KCET Result 2024 : ಸಿಇಟಿ ಫಲಿತಾಂಶಕ್ಕೆ ಡೇಟ್‌ ಫಿಕ್ಸ್..‌ ರಿಸಲ್ಟ್ ಚೆಕ್‌ ಮಾಡುವ ವಿಧಾನ ಇಲ್ಲಿದೆ

Karnataka KCET Result 2024 Date, Time: ಕರ್ನಾಟಕ ಕಾಮನ್ ಎಂಟ್ರನ್ಸ್‌ ಟೆಸ್ಟ್‌ ರಿಸಲ್ಟ್‌ ಚೆಕ್‌ ಮಾಡುವ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ. ಸಿಇಟಿ ಫಲಿತಾಂಶದ ನಂತರ ಕೌನ್ಸಿಲಿಂಗ್ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

Written by - Chetana Devarmani | Last Updated : May 23, 2024, 03:00 PM IST
  • ಕೆಸಿಇಟಿ ಫಲಿತಾಂಶಕ್ಕೆ ಡೇಟ್‌ ಫಿಕ್ಸ್‌
  • ಕರ್ನಾಟಕ ಕಾಮನ್ ಎಂಟ್ರನ್ಸ್‌ ಟೆಸ್ಟ್‌
  • ಸಿಇಟಿ ಫಲಿತಾಂಶ ಚೆಕ್‌ ಮಾಡುವ ವಿಧಾನ ಇಲ್ಲಿದೆ
KCET Result 2024 : ಸಿಇಟಿ ಫಲಿತಾಂಶಕ್ಕೆ ಡೇಟ್‌ ಫಿಕ್ಸ್..‌ ರಿಸಲ್ಟ್ ಚೆಕ್‌ ಮಾಡುವ ವಿಧಾನ ಇಲ್ಲಿದೆ  title=

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2024 ರ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಫಲಿತಾಂಶಗಳನ್ನು ಶೀಘ್ರದಲ್ಲೇ ಪ್ರಕಟಿಸಲಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು KEA ಅಧಿಕೃತ ವೆಬ್‌ಸೈಟ್ cetonline.karnataka.gov.in ಮೂಲಕ ತಮ್ಮ ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು.  

2024-25 ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ನಡೆಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಬೋರ್ಡ್‌ನ ದ್ವಿತೀಯ ಪಿಯುಸಿ ಪರೀಕ್ಷೆ 2 ಫಲಿತಾಂಶ ಬಂದ ನಂತರ ಜೂನ್‌ 1 ಅಥವಾ 3 ರಂದು ಸಿಇಟಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಹೇಳಿತ್ತು. 12ನೇ ತರಗತಿಯ ಶೇಕಡ.50 ಅಂಕಗಳನ್ನು ಪರಿಗಣಿಸಿ KCET 2024 Ranking ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿತ್ತು. 

ಇದನ್ನೂ ಓದಿ: JEE ಅಡ್ವಾನ್ಸ್ಡ್ 2024 ಪ್ರವೇಶ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ..! ಇಲ್ಲಿದೆ ಸಂಪೂರ್ಣ ವಿವರ

ಈ ಅರ್ಹತಾ ಪರೀಕ್ಷೆಯ ರಿಸಲ್ಟ್‌ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 18, 19 ರಂದು ಸಿಇಟಿ ಪರೀಕ್ಷೆ ನಡೆಸಿತ್ತು. ಇದರ ಫಲಿತಾಂಶವು ಜೂನ್‌ 1 ಅಥವಾ 3 ರಂದು ಪ್ರಕಟವಾಗಲಿದೆ. ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ತಮ್ಮ ಸಿಇಟಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕದ ಮಾಹಿತಿ ನೀಡಿ ಲಾಗಿನ್ ಆಗಿ ರಿಸಲ್ಟ್‌ ಚೆಕ್‌ ಮಾಡಬಹುದು.

KCET 2024 ಫಲಿತಾಂಶಗಳನ್ನು ಡೌನ್‌ಲೋಡ್ ಮಾಡುವುದು ಹೇಗೆ? 

ಹಂತ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಪೋರ್ಟಲ್ https://cetonline.karnataka.gov.in/kea ಗೆ ಹೋಗಿ.

ಹಂತ 2: ಮುಖಪುಟದಲ್ಲಿ "KCET ಫಲಿತಾಂಶಗಳು 2024" ಎಂದು ಲೇಬಲ್ ಮಾಡಲಾದ ಲಿಂಕ್ ಅನ್ನು ಹುಡುಕಿ ಮತ್ತು ಕ್ಲಿಕ್ ಮಾಡಿ.

ಹಂತ 3: ಗೊತ್ತುಪಡಿಸಿದ ಕ್ಷೇತ್ರಗಳಲ್ಲಿ ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳೊಂದಿಗೆ ನಿಮ್ಮ KCET ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

ಹಂತ 4: ಮುಂದುವರೆಯಲು "Submit" ಮೇಲೆ ಕ್ಲಿಕ್ ಮಾಡಿ.

ಹಂತ 5: 2024 ರ ನಿಮ್ಮ KCET ಫಲಿತಾಂಶವನ್ನು ಪರದೆಯ ಮೇಲೆ ಬರುತ್ತದೆ.

ಹಂತ 6: ಈ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಂಡು, ಪ್ರಿಂಟ್‌ಔಟ್‌ ತೆಗೆದಿಟ್ಟುಕೊಳ್ಳಿ.

ಇದನ್ನೂ ಓದಿ:ಎನ್‌ಐಎ ಮಾಜಿ ಡಿಜಿ ದಿನಕರ್ ಗುಪ್ತಾ ಅವರಿಗೆ 'ಝಡ್-ಪ್ಲಸ್' ವರ್ಗದ ವಿಐಪಿ ಭದ್ರತೆ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News