ಅತ್ತಿಬೆಲೆಯಲ್ಲಿ ಪಟಾಕಿ ದಾಸ್ತಾನು ಮಳಿಗೆಗೆ ಬೆಂಕಿ: ಸಾವಿನ ಸಂಖ್ಯೆ 12ಕ್ಕೆ ಏರಿಕೆ..!

Accidental Fire in Attibele firecracker shop: ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಪಟಾಕಿ ದಾಸ್ತಾನು ಮಳಿಗೆ ನಾಲ್ಕೈದು ಗಂಟೆವರೆಗೆ ಹೊತ್ತಿ ಉರಿದಿದೆ.

Written by - Puttaraj K Alur | Last Updated : Oct 7, 2023, 10:11 PM IST
  • ಅತ್ತಿಬೆಲೆಯಲ್ಲಿರುವ ಪಟಾಕಿ ದಾಸ್ತಾನು ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ
  • ಘಟನೆಯಲ್ಲಿ 12 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ
  • ಪಟಾಕಿ ದಾಸ್ತಾನು ಮಳಿಗೆಯಲ್ಲಿ 5 ಕೋಟಿ ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು
ಅತ್ತಿಬೆಲೆಯಲ್ಲಿ ಪಟಾಕಿ ದಾಸ್ತಾನು ಮಳಿಗೆಗೆ ಬೆಂಕಿ: ಸಾವಿನ ಸಂಖ್ಯೆ 12ಕ್ಕೆ ಏರಿಕೆ..! title=
12 ಮಂದಿ ಕಾರ್ಮಿಕರು ಸಾವು!

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿರುವ ಪಟಾಕಿ ದಾಸ್ತಾನು ಮಳಿಗೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಮಿಳುನಾಡಿನಿಂದ ಬಂದಿದ್ದ ಪಟಾಕಿಯನ್ನು ಲಾರಿಯಿಂದ ಇಳಿಸುವ ವೇಳೆ ಈ ದುರಂತ ಸಂಭವಿಸಿದೆ.

ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಪಟಾಕಿ ದಾಸ್ತಾನು ಮಳಿಗೆ ನಾಲ್ಕೈದು ಗಂಟೆವರೆಗೆ ಹೊತ್ತಿ ಉರಿದಿದೆ. ಅಗ್ನಿ ಶಾಮಕ ದಳದ ಐದಾರು ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಸಿಬ್ಬಂದಿ ಬೆಂಕಿ  ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಆದರೂ ಸಹ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲವೆಂದು ತಿಳಿದುಬಂದಿದೆ.

ಇದನ್ನೂ ಓದಿ: ಹಾವೇರಿಯಲ್ಲಿ 3ನೇ ದಿನಕ್ಕೆ ಕಾಲಿಟ್ಟ ಅನ್ನದಾತರ ಹೋರಾಟ

ಈ ಬೆಂಕಿ ಅವಘಡಕ್ಕೆ ಕಾರಣವೇನು ಅನ್ನೋದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಪಟಾಕಿ ಮಳಿಗೆಯಲ್ಲಿ 3-40 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕೆಲವರು ಮಳಿಗೆಯ ಹಿಂಬಾಗಿಲಿನಿಂದ ಹೊರಬಂದು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಅನೇಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯಲ್ಲಿ ಒಂದು ಲಾರಿ, ಸರಕು ಸಾಗಣೆ ವಾಹನ ಮತ್ತು 4 ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನಾ ಸ್ಥಳದಲ್ಲಿ ಪಟಾಕಿಗಳು ಬಹಳ ಹೊತ್ತಿನಿಂದ ಸಿಡಿಯುತ್ತಿದ್ದು, ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಪಟಾಕಿ ಮಳಿಗೆ ಮಾಲೀಕ ಸೇರಿದಂತೆ ಹಲವರಿಗೆ ಗಾಯಗಳಾಗಿದೆ. ಸ್ಥಳಕ್ಕೆ ನಾಲ್ಕೈದು ಆಂಬುಲೆನ್ಸ್‍ಗಳು ಬಂದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Murder Case: ವ್ಯಕ್ತಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿ ಕೃಷ್ಣಾ ನದಿಗೆ ಹಾಕಿದ ಹಂತಕರು!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News