ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ "ಜಾನಕಿ ಸಂಸಾರ"

Janaki Samsara Serial: 'ಜಾನಕಿ ಸಂಸಾರ' ಇದೊಂದು ತುಂಬು ಕುಟುಂಬದ ಕಥೆ. ಈ ಮನೆಯ ಹಿರಿ ಸೊಸೆ ಜಾನಕಿ, ಇಡೀ ಸಂಸಾರದ ಹೊಣೆ ಹೊತ್ತವಳು. ಎಷ್ಟೇ ಕಷ್ಟ ಬಂದರು ಎದುರಿಸುವ ಛಲಗಾರ್ತಿ. 

Written by - Yashaswini V | Last Updated : May 2, 2024, 11:09 AM IST
  • ವಿದ್ಯಾವಂತೆಯಾಗಿರುವ ಜಾನಕಿ ತನ್ನ ಸಂಸಾರದ ಜೊತೆ ಉದ್ಯೋಗವನ್ನು ಸರಿ ಸಮಾನಾಗಿ ನಿಭಾಯಿಸುತ್ತಿರುತ್ತಾಳೆ.
  • ಸದಾಕಾಲ ಮನೆ ಮಂದಿಯನ್ನು ಒಗ್ಗಟ್ಟಾಗಿಡಲು ಬಯಸುವ ಜಾನಕಿಯ ಸಂಸಾರಕ್ಕೆ ಮನೆಯೊಡೆಯುವ ವ್ಯಕ್ತಿಯ ಆಗಮನವಾದರೆ...
  • ಮುಂದೆ ಜಾನಕಿ ತನ್ನ ಸಂಸಾರವನ್ನು ಹೇಗೆ ಕಾಪಾಡ್ತಾಳೆ?
ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ "ಜಾನಕಿ ಸಂಸಾರ" title=

Janaki Samsara Serial In Star Suvarna:  ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ (Star Suvarna) ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ ಪರಿಕಲ್ಪನೆಗಳೊಂದಿಗೆ  ಮನರಂಜನೆಯ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ 'ಜಾನಕಿ ಸಂಸಾರ'.

'ಜಾನಕಿ ಸಂಸಾರ' (Janaki Samsara) ಇದೊಂದು ತುಂಬು ಕುಟುಂಬದ ಕಥೆ. ಈ ಮನೆಯ ಹಿರಿ ಸೊಸೆ ಜಾನಕಿ, ಇಡೀ ಸಂಸಾರದ ಹೊಣೆ ಹೊತ್ತವಳು. ಎಷ್ಟೇ ಕಷ್ಟ ಬಂದರು ಎದುರಿಸುವ ಛಲಗಾರ್ತಿ. ವಿದ್ಯಾವಂತೆಯಾಗಿರುವ ಜಾನಕಿ ತನ್ನ ಸಂಸಾರದ ಜೊತೆ ಉದ್ಯೋಗವನ್ನು ಸರಿ ಸಮಾನಾಗಿ ನಿಭಾಯಿಸುತ್ತಿರುತ್ತಾಳೆ. ಸದಾಕಾಲ ಮನೆ ಮಂದಿಯನ್ನು ಒಗ್ಗಟ್ಟಾಗಿಡಲು ಬಯಸುವ ಜಾನಕಿಯ ಸಂಸಾರಕ್ಕೆ ಮನೆಯೊಡೆಯುವ ವ್ಯಕ್ತಿಯ ಆಗಮನವಾದರೆ, ಮುಂದೆ ಜಾನಕಿ ತನ್ನ ಸಂಸಾರವನ್ನು ಹೇಗೆ ಕಾಪಾಡ್ತಾಳೆ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ಇದನ್ನೂ ಓದಿ- ಜನ್ಮದಿನದಂದೇ 'ವೀರ್'ನಾಗಿ ಜೆಕೆ ಎಂಟ್ರಿ… ಹೇಗಿದೆ ಮೋಷನ್ ಪೋಸ್ಟರ್..?

'ಜಾನಕಿ ಸಂಸಾರ' ಧಾರಾವಾಹಿಯು ಸುಂದರ ತಾರಾಗಣವನ್ನು ಹೊಂದಿದ್ದು, ಕನ್ನಡಿಗರ ಮನಸು ಕದ್ದ ಕಣ್ಮಣಿ, 'ಕೃಷ್ಣರುಕ್ಮಿಣಿ' ಧಾರಾವಾಹಿ (Krishna Rukmini) ಖ್ಯಾತಿಯ ರುಕ್ಮಿಣಿ ಅಲಿಯಾಸ್ ಅಂಜನಾ ಶ್ರೀನಿವಾಸ್ (Anjana Srinivas) ರವರು 13 ವರ್ಷಗಳ ಬಳಿಕ ಮತ್ತೊಮ್ಮೆ ನಿಮ್ಮನ್ನೆಲ್ಲ ರಂಜಿಸಲು 'ಜಾನಕಿ' ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸೂರಜ್ ಹೊಳಲು, ಕಾವ್ಯ ಶಾಸ್ತ್ರೀ, ಬಾಲ ನಟಿ ಶ್ರೀ ದಿಶಾ, ಮರೀನ ತಾರಾ, ರವಿ ಭಟ್, ಚಂದನ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಅಭಿನಯಿಸುತ್ತಿದ್ದಾರೆ. 

ಇದನ್ನೂ ಓದಿ- ಪುಷ್ಪ..ಪುಷ್ಪ…ಬಂದ ಪುಷ್ಪರಾಜ್..ಕಾರ್ಮಿಕರ ದಿನಕ್ಕೆ ಪುಷ್ಪ 2 ಮೊದಲ ಹಾಡು ರಿಲೀಸ್

ಶುರುವಾಗ್ತಿದೆ ನೋವು-ನಲಿವನು ತೂಗೋ ಹೊಸ ಧಾರಾವಾಹಿ "ಜಾನಕಿ ಸಂಸಾರ" ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News