Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

BBMP Recruitment 2024: ಈ ನೇಮಕಾತಿಯಡಿ 905 ಸ್ಥಳೀಯ ವೃಂದದ ಹುದ್ದೆಗಳು(KK) ಕಲ್ಯಾಣ ಕರ್ನಾಟಕ ಹುದ್ದೆಗಳು ಮತ್ತು 10,402 ಉಳಿಕೆ ಮೂಲ ವೃಂದದ ಹುದ್ದೆಗಳು (RPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Written by - Puttaraj K Alur | Last Updated : Apr 21, 2024, 01:31 PM IST
  • ಬಿಬಿಎಂಪಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
  • ಒಟ್ಟು 11,307 ಪೌರಕಾರ್ಮಿಕ-ಗ್ರೂಪ್​ ಡಿ ಹುದ್ದೆಗಳ ಭರ್ತಿಗೆ ನೇಮಕಾತಿ
  • 905 ಸ್ಥಳೀಯ ವೃಂದದ ಕಲ್ಯಾಣ ಕರ್ನಾಟಕ ಮತ್ತು 10,402 ಉಳಿಕೆ ಮೂಲ ವೃಂದದ ಹುದ್ದೆಗಳು
Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ  title=
BBMP Recruitment 2024

BBMP Recruitment 2024: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 11,307 ಪೌರಕಾರ್ಮಿಕ-ಗ್ರೂಪ್​ ಡಿ(Group D) ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್/ಪೋಸ್ಟ್​​ ​ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಮಾಹಿತಿ: ನೇಮಕಾತಿ ಮೂಲಕ 905 ಸ್ಥಳೀಯ ವೃಂದದ ಹುದ್ದೆಗಳು(KK) ಕಲ್ಯಾಣ ಕರ್ನಾಟಕ ಹುದ್ದೆಗಳು ಮತ್ತು 10,402 ಉಳಿಕೆ ಮೂಲ ವೃಂದದ ಹುದ್ದೆಗಳು (RPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಇದನ್ನೂ ಓದಿ: Voter ID ಕಳೆದುಹೋಗಿದೆಯೇ? ಈ ದಾಖಲೆಗಳನ್ನು ನೀಡಿ ಮತ ಚಲಾಯಿಸಬಹುದು!

ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಯಾವುದೇ ಶೈಕ್ಷಣಿಕ ಅರ್ಹತೆ ಇರಬೇಕೆಂದು ಬಿಬಿಎಂಪಿ ತಿಳಿಸಿಲ್ಲ. ಆದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. 

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು.

ವೇತನ: ಗ್ರೂಪ್​ ʼಡಿʼ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000-28,950 ರೂ. ಸಂಬಳ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಬೆಂಗಳೂರು

ಇದನ್ನೂ ಓದಿ: Loksabha election 2024 : ವಿಶೇಷ ಡೂಡಲ್ ಮೂಲಕ ಮತದಾನದ ಹಬ್ಬ ಸಂಭ್ರಮಿಸಿದ ಗೂಗಲ್

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮಹಾನಗರ ಪಾಲಿಕೆ ಕಚೇರಿಗಳು, ನರಸಿಂಹರಾಜ ಚೌಕ್, ಬೆಂಗಳೂರು-560002 ಈ ವಿಳಾಸಕ್ಕೆ ಕಳುಹಿಸಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News