ಮಂಡ್ಯದಲ್ಲಿ ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ದುರ್ಮರಣ..!

Mandya Road Accident: ಆದಿಚುಂಚನಗಿರಿ ಆಸ್ಪತ್ರೆ ಮುಂಭಾಗದ ರಸ್ತೆ ಬದಿ KSRTC ಬಸ್ ನಿಂತಿತ್ತು. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು(KA-02 MM 1802) ಹಿಂಬದಿಯಿಂದ ಬಸ್‍ಗೆ ಡಿಕ್ಕಿ ಹೊಡೆದಿದೆ.

Written by - Puttaraj K Alur | Last Updated : Sep 27, 2023, 07:12 PM IST
  • ರಸ್ತೆ ಬದಿ ನಿಂತಿದ್ದ KSRTC ಬಸ್ಸಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ
  • ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿರುವ ಭೀಕರ ಅಪಘಾತ
  • ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರ ದುರ್ಮರಣ
ಮಂಡ್ಯದಲ್ಲಿ ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ದುರ್ಮರಣ..! title=
ಸ್ಥಳದಲ್ಲೇ ನಾಲ್ವರ ದುರ್ಮರಣ!

ಮಂಡ್ಯ: ರಸ್ತೆಬದಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​​​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಈ ಭೀಕರ ಅಪಘಾತ  ಸಂಭವಿಸಿದೆ.

ಬೆಂಗಳೂರಿನ Accenture ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ಮೂಲದ ನಮಿತಾ, ಧಾವಾಡವಾದ ರಘುನಾಥ್ ಭಜಂತ್ರಿ, ಹೊಸಕೋಟೆ ನಿವಾಸಿ ವಂಶಿಕೃಷ್ಣ ಮತ್ತು Infosysನಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ್ ಮೂಲಕ ಪಂಕಜ್ ಶರ್ಮಾ ಸಾವನ್ನಪ್ಪಿದ ದುರ್ದೈವಿಗಳು.

ಇದನ್ನೂ ಓದಿ: ಡಿಕೆಶಿ-ಸ್ಟಾಲಿನ್ ಗಾಢ ಸ್ನೇಹ-ಸಂಬಂಧ ನರಕದಲ್ಲಿ ನಿಶ್ಚಯವಾದ ಮದುವೆಯಂತೆ!!: ಬಿಜೆಪಿ ಟೀಕೆ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಳಿಯ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯ ಎದುರೇ ಅಪಘಾತ ಸಂಭವಿಸಿದೆ. ಆದಿಚುಂಚನಗಿರಿ ಆಸ್ಪತ್ರೆ ಮುಂಭಾಗದ ರಸ್ತೆ ಬದಿ KSRTC ಬಸ್ ನಿಂತಿತ್ತು. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು(KA-02 MM 1802) ಹಿಂಬದಿಯಿಂದ ಬಸ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

ಅಪಘಾತದ ವಿಷಯ ತಿಳಿದು ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್‌ ವಿರುದ್ಧ ಬಿಎಸ್‌ ಯಡಿಯೂರಪ್ಪ ವಾಗ್ದಾಳಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News