ಮಂಡ್ಯದಲ್ಲಿ ಘೋರ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರ ದುರ್ಮರಣ!

ಮೃತರನ್ನು ನಾಗೇಶ್, ಭರತ್, ಗುರು, ಮಹಾದೇವ್ ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರ ಮೃತದೇಹವಷ್ಟೇ ಪತ್ತೆಯಾಗಿದ್ದು, ಇನ್ನಿಬ್ಬರ ಶವಕ್ಕಾಗಿ ಶೋಧಕಾರ್ಯಾಚರಣೆ ನಡೆಸಲಾಗುತ್ತಿದೆ.

Written by - Puttaraj K Alur | Last Updated : Mar 26, 2024, 10:03 PM IST
  • ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ
  • ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ
  • ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿರುವ ದುರಂತ
ಮಂಡ್ಯದಲ್ಲಿ ಘೋರ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರ ದುರ್ಮರಣ! title=
ನಾಲ್ವರು ನೀರುಪಾಲು!

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.

ಪ್ರವಾಸಕ್ಕೆ ಅಂತಾ 40 ಮಂದಿ ಒಂದೇ ಬಸ್‌ನಲ್ಲಿ ಆಗಮಿಸಿದ್ದರು. ಈ ವೇಳೆ ಓರ್ವ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದಾನೆ. ಆದರೆ ಆತ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲು ಆರಂಭಿಸಿದ್ದಾನೆ.

ಇದನ್ನೂ ಓದಿ: ವಿಶ್ವದಲ್ಲಿ ದಿನೇದಿನೆ ಏರಿಕೆ ಆಗ್ತಿದೆ ಮಾರಕ ಕ್ಯಾನ್ಸರ್; ಬೆಂಗಳೂರಲ್ಲಿ 3 ದಿನ‌ ಆರೋಗ್ಯ ಸಮ್ಮೇಳನ

ಕೂಡಲೇ ಆತನ ರಕ್ಷಣೆಗೆ ಮೂವರು ತೆರಳಿದ್ದು, ನಾಲ್ವರು ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆಂದು ತಿಳದುಬಂದಿದೆ. ಮೈಸೂರಿನ ಕನಕಗಿರಿಯಿಂದ ಮುತ್ತತ್ತಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ನಾಗೇಶ್, ಭರತ್, ಗುರು, ಮಹಾದೇವ್ ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರ ಮೃತದೇಹವಷ್ಟೇ ಪತ್ತೆಯಾಗಿದ್ದು, ಇನ್ನಿಬ್ಬರ ಶವಕ್ಕಾಗಿ ಶೋಧಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News