Dunki Movie : ಶಾರುಖ್ ಖಾನ್ ಹಾಗೂ ಸ್ನೇಹಿತರ ಎಮೋಷನಲ್ ಪಯಣದ ಹಾಡು ನೋಡಿ

Dunki Drop 3 : ಡಂಕಿ ಸಿನಿಮಾದ ಲುಟ್ ಪುಟ್ ಗಯಾ ಹಾಡು ಮೋಡಿ ಮಾಡ್ತಿದೆ. ಶಾರುಖ್ ಹಾಗೂ ತಾಪ್ಸಿ ನಡುವಿನ ಪ್ರೇಮಗೀತೆ ಹಿಟ್ ಲೀಸ್ಟ್ ಸೇರಿದೆ. 

Written by - Chetana Devarmani | Last Updated : Dec 1, 2023, 07:44 PM IST
  • ‘ಡಂಕಿ’ ಸಿನಿಮಾ ಹಾಡು
  • ಶಾರುಖ್‌ ಖಾನ್‌ ಸಿನಿಮಾ ಡಂಕಿ
  • ಬಾಲಿವುಡ್‌ ಖ್ಯಾತ ನಟ ಶಾರುಖ್‌ ಖಾನ್‌
Dunki Movie : ಶಾರುಖ್ ಖಾನ್ ಹಾಗೂ ಸ್ನೇಹಿತರ ಎಮೋಷನಲ್ ಪಯಣದ ಹಾಡು ನೋಡಿ  title=
Dunki Movie

Shah Rukh Khan Songs : ಶಾರುಖ್ ಖಾನ್ ಹಾಗೂ ರಾಜ್‌ ಕುಮಾರ್ ಹಿರಾನಿ  ಈ ಕ್ರೇಜಿ ಕಾಂಬಿನೇಷನ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾ ಡಂಕಿ. ಇದೇ 21ರಂದು ವರ್ಲ್ಡ್ ವೈಡ್ ಚಿತ್ರ ಬಿಡುಗಡೆಯಾಗ್ತಿದ್ದು, ಪ್ರಚಾರ ಭರಾಟೆ ಕೂಡ ಜೋರಾಗಿದೆ. ಡಂಕಿ ಡ್ರಾಪ್-1 ವಿಡಿಯೋ ಅನಾವರಣ ಮಾಡುವ ಮೂಲಕ ಪ್ರಮೋಷನ್ ಶುರು ಮಾಡಿದ್ದ ಚಿತ್ರತಂಡವೀಗ ಡಂಕಿ ಡ್ರಾಪ್-3 ಟೈಟಲ್ ನಡಿ ಎರಡನೇ ಹಾಡನ್ನು ರಿಲೀಸ್ ಮಾಡಿದೆ.

ಡಂಕಿ ಸಿನಿಮಾದ ಲುಟ್ ಪುಟ್ ಗಯಾ ಹಾಡು ಮೋಡಿ ಮಾಡ್ತಿದೆ. ಶಾರುಖ್ ಹಾಗೂ ತಾಪ್ಸಿ ನಡುವಿನ ಪ್ರೇಮಗೀತೆ ಹಿಟ್ ಲೀಸ್ಟ್ ಸೇರಿದೆ. ಇದೀಗ ಡಂಕಿ ಸಿನಿಮಾದ ಎಮೋಷನಲ್ ನಂಬರ್ ಬಿಡುಗಡೆಯಾಗಿದೆ. ‘ನಿಕ್ಲೆ ದ ಕಭಿ ಹಮ್ ಘರ್ ಸೆ’ ಎಂಬ ಸಾಹಿತ್ಯದ ಸಾಂಗ್ ರಿಲೀಸ್ ಆಗಿದೆ. ಜಾವೇದ್ ಅಖ್ತಾರ್ ಸಾಹಿತ್ಯ ಬರೆದಿದ್ದು, ಸೋನು ನಿಗಂ ಕಂಠ ಕುಣಿಸಿದ್ದು, ಪ್ರೀತಂ ಸಂಗೀತ ಹಾಡಿನ ಶ್ರೀಮಂತಿಕೆ ಹೆಚ್ಚಿಸಿದೆ. 

ಇದನ್ನೂ ಓದಿ: ಶ್ರೀಮಂತಿಕೆಯಲ್ಲಿ ಅತ್ತಿಗೆ ಐಶ್ವರ್ಯಾಳನ್ನು ಮೀರಿಸುವರು ಅಮಿತಾಬ್‌ ಪುತ್ರಿ, ಒಟ್ಟು ಆಸ್ತಿ ಎಷ್ಟು?

ನಾಲ್ಕು ಜನ ಸ್ನೇಹಿತರು ಒಂದು ದೇಶವನ್ನು ಬಿಟ್ಟು ಮತ್ತೊಂದು ದೇಶಕ್ಕೆ ಹೋಗುವುದ್ದೇ ಚಿತ್ರದ ಕಥೆ. ಆ ಕಥೆಯ ಎಮೋಷನಲ್ ಪಯಣವನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ‘3 ಇಡಿಯಟ್ಸ್’, ‘ಲಗೆ ರಹೋ ಮುನ್ನಾಭಾಯಿ’, ‘ಪಿಕೆ’, ‘ಸಂಜು’, ‘ಮುನ್ನಾಭಾಯಿ ಎಂಬಿಬಿಎಸ್’ ರೀತಿಯ ಅತ್ಯುತ್ತಮ ಸಿನಿಮಾಗಳನ್ನು ನೀಡಿರುವ ರಾಜ್ಕುಮಾರ್ ಹಿರಾನಿ ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಜೊತೆ ಸೇರಿ ‘ಡಂಕಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಶಾರುಖ್ ಖಾನ್ ಗೆ ನಾಯಕಿಯಾಗಿ ತಾಪ್ಸಿ ಪನ್ನು, ವಿಕ್ಕಿ ಕೌಶಲ್ ಸೇರಿದಂತೆ ಇನ್ನೂ ಕೆಲವು ನಟರು ನಟಿಸಿದ್ದಾರೆ. ಭಾರತದಿಂದ ಅಕ್ರಮವಾಗಿ ಕೆಲ ಯುವಕರು ವಿದೇಶಕ್ಕೆ ತೆರಳುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

‘ಡಂಕಿ’ ಸಿನಿಮಾವನ್ನು ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್ ಎಂಟರ್‌ಟೈನ್ಮೆಂಟ್ ಹಾಗೂ ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಹಾಗೂ ಜಿಯೋ ಸಿನಿಮಾಸ್ ಬ್ಯಾನರ್‌ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಾಣ ಮಾಡಿದ್ದಾರೆ. ಡಿಸೆಂಬರ್ 21ಕ್ಕೆ ‘ಡಂಕಿ’ ಸಿನಿಮಾ ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆ ಆಗಲಿದೆ.

ಇದನ್ನೂ ಓದಿ : ರೇಖಾ ಮತ್ತು ಅಮಿತಾಬ್ ಬಚ್ಚನ್ ನಡುವಿನ ಸಂಬಂಧ ಮುರಿದು ಬಿದ್ದಿದ್ದು ಇದೇ ಕಾರಣಕ್ಕೆ ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News