Hyderabad: ಪುಳಿಯೋಗರೆ ಸೇವಿಸಿ ಸಾವನ್ನಪ್ಪಿದ ವಿದ್ಯಾರ್ಥಿ..!

Food poisoning at Bhuvanagiri school: ಇದೇ ತಿಂಗಳ ಏಪ್ರಿಲ್‌ 12ರಂದು ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರದಲ್ಲಿ ಪುಳಿಯೋಗರೆ ಸೇವಿಸಿದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಭುವನಗಿರಿ ಏರಿಯಾ ಆಸ್ಪತ್ರೆಯಲ್ಲಿ ಅನೇಕರಿಗೆ ಚಿಕಿತ್ಸೆ ನೀಡಲಾಗಿತ್ತು.

Written by - Puttaraj K Alur | Last Updated : Apr 17, 2024, 11:56 PM IST
  • ಪುಳಿಯೋಗರೆ ಸೇವಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ
  • ಯಾದಾದ್ರಿ ಜಿಲ್ಲೆಯ ಭುವನಗಿರಿ ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಫುಡ್ ಪಾಯ್ಸನಿಂಗ್
  • ಹೈದರಾಬಾದ್‌ನ ನಿಲೋಫರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ವಿದ್ಯಾರ್ಥಿ
Hyderabad: ಪುಳಿಯೋಗರೆ ಸೇವಿಸಿ ಸಾವನ್ನಪ್ಪಿದ ವಿದ್ಯಾರ್ಥಿ..! title=
ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಸಾವು

ನವದೆಹಲಿ: ಪುಳಿಯೋಗರೆ ಸೇವಿಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಯಾದಾದ್ರಿ ಜಿಲ್ಲೆಯ ಭುವನಗಿರಿ ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ನಡೆದಿದೆ. ಪ್ರಶಾಂತ್ ವಿಷಾಹಾರ ಸೇವಿಸಿ ಮೃತಪಟ್ಟಿರುವ ವಿದ್ಯಾರ್ಥಿಯಾಗಿದ್ದಾನೆ. 

ಇದೇ ತಿಂಗಳ ಏಪ್ರಿಲ್‌ 12ರಂದು ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರದಲ್ಲಿ ಪುಳಿಯೋಗರೆ ಸೇವಿಸಿದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಭುವನಗಿರಿ ಏರಿಯಾ ಆಸ್ಪತ್ರೆಯಲ್ಲಿ ಅನೇಕರಿಗೆ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: Rain Alert: ಈ ವರ್ಷ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ ನಿರೀಕ್ಷೆ!

ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳನ್ನು ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿತ್ತು. ಹೈದರಾಬಾದ್‌ನ ನಿಲೋಫರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಶಾಂತ್ ಚಿಕಿತ್ಸೆ ಫಲಿಸದೆ ಪ್ರಾಣ ಬಿಟ್ಟಿದ್ದಾನೆ.  

ಮೃತ ವಿದ್ಯಾರ್ಥಿ ಪ್ರಶಾಂತ್‌ ಪೋಚಂಪಲ್ಲಿ ಮಂಡಲದ ಜಿಬ್‌ಲಕ್‌ಪಲ್ಲಿ ಗ್ರಾಮದ ನಿವಾಸಿ. ಮೃತ ವಿದ್ಯಾರ್ಥಿಯ ತಂದೆ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಭುವನಗಿರಿ ಸಮಾಜ ಕಲ್ಯಾಣ ವಸತಿ ಶಾಲೆಯ ವಾರ್ಡನ್ ಮತ್ತು ಪ್ರಾಂಶುಪಾಲರ ವಿರುದ್ಧ ಐಪಿಸಿ ಸೆಕ್ಷನ್ 153A, 295A ಅಡಿ ಪ್ರಕರಣ ದಾಖಲಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಇದನ್ನೂ ಓದಿ: ISRO : ಭಾರತೀಯರು ಚಂದ್ರನ ಮೇಲೆ ಇಳಿಯುವವರೆಗೂ ಚಂದ್ರಯಾನ ಮುಂದುವರಿಯಲಿದೆ : ಇಸ್ರೋ ಅಧ್ಯಕ್ಷ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News