JOB ALERT: ಹಟ್ಟಿ ಚಿನ್ನದ ಗಣಿಯಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿರಿ

Job Openings In Raichur: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ, ಬಿಎಸ್ಸಿ, ಐಟಿಐ, ಪದವಿ, 12ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.

Written by - Puttaraj K Alur | Last Updated : Mar 20, 2024, 11:39 PM IST
  • ರಾಯಚೂರು ಜಿಲ್ಲೆಯ ಲಿಂಗಸೂರಿನಲ್ಲಿರುವ ಹಟ್ಟಿ ಚಿನ್ನದ ಗಣಿಯಲ್ಲಿ ಉದ್ಯೋಗಾವಕಾಶ
  • ಸಹಾಯಕ ಫೋರ್ಮೆನ್​​​, ಐಟಿಐ ಫಿಟ್ಟರ್​​ನ ಒಟ್ಟು 168 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಸರ್ಕಾರಿ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶ ಸದುಪಯೋಗಪಡಿಸಿಕೊಳ್ಳಿರಿ
JOB ALERT: ಹಟ್ಟಿ ಚಿನ್ನದ ಗಣಿಯಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿರಿ title=
Job Openings In Raichur

Job Openings in Raichur: ರಾಯಚೂರು ಜಿಲ್ಲೆಯ ಲಿಂಗಸೂರಿನಲ್ಲಿರುವ ರಾಜ್ಯ ಸರ್ಕಾರದ ಅಧೀನದ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 

ಸಹಾಯಕ ಫೋರ್ಮೆನ್​​​, ಐಟಿಐ ಫಿಟ್ಟರ್​​ನ ಒಟ್ಟು 168 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರಿ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಇದನ್ನೂ ಓದಿ: Lok Sabha Election 2024: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ, ಬಿಎಸ್ಸಿ, ಐಟಿಐ, ಪದವಿ, 12ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷ. SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. SC/ST, ಪ್ರವರ್ಗ 1, ನಿವೃತ್ತ ಸೇವಾನೌಕರರು, ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ಮತ್ತು ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್​ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಮಾರ್ಚ್​​ 19ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 3 ಆಗಿದೆ. ಈ ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ huttigold.karnataka.gov.in ಭೇಟಿ ನೀಡಬಹುದು.

ಇದನ್ನೂ ಓದಿ: Lok Sabha Election 2024: ಲೋಕಸಭೆ ಚುನಾವಣೆಗೆ 21 ರಾಜ್ಯಗಳ 102 ಸ್ಥಾನಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News