ಗಂಡನ ಕಿರುಕುಳ ಆರೋಪ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ!

ಮೃತ ಮಹಿಳೆಯ ಗಂಡ ಮಲ್ಲಿಕಾರ್ಜುನ್ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ರಾಧಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Written by - Puttaraj K Alur | Last Updated : Jan 18, 2024, 04:01 PM IST
  • ಬಾಗೇಪಲ್ಲಿ ತಾಲೂಕಿನ ಮಿಟ್ಟೆಮಿರಿ ಕೆರೆಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆ
  • ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
  • ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ
ಗಂಡನ ಕಿರುಕುಳ ಆರೋಪ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ! title=
ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆ!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಮೃತದೇಹಗಳು ಪತ್ತೆಯಾಗಿವೆ. ಗಂಡನ ಕಿರುಕುಳ ಆರೋಪದಿಂದ ಮನನೊಂದು ತನ್ನಿಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.  

ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಆಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಇಬ್ಬರ ಮಕ್ಕಳ ಮೃತದೇಹ ಮೇಲೆತ್ತಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಾಯುಕರಾರ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರ ಹೆಸರಲ್ಲಿ ವಂಚನೆ

ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ನಿವಾಸಿ ರಾಧಾ ತನ್ನಿಬ್ಬರು ಮಕ್ಕಳಾದ 4 ವರ್ಷದ ಪುತ್ರಿ ಪೂರ್ವಿತಾ ಮತ್ತು  ಒಂದೂವರೆ ವರ್ಷದ ಮತ್ತೊಬ್ಬ ಪುತ್ರಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಮಹಿಳೆಯ ಗಂಡ ಮಲ್ಲಿಕಾರ್ಜುನ್ ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ರಾಧಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗ ಹೊತ್ತಿ ಉರಿದ ಮನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News