ಪ್ರೇಮ ವೈಫಲ್ಯ: ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ

ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಕೇರಳದ ಮಲಪ್ಪುರಂ ನ ಅಬಿನ್‌ (23) ಎಂದು ಗುರುತಿಸಲಾಗಿದೆ. ಅಬಿನ್‌ ಕಾಲೇಜು ಆವರಣದಲ್ಲಿ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಆಕೆಯ ಸಮೀಪ ಕುಳಿತಿದ್ದ ಇನ್ನಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಎಂದು ವರದಿಯಾಗಿದೆ. 

Written by - Yashaswini V | Last Updated : Mar 4, 2024, 01:46 PM IST
  • ಅಬಿನ್, ಆಸಿಡ್ ಎರಚಿದ ಆರೋಪಿ
  • ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಘಟನೆ
  • ಆರೋಪಿ ಮತ್ತು ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರು
ಪ್ರೇಮ ವೈಫಲ್ಯ: ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ title=

Crime News: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ದುರ್ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಬೆಳಕಿಗೆ ಬಂದಿದೆ. 
ಕಾಲೇಜು ವಿದ್ಯಾರ್ಥಿನಿಯರ ಮೇಲೆ  ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಕೇರಳದ ಮಲಪ್ಪುರಂ ನ ಅಬಿನ್‌ (23) ಎಂದು ಗುರುತಿಸಲಾಗಿದೆ. ಅಬಿನ್‌ ಕಾಲೇಜು ಆವರಣದಲ್ಲಿ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಆಕೆಯ ಸಮೀಪ ಕುಳಿತಿದ್ದ ಇನ್ನಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿದೆ ಎಂದು ವರದಿಯಾಗಿದೆ. 

ಇದನ್ನೂ ಓದಿ- Chamarajanagar: ಬಸ್ ಪಲ್ಟಿಯಾಗಿ 30 ಮಂದಿ ಕಾರ್ಮಿಕರಿಗೆ ಗಾಯ

ಈ ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿಯ ಮುಖ ಹಾಗೂ ಶರೀರದ ಇತರ ಭಾಗಗಳಿಗೆ ತೀವ್ರ ಗಂಭೀರವಾದ ಗಾಯಗಳಾಗಿದ್ದು, ಇನ್ನಿಬ್ಬರು ವಿದ್ಯಾರ್ಥಿನಿಯರ ಕೈಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಆರೋಪಿಯು ಕಾಲೇಜಿನ ಸಮವಸ್ತ್ರ ಧರಿಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ. 

ಇದನ್ನೂ ಓದಿ- ಆನಂದಪುರ ಪೊಲೀಸ್ ಸ್ಟೇಷನ್ ಲಿಮಿಟ್ಸ್​​ ನಲ್ಲಿ ಅಚ್ಚರಿಯ ಘಟನೆ: ವ್ಯಕ್ತಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲೆ!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ  ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಆರೋಪಿಯ ತಾಯಿಯ ಮನೆ ಹಾಗೂ ಸಂತ್ರಸ್ತ ವಿದ್ಯಾರ್ಥಿನಿಯ ಮನೆ ಅಕ್ಕಪಕ್ಕದಲ್ಲಿದ್ದು, ಆರೋಪಿಯು ತನ್ನ ತಾಯಿಯ ಮನೆಗೆ ಹೋದ ಸಂದರ್ಭ ವಿದ್ಯಾರ್ಥಿನಿಯ ಪರಿಚಯವಾಗಿತ್ತು. ಮೇಲ್ನೋಟಕ್ಕೆ ಇದೊಂದು ಪ್ರೇಮ ವೈಫಲ್ಯ ಎಂದು ಕಂಡು ಬರುತ್ತಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News