Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿ

RPF Recruitment 2024: ಈ ಹುದ್ದೆಗಳಿಗೆ ಕಂಪ್ಯೂಟರ್​ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

Written by - Puttaraj K Alur | Last Updated : Apr 16, 2024, 08:42 AM IST
  • ರೈಲ್ವೆ ರಕ್ಷಣಾ ದಳದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ
  • ಸಬ್​ ಇನ್ಸ್​​ಪೆಕ್ಟರ್​​ ಮತ್ತು ಕಾನ್ಸ್​​ಟೇಬಲ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ
  • ಒಟ್ಟು 4,660 ಹುದ್ದೆಗಳ ನೇಮಕಾತಿ, SSLC & ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
Indian Railways Jobs: ರೈಲ್ವೆ ರಕ್ಷಣಾ ದಳದಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿ  title=
RPF Recruitment 2024

ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ರಕ್ಷಣಾ ದಳದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸಬ್​ ಇನ್ಸ್​​ಪೆಕ್ಟರ್​​ ಮತ್ತು ಕಾನ್ಸ್​​ಟೇಬಲ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 4,660 ಹುದ್ದೆಗಳ ನೇಮಕಾತಿ ನಡೆಯಲಿದ್ದು, SSLC ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. 

ಹುದ್ದೆಯ ವಿವರ: ನೇಮಕಾತಿಯಡಿ ಕಾನ್ಸ್​​ಟೇಬಲ್​ 4,208 ಮತ್ತು 452 ಸಬ್​ ಇನ್ಸ್​​ಪೆಕ್ಟರ್​​ ಒಟ್ಟು 4,660 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.  

ಇದನ್ನೂ ಓದಿ: ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್

ವಿದ್ಯಾರ್ಹತೆ: ಸಬ್​ ಇನ್ಸ್​ಪೆಕ್ಟರ್​​ ಹುದ್ದೆಗೆ ಅಭ್ಯರ್ಥಿಗಳು ಪದವಿ ಮತ್ತು ಕಾನ್ಸ್​​ಟೇಬಲ್​ ಹುದ್ದೆಗೆ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ: ಸಬ್​ ಇನ್ಸ್​ಪೆಕ್ಟರ್​​ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ 20 ರಿಂದ ಗರಿಷ್ಠ 28 ವರ್ಷ ಮತ್ತು ಕಾನ್ಸ್​​ಟೇಬಲ್​ ಹುದ್ದೆಗೆ ಕನಿಷ್ಠ 18 ರಿಂದ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರಬೇಕು.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. 

ಅರ್ಜಿ ಶುಲ್ಕ: SC/ST ಮತ್ತು ನಿವೃತ್ತ ಸೇವಾದಾರರು, ಮಹಿಳೆಯರು, EBC ಅಭ್ಯರ್ಥಿಗಳಿಗೆ 250 ರೂ. ಮತ್ತು ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿರುತ್ತದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್​ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಹುದ್ದೆಗಳಿಗೆ ಅಭ್ಯರ್ಥಿಗಳು ಏಪ್ರಿಲ್​ 15ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನಾಂಕ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು indianrailways.gov.in ಭೇಟಿ ನೀಡಬಹುದು. ಅದರಂತೆ ಕರ್ನಾಟಕದ ಅಭ್ಯರ್ಥಿಗಳು rrbbnc.gov.in ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಇದನ್ನೂ ಓದಿ: ಒಡಿಶಾ : ಜಾಜ್‌ಪುರ ಮೇಲ್ಸೇತುವೆಯಿಂದ ಬಸ್ ಉರುಳಿ ಐವರು ಸಾವು, ಹಲವರಿಗೆ ಗಾಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News