ವಿಜಯ್‌ 'ಲಿಯೋ' ಪ್ರಚಾರದಲ್ಲಿ ಕಾಲ್ತುಳಿತ : ನಿರ್ದೇಶಕ ಲೋಕೇಶ್ ಕನಕರಾಜ್‌ಗೆ ಗಾಯ

Lokesh Kanagaraj injured : 'ಲಿಯೋ' ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಗಾಯಗೊಂಡಿದ್ದಾರೆ. 'ಲಿಯೋ' ಸಿನಿಮಾದ ಪ್ರಚಾರದಲ್ಲಿ ನೂಕುನುಗ್ಗಲು ಉಂಟಾದಾಗ ಈ ಘಟನೆ ನಡೆದಿದೆಯಂತೆ. ಈ ಕುರಿತು ಸ್ವತಃ ಅವರೇ ಮಾಹಿತಿ ನೀಡಿದ್ದಾರೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ.

Written by - Krishna N K | Last Updated : Oct 24, 2023, 09:28 PM IST
  • ಲಿಯೋ ಪ್ರಚಾರದ ವೇಳೆ ಕಾಲ್ತುಳಿತ
  • ನಿರ್ದೇಶಕ ಲೋಕೇಶ್‌ ಕನಕರಾಜ್‌ಗೆ ಗಾಯ
  • ಕೇರಳದ ಪಾಲಕ್ಕಾಡ್‌ನಲ್ಲಿ ನಡೆದ ಘಟನೆ
ವಿಜಯ್‌ 'ಲಿಯೋ' ಪ್ರಚಾರದಲ್ಲಿ ಕಾಲ್ತುಳಿತ : ನಿರ್ದೇಶಕ ಲೋಕೇಶ್ ಕನಕರಾಜ್‌ಗೆ ಗಾಯ title=

Vijay Leo movie : 'ಲಿಯೋ' ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಗಾಯಗೊಂಡಿದ್ದಾರೆ. 'ಲಿಯೋ' ಚಿತ್ರದ ಪ್ರಚಾರದ ವೇಳೆ ಕೇರಳದ ಥಿಯೇಟರ್‌ಗೆ ಹೋಗುತ್ತಿದ್ದಾಗ ಕಾಲ್ತುಳಿತ ಸಂಭವಿಸಿ ಲೋಕೇಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದನ್ನು ಸ್ವತಃ ಲೋಕೇಶ್ ಅವರೇ ತಮ್ಮ ಎಕ್ಸ್‌ ಖಾತೆಯಲ್ಲಿ ಬಹಿರಂಗಪಡಿಸಿದ್ದಾರೆ.

ಕಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ಲೋಕೇಶ್ ಕನಕರಾಜ್, ದಳಪತಿ ವಿಜಯ್ ಕಾಂಬಿನೇಷನ್‌ನ 'ಲಿಯೋ' ಚಿತ್ರ ಇದೇ ತಿಂಗಳ 19ರಂದು ತೆರೆಕಂಡಿರುವುದು ಎಲ್ಲರಿಗೂ ಗೊತ್ತೇ ಇದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾದ ಈ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಕಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಸೃಷ್ಟಿಸುತ್ತಿದೆ.

ಇದನ್ನೂ ಓದಿ:'ಸುಬ್ರಹ್ಮಣ್ಯ'ನಾದ ನಟ ರವಿಶಂಕರ್ ಪುತ್ರ...! ಮಗನ ಸಿನಿಮಾಗೆ ಅಪ್ಪನೇ ಡೈರೆಕ್ಟರ್

ಲಿಯೋಗೆ ಆರಂಭದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ನಂತರ ಎಲ್ಲಾ ಭಾಷೆಗಳಲ್ಲಿಯೂ ಭರ್ಜರಿ ಕಲೆಕ್ಷನ್ ಮಾಡಿತು. ಈ ಕ್ರಮದಲ್ಲಿ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಭಾಗವಾಗಿ ಇತ್ತೀಚೆಗೆ ನಿರ್ದೇಶಕ ಕೇರಳದ ಪಾಲಕ್ಕಾಡ್ ನ ಥಿಯೇಟರ್‌ಗೆ ಭೇಟಿ ನೀಡಿದ್ದರು.

ನಿರ್ದೇಶಕ ಲೋಕೇಶ್‌ ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಗಮಿಸಿದ್ದರು. ಅದಲ್ಲದೆ ಲೋಕೇಶ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಲೋಕೇಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ: ಸ್ಟಾರ್‌ ನಟನ ಮಗನ ಜೊತೆ ಅರ್ಜುನ್ ಸರ್ಜಾ ಮಗಳ ನಿಶ್ಚಿತಾರ್ಥ..! ಯಾರು ಆ ನಟ..?

ಈ ಕುರಿತು ಲೋಕೇಶ್ ತಮ್ಮ ಟ್ವಿಟ್ಟರ್ (ಎಕ್ಸ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರೀತಿ ತೋರಿದ ಕೇರಳ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ, ಪಾಲಕ್ಕಾಡ್‌ನಲ್ಲಿ ಅಭಿಮಾನಿಗಳನ್ನು ಭೇಟಿಯಾಗಲು ತುಂಬಾ ಸಂತೋಷವಾಯಿತು, ಜನಸಂದಣಿಯಿಂದ ಸಣ್ಣಪುಟ್ಟ ಗಾಯಗಳಾಗಿವೆ. ತ್ರಿಶೂರ್ ಮತ್ತು ಕೊಚ್ಚಿಯಲ್ಲಿ ನಡೆಯಲಿರುವ ಪ್ರಚಾರ ಕಾರ್ಯಕ್ರಮಗಳಿಗೆ ಮುಂದಿನ ದಿನ ಹಾಜರಾಗುವೆ, ಶೀಘ್ರದಲ್ಲೇ ಕೇರಳಕ್ಕೆ ಬಂದು ಎಲ್ಲರನ್ನೂ ಭೇಟಿಯಾಗುತ್ತೆನೆ ಎಂದು ಹೇಳಿಕೊಂಡಿದ್ದಾರೆ.

ಸುಮಾರು 200 ಕೋಟಿ ರೂಪಾಯಿಗಳ ಬೃಹತ್ ಬಜೆಟ್‌ನಲ್ಲಿ ತಯಾರಾದ ಈ ಚಿತ್ರದಲ್ಲಿ ವಿಜಯ್ ಜೊತೆ ನಾಯಕಿಯಾಗಿ ತ್ರಿಶಾ ನಟಿಸಿದ್ದಾರೆ. ಸಂಜಯ್ ದತ್, ಅರ್ಜುನ್, ಪ್ರಿಯಾ ಆನಂದ್, ಗೌತಮ್ ಮೆನನ್, ಮ್ಯಾಥ್ಯೂ ಥಾಮಸ್, ಮನ್ಸೂರ್ ಅಲಿ ಖಾನ್ ಮತ್ತು ಮಿಶ್ಕಿನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅನಿರುದ್ಧ್ ರವಿಚಂದ್ರನ್ ಸಂಗೀತ ಸಂಯೋಜಿಸಿರುವ ಈ ಚಿತ್ರವನ್ನು ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಎಸ್. ಎಸ್ ಲಲಿತ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News