ಬಹುನಿರೀಕ್ಷಿತ Emergency ಚಿತ್ರದ ರಿಲೀಸ್‌ ಡೇಟ್‌ ಫಿಕ್ಸ್..‌ 'ಇಂದಿರಾ ಈಸ್ ಇಂಡಿಯಾ, ಇಂಡಿಯಾ ಈಸ್ ಇಂದಿರಾ' ಎಂದ ಕಂಗನಾ

Emergency Movie Teaser: ಕಂಗನಾ ರಣಾವತ್ ಅವರ ಬಹುನಿರೀಕ್ಷಿತ ಎಮರ್ಜೆನ್ಸಿ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಏನಿದೆ ಗೊತ್ತಾ?  

Written by - Chetana Devarmani | Last Updated : Jun 25, 2023, 08:19 AM IST
  • ಕಂಗನಾ ರಣಾವತ್ ಅವರ ಬಹುನಿರೀಕ್ಷಿತ ಸಿನಿಮಾ
  • ಎಮರ್ಜೆನ್ಸಿ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ
  • ಎಮರ್ಜೆನ್ಸಿ ಚಿತ್ರದ ಟೀಸರ್ ಬಿಡುಗಡೆ
ಬಹುನಿರೀಕ್ಷಿತ Emergency ಚಿತ್ರದ ರಿಲೀಸ್‌ ಡೇಟ್‌ ಫಿಕ್ಸ್..‌ 'ಇಂದಿರಾ ಈಸ್ ಇಂಡಿಯಾ, ಇಂಡಿಯಾ ಈಸ್ ಇಂದಿರಾ' ಎಂದ ಕಂಗನಾ   title=
Emergency

Emergency Movie Release Date : ಕಂಗನಾ ರಣಾವತ್ ಅವರ ಬಹುನಿರೀಕ್ಷಿತ ಎಮರ್ಜೆನ್ಸಿ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದಕ್ಕೂ ಮುನ್ನ ಚಿತ್ರದ ಎರಡನೇ ಟೀಸರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಕಂಗನಾ ರಣಾವತ್ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಇದಲ್ಲದೇ ಸಿನಿಮಾವನ್ನೂ ಅವರೇ ನಿರ್ದೇಶಿಸಿದ್ದಾರೆ. ಎಮರ್ಜೆನ್ಸಿ ಚಿತ್ರದಲ್ಲಿ ಕಂಗನಾ ರಣಾವತ್ ಹೊರತಾಗಿ, ಅನುಪಮ್ ಖೇರ್, ಶ್ರೇಯಸ್ ತಲ್ಪಾಡೆ ಮತ್ತು ಮಹಿಮಾ ಚೌಧರಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ - ವಿಜಯ್ ಸೀಕ್ರೆಟ್ ಡೇಟ್? ಪ್ಯಾಚ್‌ಅಪ್‌ ವದಂತಿಗೆ ಸಾಕ್ಷಿ ಈ ವಿಡಿಯೋ!

ʻ25 ಜೂನ್ 1975ʼ ಎಂದು ಒಂದು ನಿಮಿಷದ 12 ಸೆಕೆಂಡುಗಳ ಟೀಸರ್‌ನ ಆರಂಭದಲ್ಲಿ ಬರೆಯಲಾಗಿದೆ. ಈ ದಿನ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಯಿತು. ಇದಾದ ಬಳಿಕ ಜನರು ರಸ್ತೆಗೆ ಇಳಿದಿದ್ದಾರೆ. ಮತ್ತೊಂದೆಡೆ, ಪೊಲೀಸರು ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಗುಂಡು ಹಾರಿಸುತ್ತಿದ್ದಾರೆ. ಇದಾದ ನಂತರ ಹಲವು ದಿನಪತ್ರಿಕೆಗಳ ಕ್ಲಿಪ್ಪಿಂಗ್‌ಗಳನ್ನು ತೋರಿಸಲಾಗುತ್ತದೆ, ಅದರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಬರೆಯಲಾಗಿದೆ. ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಬಂಧಿಸಲಾಗಿದೆ. ಟಿವಿ ಪ್ರಸಾರವನ್ನು ರದ್ದುಗೊಳಿಸಲಾಗಿದೆ. ಟೀಸರ್‌ನ ಕೊನೆಯಲ್ಲಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್, 'ಇಂದಿರಾ ಈಸ್ ಇಂಡಿಯಾ, ಇಂಡಿಯಾ ಈಸ್ ಇಂದಿರಾ' (ಇಂದಿರಾ ಅಂದರೆ ಭಾರತ, ಭಾರತ ಅಂದರೆ ಇಂದಿರಾ) ಎಂದು ಹೇಳುತ್ತಾರೆ.

 

 

ಎಮರ್ಜೆನ್ಸಿ ಸಿನಿಮಾದಲ್ಲಿ ಜಯಪ್ರಕಾಶ್ ನಾರಾಯಣ್ ಪಾತ್ರದಲ್ಲಿ ಅನುಪಮ್ ಖೇರ್ ಕಾಣಿಸಿಕೊಳ್ಳಲಿದ್ದಾರೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜೈಲಿಗೆ ಹೋದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಾಡೆ ನಟಿಸಿದ್ದಾರೆ. ಇದಲ್ಲದೆ, ಇಂದಿರಾ ಗಾಂಧಿಯವರ ಸ್ನೇಹಿತೆಯಾಗಿದ್ದ ಪತ್ರಕರ್ತೆ ಪುಪುಲ್ ಜಯಕರ್ ಪಾತ್ರದಲ್ಲಿ ಮಹಿಮಾ ಚೌಧರಿ ಇದ್ದಾರೆ. ಇಂದಿರಾಗಾಂಧಿ ಪುತ್ರ ಸಂಜಯ್ ಗಾಂಧಿ ಪಾತ್ರದಲ್ಲಿ ವೈಶಾಖ್ ನಾಯರ್, ಮಾಜಿ ಕೇಂದ್ರ ಸಚಿವ ಜಗಜೀವನ್ ರಾಮ್ ಪಾತ್ರದಲ್ಲಿ ಸತೀಶ್ ಕೌಶಿಕ್ ನಟಿಸಿದ್ದಾರೆ. ಚಿತ್ರದಲ್ಲಿ ಮಿಲಿಂದ್ ಸೋಮನ್ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣಿಕ್ ಶಾ ಪಾತ್ರದಲ್ಲಿ ನಟಿಸಿದ್ದಾರೆ. 

ಇದನ್ನೂ ಓದಿ: Keerthy Suresh: "ಅವರನ್ನು ಬಿಟ್ಟು ಯಾರಿಗೂ ಲಿಪ್ ಲಾಕ್ ಮಾಡಲ್ಲ" ಎಂದ ಕೀರ್ತಿ ಸುರೇಶ್!?

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

 

Trending News