Government Job: 10ನೇ ತರಗತಿ ಪಾಸ್ ಆಗಿರುವ ಯುವಕರಿಗೆ ಸುವರ್ಣಾವಕಾಶ

Railway Recruitment 2023: ನೀವು 10ನೇ ತರಗತಿ ತೇರ್ಗಡೆಯಾಗಿದ್ದು ಸರ್ಕಾರಿ ಉದ್ಯೋಗಕ್ಕಾಗಿ ಹುಡುಕುತ್ತಿದ್ದರೆ ನಿಮಗಿದೆ ಸುವರ್ಣಾವಕಾಶ. ನೀವೂ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿನಡೆಸುತ್ತಿದ್ದರೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗಾವಕಾಶ.

Written by - Yashaswini V | Last Updated : Jan 12, 2023, 10:08 AM IST
  • 10ನೇ ತರಗತಿ ಪಾಸ್ ಆದವರಿಗೆ ದಕ್ಷಿಣ ಮಧ್ಯ ರೈಲ್ವೆಯಲ್ಲಿ ಉದ್ಯೋಗಾವಕಾಶ
  • ದಕ್ಷಿಣ ಮಧ್ಯ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
  • ಈ ನೇಮಕಾತಿ ಪ್ರಕ್ರಿಯೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
Government Job: 10ನೇ ತರಗತಿ ಪಾಸ್ ಆಗಿರುವ ಯುವಕರಿಗೆ ಸುವರ್ಣಾವಕಾಶ title=
Government Jobs

Railway recruitment 2023: ನೀವೂ ಕೂಡ ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಸರ್ಕಾರಿ ಉದ್ಯೋಗಗಳು ಮತ್ತು ಅಪ್ರೆಂಟಿಸ್‌ಗಳ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ. ನೀವು ಹತ್ತನೇ ತರಗತಿ ಉತ್ತೀರ್ಣರಾಗಿದ್ದು ಸರ್ಕಾರಿ ಉದ್ಯೋಗಾಕಾಂಕ್ಷಿಗಳಾಗಿದ್ದರೆ ಈ ಸುವರ್ಣಾವಕಾಶವನ್ನು ಯಾವುದೇ ಕಾರಣಕ್ಕೂ ಮಿಸ್ ಮಾಡಿಕೊಳ್ಳಬೇಡಿ. ಈ ಉದ್ಯೋಗಗಳಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಗಳು ಇಲ್ಲಿವೆ.

10ನೇ ತರಗತಿ ಪಾಸ್ ಆದವರಿಗೆ ದಕ್ಷಿಣ ಮಧ್ಯ ರೈಲ್ವೆಯಲ್ಲಿ ಉದ್ಯೋಗಾವಕಾಶ:
ದಕ್ಷಿಣ ಮಧ್ಯ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ಇದಕ್ಕಾಗಿ 10ನೇ ತರಗತಿ ಪಾಸ್ ಅಂಕಪಟ್ಟಿ ಮತ್ತು ಐಟಿಐ ಪ್ರಮಾಣಪತ್ರವನ್ನು ಹೊಂದಿರುವುದು ಅವಶ್ಯಕ. 

ಇದನ್ನೂ ಓದಿ- BSNL Recruitment 2023: 11705 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಸ್ಎನ್ಎಲ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ದಕ್ಷಿಣ ಮಧ್ಯ ರೈಲ್ವೆಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 29. 

ದಕ್ಷಿಣ ಮಧ್ಯ ರೈಲ್ವೆಯಲ್ಲಿ ಉದ್ಯೋಗಕ್ಕಾಗಿ ಆಯ್ಕೆ ಪ್ರಕ್ರಿಯೆ:
ದಕ್ಷಿಣ ಮಧ್ಯ ರೈಲ್ವೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಭರ್ತಿ ಮಾಡಲಾಗುವುದು. 

ಇದನ್ನೂ ಓದಿ- ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪ್ರಥಮ ಮುದ್ರಣ ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು 1180 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅದೇ ಸಮಯದಲ್ಲಿ, ಎಸ್‌ಸಿ-ಎಸ್‌ಟಿ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. 

ಆಸಕ್ತ ಅಭ್ಯರ್ಥಿಗಳು ಈ scr.indianrailways.gov.in. ವೆಬ್‌ಸೈಟ್‌ನಿಂದ ಅರ್ಜಿ ಸಲ್ಲಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News