ಬಿಗ್‌ ಬಾಸ್ ಮನೆಗೆ ಎಂಟ್ರಿ ಕೊಟ್ರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌

Pradeep Eshwar in Bigg Boss 10 : ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈಗ ದಿಢೀರನೆ ಪ್ರದೀಪ್ ಈಶ್ವರ್ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.   

Written by - Chetana Devarmani | Last Updated : Oct 9, 2023, 11:42 AM IST
  • ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ಶುರು
  • ಬಿಗ್‌ ಬಾಸ್ ಮನೆಗೆ ಮೊದಲ ದಿನವೇ ಹೊಸ ಎಂಟ್ರಿ
  • ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌
ಬಿಗ್‌ ಬಾಸ್ ಮನೆಗೆ ಎಂಟ್ರಿ ಕೊಟ್ರು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌  title=
Pradeep Eshwar

Bigg Boss Kannada Season 10 : ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ಶುರುವಾಗಿದೆ. 17 ಸ್ಪರ್ಧಿಗಳಲ್ಲಿ 7 ಜನ ಈಗಾಗಲೇ ಮನೆ ಸೇರಿದ್ದಾರೆ. ಇದರಲ್ಲಿ 6 ಜನರು ವೇಟಿಂಗ್‌ ರೂಮ್‌ನಲ್ಲಿದ್ದಾರೆ. ಇಬ್ಬರು ಫೇಲ್ ಆಗಿ ಮನೆಗೆ ವಾಪಸ್ ಹೋಗಿದ್ದರು. ಇದರ ಬೆನ್ನಲ್ಲೇ ಮತ್ತೊಬ್ಬ ಕಂಟೆಸ್ಟಂಟ್‌ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. 

ಬಿಗ್‌ ಬಾಸ್ ಶೋ ಗೆ ಈ ಸ್ಪರ್ಧಿಯ ಎಂಟ್ರಿ ಎಲ್ಲರ ಗಮನ ಸೆಳೆದಿದೆ. ಶಾಸಕ ಪ್ರದೀಪ್ ಈಶ್ವರ್ ಇದೀಗ ಬಿಗ್‌ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಈಗ ದಿಢೀರನೆ ಪ್ರದೀಪ್ ಈಶ್ವರ್ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. 

ಇದನ್ನೂ ಓದಿ : Bigg Boss : ಬಿಗ್‌ ಟ್ವಿಸ್ಟ್‌.. ಮನೆಯೊಳಗೆ ಹೋಗಲು ಸಹ ಟಾಸ್ಕ್‌ ಪಾಸ್‌ ಆಗ್ಬೇಕು ಸ್ಪರ್ಧಿಗಳು!! 

ಬಿಗ್‌ ಬಾಸ್ ಮನೆಗೆ ಶಾಸಕ ಪ್ರದೀಪ್ ಈಶ್ವರ್‌ ಎಂಟ್ರಿ ಕೊಟ್ಟಿರುವುದು ಮನೆಯಲ್ಲಿದ್ದ ಸ್ಪರ್ಧಿಗಳಿಗೂ ಶಾಕ್‌ ಆಗಿದೆ. ಬಿಗ್‌ಬಾಸ್ ಮೊದಲ ದಿನವೇ ಹೊಸ ಸ್ಪರ್ಧಿಯ ಎಂಟ್ರಿ ಅಚ್ಚರಿ ಮೂಡಿಸಿದೆ. ಕರ್ನಾಟಕ ಚುನಾವಣೆ ವೇಳೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸಚಿವ ಡಾ. ಕೆ ಸುಧಾಕರ್‌ ಗೆದ್ದಿದ್ದರು. ಇದಕ್ಕೂ ಮುನ್ನ ಪೆರೇಸಂದ್ರದ ಪ್ರದೀಪ್ ಈಶ್ವರ್ ಮೋಟಿವೇಶನಲ್‌ ಸ್ಪೀಕರ್‌ ಆಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ಸದ್ದು ಮಾಡಿದವರು.

 

 

ಸೋಶಿಯಲ್‌ ಮೀಡಿಯಾದಲ್ಲಿ ಪ್ರದೀಪ್ ಈಶ್ವರ್ ಬಿಗ್‌ಬಾಸ್ ಮನೆಗೆ ಹೋಗಬೇಕು ಎನ್ನುವುದು ಸಾಕಷ್ಟು ಜನರ ಆಸೆಯಾಗಿತ್ತು. ಇದೀಗ ಪ್ರದೀಪ್‌ ಈಶ್ವರ್‌ ಬಿಗ್‌ ಬಾಸ್‌ ಮನೆಗೆ ಬಂದಿದ್ದು, ಅಭಿಮಾನಿಗಳಲ್ಲಿ ಸಂತಸ ತಂದಿದೆ. 

ಇದನ್ನೂ ಓದಿ : ಬಿಗ್ ಬಾಸ್ ಮನೆ ಸೇರಿದ 17 ಸ್ಪರ್ಧಿಗಳು ಇವರೇ.. ಇಲ್ಲಿದೆ ನೋಡಿ ಸಂಪೂರ್ಣ ವಿವರ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News