Kangana Ranaut: ಬಾಲಿವುಡ್‌ ನಟಿ ಕಂಗನಾ ರಣಾವತ್ ಗೋಮಾಂಸ ಇಷ್ಟ ಎಂದಿದ್ದರು..!

Lok Sabha Election 2024: ಕಾಂಗ್ರೆಸ್‌ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿಕೆಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿರುಗೇಟು ನೀಡಿದ್ದು, ʼಇದು ಕಾಂಗ್ರೆಸ್‌ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.

Written by - Puttaraj K Alur | Last Updated : Apr 7, 2024, 06:53 PM IST
  • ಕಂಗನಾ ರಣಾವತ್ ಅವರು ಈ ಹಿಂದೆ ನನಗೆ ಗೋಮಾಂಸ ಇಷ್ಟ ಅಂದಿದ್ದರು
  • ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್
  • ಇದು ಕಾಂಗ್ರೆಸ್‌ನ ಕೊಳಕು ಸಂಸ್ಕೃತಿ ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ತಿರುಗೇಟು
Kangana Ranaut: ಬಾಲಿವುಡ್‌ ನಟಿ ಕಂಗನಾ ರಣಾವತ್ ಗೋಮಾಂಸ ಇಷ್ಟ ಎಂದಿದ್ದರು..! title=
ಕಂಗನಾ ಬಗ್ಗೆ ವಿವಾದಾತ್ಮಕ ಹೇಳಿಕೆ!

Lok Sabha Election 2024: ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿಯ ಲೋಕಸಭಾ ಅಭ್ಯರ್ಥಿ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಕಾಂಗ್ರೆಸ್‌ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಕಂಗನಾ ರಣಾವತ್ ಅವರು ಈ ಹಿಂದೆ ನನಗೆ ಗೋಮಾಂಸ ಇಷ್ಟ ಅಂದಿದ್ದರು ಎಂದು ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಅವರು, ʼತಾನು ಗೋಮಾಂಸವನ್ನು ಇಷ್ಟಪಡುತ್ತೇನೆ ಮತ್ತು ತಿನ್ನುತ್ತೇನೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದ ನಟಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Challenging Star Darshan: ನಟ ದರ್ಶನ್‌ ಕೈ ಶಸ್ತ್ರಚಿಕಿತ್ಸೆ ಯಶಸ್ವಿ, ಶೀಘ್ರವೇ ಡಿಸ್ಚಾರ್ಜ್?

ಕಾಂಗ್ರೆಸ್‌ ನಾಯಕನ ಈ ಹೇಳಿಕೆಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿರುಗೇಟು ನೀಡಿದ್ದು, ʼಇದು ಕಾಂಗ್ರೆಸ್‌ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅವರು ಸಮಸ್ಯೆಗಳ ಬಗ್ಗೆ ಮತ್ತು ನಮ್ಮ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಇದು ಪಕ್ಷದ ಸೋಲಿನ ಹತಾಶ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್"ಮಹಿಳಾ ವಿರೋಧಿ" ಎಂದು ಬಿಜೆಪಿ ನಾಯಕಿ ಶೈನಾ ಎನ್‌ಸಿ ಅವರು ಆರೋಪಿಸಿದ್ದಾರೆ. ಜೂನ್ 4ರಂದು ದೇಶದ ಮಹಿಳೆಯರು ಕಾಂಗ್ರೆಸ್ ಎಂಬ ಮಹಿಳಾ ವಿರೋಧಿ ಪಕ್ಷದ ವಿರುದ್ಧ ಮಾತನಾಡಲಿದ್ದಾರೆ. ಮತ ಚಲಾಯಿಸಿದಾಗ ಅದಕ್ಕೆ ತಕ್ಕ ಉತ್ತರ ಸಿಗಲಿದೆ ಅಂತಾ ಕುಟುಕಿದ್ದಾರೆ.   

ಇದನ್ನೂ ಓದಿ: Indian 2 : ಜೂನ್ ನಲ್ಲಿ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾ ರಿಲೀಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News