ರಾಜ್ಯದ 5, 8, 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

Public Exam For 5th, 8th, 9th Class: ಶೈಕ್ಷಣಿಕ ವರ್ಷ 2023-24ರಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸನ್ನದ್ದವಾಗಿರುವ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ 2024ರ ಮಾರ್ಚ್ ನಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಯೋಜಿಸಿದೆ. 

Written by - Yashaswini V | Last Updated : Dec 27, 2023, 10:27 AM IST
  • 2024ರ ಮಾರ್ಚ್ ನಲ್ಲಿ ಪಬ್ಲಿಕ್ ಪರೀಕ್ಷಾ ವೇಳಾಪಟ್ಟಿ ಪ್ರಕಟ
  • ಮಾರ್ಚ್ 11 ರಿಂದ 18 ರವರೆಗೆ ನಡೆಯಲಿರುವ ಪಬ್ಲಿಕ್ ಪರೀಕ್ಷೆ
  • ಹೀಗಾಗಿ ಪರೀಕ್ಷೆಗೆ ಸಜ್ಜಾಗುವಂತೆ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಸೂಚನೆ
ರಾಜ್ಯದ 5, 8, 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಪ್ರಕಟ title=

Public Exam For 5th, 8th, 9th Class State Board: ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5, 8 ಮತ್ತು 9ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಿರುವ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. 

ಶೈಕ್ಷಣಿಕ ವರ್ಷ 2023-24ರಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಸನ್ನದ್ದವಾಗಿರುವ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ 2024ರ ಮಾರ್ಚ್ ನಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಯೋಜಿಸಿದೆ. ವೇಳಾಪಟ್ಟಿಯ ಪ್ರಕಾರ, ಮಾರ್ಚ್ 11 ರಿಂದ 18 ರವರೆಗೆ ಪಬ್ಲಿಕ್ ಪರೀಕ್ಷೆ ನಡೆಯಲಿದೆ. ಹೀಗಾಗಿ ಪರೀಕ್ಷೆಗೆ ಸಜ್ಜಾಗುವಂತೆ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಸೂಚನೆ ನೀಡಿದೆ. 

ಇದನ್ನೂ ಓದಿ- ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಸಿದ್ದರಾಮಯ್ಯ ಚಾಲನೆ

ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ಅಧಿಕೃತ ವೆಬ್‌ಸೈಟ್‌ನಲ್ಲೂ ಕಾಣಬಹುದು. ಗಮನಾರ್ಹವಾಗಿ,  5, 8 ಮತ್ತು 9ನೇ ತರಗತಿಗಳಿಗಾಗಿ ನಡೆಯಲಿರುವ ಪಬ್ಲಿಕ್ ಪರೀಕ್ಷೆಗೆ ಈ ಬಾರಿ ಪರೀಕ್ಷಾ ಮಂಡಳಿಯೇ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲಿದೆ.  

5, 8, 9ನೇ ತರಗತಿಗಳಿಗಾಗಿ ಪಬ್ಲಿಕ್ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಕಂಡಂತಿದೆ:- 
5 ನೇ ತರಗತಿ ಪಬ್ಲಿಕ್ ಪರೀಕ್ಷಾ ವೇಳಾ ಪಟ್ಟಿ ದಿನಾಂಕ ಮತ್ತು ಸಮಯ: 

ಮಾ.11- ಪ್ರಥಮ ಭಾಷೆ ಕನ್ನಡ
ಮಾ.12 ದ್ವಿತೀಯ ಭಾಷೆ ಇಂಗ್ಲಿಷ್
ಮಾ.13 ಪರಿಸರ ಅಧ್ಯಯನ
ಮಾ.14ರಂದು ಗಣಿತ ಪರೀಕ್ಷೆ ನಡೆಯಲಿದೆ.
ಈ ಎಲ್ಲ ಪರೀಕ್ಷೆಗಳು ಮಧ್ಯಾಹ್ನ 2.30ರಿಂದ 4.30ರ ವರೆಗೆ ನಡೆಯಲಿವೆ.

ಇದನ್ನೂ ಓದಿ- GK Quiz: ಏಷ್ಯಾದ ಲಾಸ್ ವೇಗಾಸ್ ಎಂದು ಕರೆಯಲ್ಪಡುವ ನಗರ ಯಾವುದು?

8-9 ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಮತ್ತು ಸಮಯ
ಮಾ.11 ಪ್ರಥಮ ಭಾಷೆ ಕನ್ನಡ, 
ಮಾ.12 ದ್ವಿತೀಯ ಭಾಷೆ ಇಂಗ್ಲಿಷ್
ಮಾ.13 ತೃತೀಯ ಭಾಷೆ ಹಿಂದಿ
 ಮಾ.14 ಗಣಿತ
ಮಾ.15 ವಿಜ್ಞಾನ
ಮಾ.16 ಸಮಾಜ ವಿಜ್ಞಾನ
ಮಾ.18ರಂದು ದೈಹಿಕ ಶಿಕ್ಷಣ
ಈ ಪರೀಕ್ಷೆಗಳು ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News