Ibbani Tabbida Ileyali: ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಗಿರಿಜಾ ಶೆಟ್ಟರ್ ಫಸ್ಟ್ ಲುಕ್ ರಿಲೀಸ್!

Ibbani Thabbida Ileyali First Look: ಚಂದ್ರಜಿತ್ ಬೆಳ್ಳಿಯಪ್ಪನವರು ಈ ಹಿಂದೆ ನಟ-ನಿರ್ದೇಶಕ ರಿಷಬ್ ಶೆಟ್ಟಿ ಪರಿಕಲ್ಪನೆಯ ಕಥಾಸಂಗಮದಲ್ಲಿ 'ರೇನ್‌ಬೊ ಲ್ಯಾಂಡ್‌' ಕಿರುಚಿತ್ರವನ್ನು ನಿರ್ದೇಶಿಸಿದ್ದರು.

Written by - YASHODHA POOJARI | Edited by - Puttaraj K Alur | Last Updated : Aug 12, 2023, 03:02 PM IST
  • ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ
  • ತೆಲುಗಿನ "ಗೀತಾಂಜಲಿ" ಸೇರಿ ಅನೇಕ ಪ್ರಸಿದ್ಧ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್
  • ವಿಭಿನ್ನ ಪ್ರೇಮಕಥಾಹಂದರದಲ್ಲಿ ವಿಹಾನ್ ಹಾಗೂ ಅಂಕಿತಾ ಅಮರ್ ಅಭಿನಯ
Ibbani Tabbida Ileyali: ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಗಿರಿಜಾ ಶೆಟ್ಟರ್ ಫಸ್ಟ್ ಲುಕ್ ರಿಲೀಸ್! title=
‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಫಸ್ಟ್ ಲುಕ್

ಬೆಂಗಳೂರು: ‘ಪರಂವಃ ಸ್ಟುಡಿಯೋಸ್’ ಲಾಂಛನದಲ್ಲಿ ಜಿ.ಎಸ್ ಗುಪ್ತಾ ಹಾಗೂ ನಟ-ನಿರ್ದೇಶಕ ರಕ್ಷಿತ್ ಶೆಟ್ಟಿ ನಿರ್ಮಿಸಿರುವ, ಚಂದ್ರಶೇಖರ್ ಬೆಳ್ಳಿಯಪ್ಪ ನಿರ್ದೇಶನದ ಸುಮಧುರ ಪ್ರೇಮಕಾವ್ಯ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಖ್ಯಾತ ನಟಿ ಗಿರಿಜಾ ಶೆಟ್ಟರ್ ಅಭಿನಯಿಸಿದ್ದಾರೆ.

ತೆಲುಗಿನ "ಗೀತಾಂಜಲಿ" ಚಿತ್ರ ಸೇರಿದಂತೆ ಅನೇಕ ಸುಪ್ರಸಿದ್ಧ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್, ಈ ಚಿತ್ರದಲ್ಲೂ ನಟಿಸಿದ್ದಾರೆ. ಗಿರಿಜಾ ಶೆಟ್ಟರ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅವರಿಗೆ ಸ್ವಾಗತ ಕೋರಿದೆ.

ಇದನ್ನೂ ಓದಿ: 1000 ಚಿತ್ರಗಳಲ್ಲಿ ನಟಿಸಿ ಗಿನ್ನೆಸ್ ದಾಖಲೆ ಬರೆದ ಸೌತ್ ಸ್ಟಾರ್

ವಿಭಿನ್ನ ಪ್ರೇಮಕಥಾಹಂದರ ಹೊಂದಿರುವ ಈ ಚಿತ್ರದ ನಾಯಕ - ನಾಯಕಿಯಾಗಿ ವಿಹಾನ್ ಹಾಗೂ ಅಂಕಿತಾ ಅಮರ್ ಅಭಿನಯಿಸಿದ್ದಾರೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ, ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ ಹಾಗೂ ರಕ್ಷಿತ್ ಕಾಪ್ ಅವರ ಸಂಕಲನ "ಇಬ್ಬನಿ ತಬ್ಬಿದ ಇಳೆಯಲಿ" ಚಿತ್ರಕ್ಕಿದೆ.

ಚಂದ್ರಜಿತ್ ಬೆಳ್ಳಿಯಪ್ಪನವರು ಈ ಹಿಂದೆ ನಟ-ನಿರ್ದೇಶಕ ರಿಷಬ್ ಶೆಟ್ಟಿ ಪರಿಕಲ್ಪನೆಯ ಕಥಾಸಂಗಮದಲ್ಲಿ 'ರೇನ್‌ಬೊ ಲ್ಯಾಂಡ್‌' ಕಿರುಚಿತ್ರವನ್ನು ನಿರ್ದೇಶಿಸಿದ್ದರು. ಚಿತ್ರ ತಂಡವು ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ಪ್ಲಾನ್ ಮಾಡಿದ್ದು,  2023ರ ಬೇಸಿಗೆಯಲ್ಲಿ ಸಿನಿಮಾ ಬಿಡುಗಡೆ ಮಾಡುವ ಗುರಿ ಹೊಂದಿದೆ.

ಇದನ್ನೂ ಓದಿ: Jailer : ಬಾಕ್ಸಾಫೀಸ್‌ನಲ್ಲಿ ಜೈಲರ್‌ ಆರ್ಭಟ; ಸೀಕ್ವೆಲ್ ಅಲ್ಲ ಪ್ರೀಕ್ವೆಲ್.. ಹೀರೊ ರಜನಿನಾ? ಶಿವಣ್ಣನಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News