, 2024, 10:15 PM IST
  • ಕೋಲಾರದ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ
  • ಒಟ್ಟು 513 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ
  • ಅಂಗನವಾಡಿ ಕಾರ್ಯಕರ್ತೆಗೆ 12ನೇ ತರಗತಿ, SSLC & ಅಂಗನವಾಡಿ ಸಹಾಯಕಿಗೆ 10ನೇ ತರಗತಿ ಪಾಸಾಗಿರಬೇಕು
Job Alert: 513 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ  title=
Job Openings

Women and Child Development Department Kolar Job: ಕೋಲಾರದ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 513 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಮಾಹಿತಿ: 120 ಅಂಗನವಾಡಿ ಕಾರ್ಯಕರ್ತೆಯರು ಮತ್ತು 393 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. 

ಇದನ್ನೂ ಓದಿ: Lok Sabha Elections 2024: NDA 400 ಅಂಕ ತಲುಪುವುದು ಕಷ್ಟಸಾಧ್ಯ, ಪ್ರತಿಪಕ್ಷಗಳಿಗೆ ಎಷ್ಟು ಸ್ಥಾನ? ಇಲ್ಲಿದೆ ಶಾಕಿಂಗ್ ಸಮೀಕ್ಷೆ!

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ, SSLC ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ

ಉದ್ಯೋಗದ ಸ್ಥಳ: ಕೋಲಾರ

ವಯೋಮಿತಿ: ಕೋಲಾರದ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಮೆರಿಟ್ ಲಿಸ್ಟ್​ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಲಿಂಕ್‌ https://karnemakaone.kar.nic.in/abcd/home.aspx ಮೇಲೆ ಕ್ಲಿಕ್‌ ಮಾಡಿ ನೇರವಾಗಿ ಅರ್ಜಿ ಸಲ್ಲಿಸಹುದು. ಏಪ್ರಿಲ್​ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.  

ಇದನ್ನೂ ಓದಿ: CAA: ಮೋದಿ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ‘ಲೋಕ’ ಚುನಾವಣೆಗೂ ಮುನ್ನ ಬ್ರಹ್ಮಾಸ್ತ್ರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News