ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ನಾಲ್ವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಗುದ್ದಿದ್ದು, ದರ್ಶನ್ ಗಾಯಗೊಂದಿರುವುದಾಗಿ ತಿಳಿದು ಬಂದಿದೆ.

Last Updated : Sep 24, 2018, 08:20 AM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ನಾಲ್ವರಿಗೆ ಗಾಯ title=

ಮೈಸೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರು ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿದ್ದು ದರ್ಶನ್​, ಪ್ರಜ್ವಲ್​ ದೇವರಾಜ್​ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೈಸೂರು ಹೊರವಲಯದ ರಿಂಗ್ ರೋಡ್ ನ ಹಿನಕಲ್ ಬಾಲಿ ಮುಂಜಾನೆ 3 ಗಂಟೆಗೆ ಈ ಅಪಘಾತ ಸಂಭವಿಸಿದೆ. ದರ್ಶನ್ ಅವರ ಕೈಗೆ ಗಾಯವಾಗಿದ್ದು ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದ್ದು, ನಟ ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ಕಾರು ಚಾಲಕ ಸಹ ಅಪಘಾತದಲ್ಲಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

'ಒಡೆಯ' ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಟರು ಭಾನುವಾರವಷ್ಟೇ ಅರಮನೆಯಲ್ಲಿ ದಸರಾ ಗಜಪಡೆಯ ಮಾವುತ, ಕಾವಾಡಿಗಳಿಗೆ ವಿಶೇಷ ಭೋಜನ ವ್ಯವಸ್ಥೆಯನ್ನು ದರ್ಶನ್ ಮಾಡಿದ್ದರು. ಪ್ರಾಣಿ ಪ್ರಿಯ ನಟ ದರ್ಶನ್ ಕಡೆಯಿಂದ ದಸರಾ ಗಜಪಡೆ ಮಾವುತ ,ಕಾವಾಡಿಗಳಿಗೆ ವಿಶೇಷ ಗಿಫ್ಟ್ ನೀಡಲಾಯಿತು. ಮಕ್ಕಳಿಗೆ ಬ್ಯಾಗ್ ಮತ್ತು ಪುಸ್ತಕಗಳು ಹಾಗೂ ಮಾವುತರು ಹಾಗೂ ಕಾವಾಡಿಗಳ ಕುಟುಂಬಗಳಿಗೆ ಹೊಸ ಬಟ್ಟೆಗಳನ್ನೂ ನೀಡಲಾಯಿತು.

ದರ್ಶನ್ ಭಾನುವಾರವಷ್ಟೇ ಯಜಮಾನ ಚಿತ್ರದ ಫಸ್ಟ್ ಲುಕ್ ಅನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
 

Trending News