ಡಾಲಿ ಧನಂಜಯ ಹೊಸ ಸಿನಿಮಾ ಹೆಸರು: ಕೋಟಿ

Koti : ಕನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರಾದ ಡಾಲಿ ಧನಂಜಯ ಅವರ ಹೊಸ ಕನ್ನಡ ಸಿನಿಮಾ ಯಾವುದು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಕನ್ನಡ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಪರಮ್‌ ನಿರ್ದೇಶನದ ಈ ಸಿನಿಮಾ ಹೆಸರು ಕೋಟಿ. 

Written by - YASHODHA POOJARI | Edited by - Zee Kannada News Desk | Last Updated : Apr 9, 2024, 11:42 PM IST
  • ಈಗ ಅಪ್ಪಟ ಕನ್ನಡದ ಕತೆಯೊಂದಿಗೆ ಅವರು ಮೊದಲ ಬಾರಿ ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದಾರೆ.
  • ಕನ್ನಡ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಪರಮ್‌ ನಿರ್ದೇಶನದ ಈ ಸಿನಿಮಾ ಹೆಸರು ಕೋಟಿ.
  • ಯುಗಾದಿ ಹಬ್ಬಕ್ಕೆ ಪೋಸ್ಟರ್ಯುಗಾದಿ ಹಬ್ಬದ ದಿನವಾದ ಇಂದು ಕೋಟಿ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ
ಡಾಲಿ ಧನಂಜಯ ಹೊಸ ಸಿನಿಮಾ ಹೆಸರು: ಕೋಟಿ title=

ಕಿರುತೆರೆಯಲ್ಲಿ ಹತ್ತು ಹಲವು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದವರು ಪರಮ್.‌ ಕಲರ್ಸ್‌ ಕನ್ನಡ ವಾಹಿನಿಯನ್ನು ಅವರು ಮುನ್ನಡೆಸುತ್ತಿದ್ದಾಗ ಅತಿ ಹೆಚ್ಚು ಕನ್ನಡ ಮೂಲದ ಕತೆಗಳನ್ನು ಅವರು ಕೊಟ್ಟಿದ್ದು ನಿಮಗೆಲ್ಲಾ ಗೊತ್ತೇ ಇದೆ.

 ಈಗ ಅಪ್ಪಟ ಕನ್ನಡದ ಕತೆಯೊಂದಿಗೆ ಅವರು ಮೊದಲ ಬಾರಿ ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದಾರೆ.

ಇದನ್ನು ಓದಿ :  Ramadan : ಕೇರಳದಲ್ಲಿ ಇಂದು ಚಂದ್ರ ದರ್ಶನ, ನಾಳೆ ಕರಾವಳಿಯಲ್ಲಿ ರಂಜಾನ್ ಹಬ್ಬ

ಯುಗಾದಿ ಹಬ್ಬಕ್ಕೆ ಪೋಸ್ಟರ್ಯುಗಾದಿ ಹಬ್ಬದ ದಿನವಾದ ಇಂದು ಕೋಟಿ ಚಿತ್ರದ ಟೈಟಲ್‌ ಬಿಡುಗಡೆಯಾಗಿದೆ. ಐದುನೂರು ರೂಪಾಯಿ ನೋಟುಗಳನ್ನು ಮಡಿಚಿ ಮಾಡಿರುವಂತೆ ಕಾಣಿಸುವ ಕೋಟಿ ಟೈಟಲ್‌ನಲ್ಲಿ ಕೇವಲ ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡಿರುವುದು ವಿಶೇಷ. 

ತೀಕ್ಷ್ಣ ಕಣ್ಣುಗಳಿಂದ ಈ ಪೋಸ್ಟರ್‌ ಗಮನ ಸೆಳೆಯುತ್ತಿರುವುದಂತೂ ಹೌದು.‌
ಕೋಟಿ ಕನಸು ಕಾಣುವ ಒಬ್ಬ ಕಾಮನ್‌ ಮ್ಯಾನ್‌ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿದೆ. ದುಡ್ಡಿಗಾಗಿ ಒದ್ದಾಡುವ ಒಬ್ಬ ಸಾಮಾನ್ಯ ಮನುಷ್ಯನ ಭಾವನೆಗಳನ್ನು ಈ ಸಿನಿಮಾ ಹೇಳಬಹುದು ಎಂಬ ಸೂಚನೆಯನ್ನು ಧನಂಜಯ ಆಗಲೇ ಕೊಟ್ಟಿದ್ದಾರೆ. ಹೊಯ್ಸಳ ನಂತರ ಬರುತ್ತಿರುವ ಅವರ ಮೊದಲ ಕನ್ನಡ ಚಿತ್ರ ಇದು. 

ಅಲ್ಲಿಗೆ ಡಾಲಿ ಧನಂಜಯ ಅವರ ಚಿತ್ರ ವರ್ಷದ ಅಂತರದ ನಂತರ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

ಸಮರ್ಥ ಚಿತ್ರತಂಡ
ಈ ಸಿನಿಮಾಗೆ ಕತೆ, ಚಿತ್ರಕತೆ ಮತ್ತು ಸಂಭಾಷಣೆಯನ್ನು ಬರೆದು ಸ್ವತಃ ಪರಮ್‌ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಇದರೊಂದಿಗೆ ಸಿನಮಾ ಮಾಡಬೇಕು ಎಂಬ ಅವರ ಬಹುದಿನಗಳ ಕನಸು ನೆರವೇರಿದಂತಾಗಿದೆ. ಕಳೆದ ವರ್ಷ ಟೆಲಿವಿಷನ್‌ ಚಾನೆಲ್ಲಿನಿಂದ ಹೊರಗೆ ಬಂದಾಗ ತಾನು ಹಿರಿತೆರೆಯಲ್ಲಿ ಕತೆಗಳನ್ನು ಹೇಳಬೇಕು ಎಂದು  ಅವರು ಆಸೆ ಪಟ್ಟಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬಹುದು.

ಇದನ್ನು ಓದಿ : Karnataka 2nd PUC Result 2024: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!

ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವುದು ಜಿಯೋ ಸ್ಟುಡಿಯೋಸ್‌ ನ ಜ್ಯೋತಿ ದೇಶಪಾಂಡೆ. ಈ ವರ್ಷ ಒಂದಾದ ಮೇಲೆ ಒಂದು ಹಿಟ್‌ ಹಿಂದಿ ಸಿನಿಮಾಗಳನ್ನು ಕೊಟ್ಟಿರುವ ಜ್ಯೋತಿ ಮತ್ತು ಜಿಯೋ ಸ್ಟುಡಿಯೋಸ್ ಈ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ವಾಸುಕಿ ವೈಭವ್‌ ಹಾಡುಗಳನ್ನು ಸಂಯೋಜನೆ ಮಾಡಿದ್ದರೆ ನೊಬಿನ್‌ ಪೌಲ್‌ ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. ಈ ಸಿನಿಮಾಗೆ ಅರುಣ್‌ ಬ್ರಹ್ಮನ್‌ ಛಾಯಾಗ್ರಹಣವಿದೆ.
ಸಿನಿಮಾ ಶೀರ್ಷಿಕೆ ಅನಾವರಣ ಮಾಡುತ್ತಲೇ ಇದೇ ಶನಿವಾರ ಟೀಸರ್‌ ಬಿಡುಗಡೆಯಾಗಲಿದೆ ಎಂದು ತಂಡ ಹೇಳಿದೆ.‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News