SSC Recruitment 2023: 1876 ಸಬ್ ಇನ್ಸ್ಪಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SSC CPO SI Recruitment 2023: ಈಗಾಗಲೇ ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

Written by - Puttaraj K Alur | Last Updated : Jul 23, 2023, 04:46 PM IST
  • ದೆಹಲಿ ಪೊಲೀಸ್ & ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  • 1876 ಸಬ್ ಇನ್ಸ್ಪಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
  • ಈಗಾಗಲೇ ಆನ್‍ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 15 ಕೊನೆಯ ದಿನಾಂಕವಾಗಿದೆ
SSC Recruitment 2023: 1876 ಸಬ್ ಇನ್ಸ್ಪಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ title=
SSC CPO SI Recruitment 2023

SSC CPO SI Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು SSCಯ ಪ್ರಧಾನ ಕಚೇರಿಯ ಅಧಿಕೃತ ವೆಬ್‍ಸೈಟ್ https://ssc.nic.in. ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಈಗಾಗಲೇ ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ: Online gambling: ಬರೋಬ್ಬರಿ 58 ಕೋಟಿ ರೂ. ಕಳೆದುಕೊಂಡ ಉದ್ಯಮಿ..!

SSC ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ವಿವರ

ಒಟ್ಟು ಹುದ್ದೆಗಳು: 1,876

ದೆಹಲಿ ಪೊಲೀಸ್- ಸಬ್ ಇನ್ಸ್ಪೆಕ್ಟರ್ (Exe.) -109 (ಪುರುಷ) ಹುದ್ದೆಗಳು

ದೆಹಲಿ ಪೊಲೀಸ್‍ - ಸಬ್ ಇನ್ಸ್ಪೆಕ್ಟರ್ (Exe.) – 53 (ಮಹಿಳೆ)  ಹುದ್ದೆಗಳು

CAPFನಲ್ಲಿ ಸಬ್ ಇನ್ಸ್ಪೆಕ್ಟರ್ (GD) - 1,714 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಹಾಜರಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಆಗಸ್ಟ್ 1, 2023ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ವಯಸ್ಸು 20 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಮತ್ತು 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಪಾವತಿಸಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು SSCಯ ಪ್ರಧಾನ ಕಚೇರಿಯ ಅಧಿಕೃತ ವೆಬ್‍ಸೈಟ್ https://ssc.nic.in ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಅಧಿಕೃತ SSC ವೆಬ್‍ಸೈಟ್‍ಗೆ ಭೇಟಿ ನೀಡಬೇಕು.  

ನಿಮ್ಮ ಹೆಸರನ್ನು ನೋಂದಾಯಿಸಿ ಮತ್ತು ಲಾಗಿನ್ ಮಾಡಿ

ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‍ಲೋಡ್ ಮಾಡಿ.

ಅರ್ಜಿ ಶುಲ್ಕ ಪಾವತಿಸಿ.

ಕೊನೆಯದಾಗಿ ನಿಮ್ಮ ಸಲ್ಲಿಕೆಯ ಸ್ವೀಕೃತಿ ಪ್ರತಿ(acknowledgement copy)ಯನ್ನು ಡೌನ್‍ಲೋಡ್ ಮಾಡಿಕೊಳ್ಳಿರಿ.

ಇದನ್ನೂ ಓದಿ: “ಚೀನಾ ಬಳಿಕ ಅಮೆರಿಕಾದಿಂದ ಕೋವಿಡ್ ತರಹದ ವೈರಸ್ ಹರಡುತ್ತದೆ”: ಶಾಕಿಂಗ್ ವರದಿ ಬಹಿರಂಗ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News