Rashmika Mandanna: ಡೀಪ್ ಫೇಕ್ ಆರೋಪಿ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಶ್ಮಿಕಾ.. ಏನಂದ್ರು ಗೊತ್ತಾ?

Rashmika Deep fake Video Case: ನಿನ್ನೆ ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸದ್ಯ ನಟಿ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ..  

Written by - Savita M B | Last Updated : Jan 21, 2024, 04:45 PM IST
  • ಕೆಲವು ತಿಂಗಳ ಹಿಂದೆ ನಾಯಕಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಗೊತ್ತೇ ಇದೆ
  • ಇದು ದೇಶಾದ್ಯಂತ ಚರ್ಚೆಗೆ ಗ್ರಾಸವಾಯಿತು.
  • ಈ ಡೀಪ್ ಫೇಕ್ ಕೇಸ್ ನ ಆರೋಪಿಗಳ ಬಂಧನದ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ
Rashmika Mandanna: ಡೀಪ್ ಫೇಕ್ ಆರೋಪಿ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಶ್ಮಿಕಾ.. ಏನಂದ್ರು ಗೊತ್ತಾ?  title=

Rashmika Mandanna: ಕೆಲವು ತಿಂಗಳ ಹಿಂದೆ ನಾಯಕಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಗೊತ್ತೇ ಇದೆ. ಇದು ದೇಶಾದ್ಯಂತ ಚರ್ಚೆಗೆ ಗ್ರಾಸವಾಯಿತು. ಈ ಬಗ್ಗೆ ರಶ್ಮಿಕಾ ಕೂಡ ಪ್ರತಿಕ್ರಿಯಿಸಿ ಪೊಲೀಸರಿಗೆ ದೂರು ನೀಡಿದ್ದಲ್ಲದೇ ಹಲವು ಚಿತ್ರರಂಗ ಮತ್ತು ರಾಜಕೀಯ ಗಣ್ಯರು ಪ್ರತಿಕ್ರಿಯಿಸಿದ್ದು, ಇಂತಹ ಕೃತ್ಯಗಳನ್ನು ಖಂಡಿಸಿದ್ದರು.. ದೆಹಲಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ.. ತನಿಖೆ ಆರಂಭಿಸಿದ್ದರು...

ಇದನ್ನೂ ಓದಿ-ಮಹೇಶ್‌ ಹಾದಿಯಲ್ಲಿ ಸಿತಾರ ..! ಅನಾಥ ಮಕ್ಕಳಿಗಾಗಿ 'ಗುಂಟೂರು ಕರಂ' ವಿಶೇಷ ಪ್ರದರ್ಶನ..

ಮೊದಲಿಗೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಕೆಲವರನ್ನು ಬಂಧಿಸಲಾಗಿತ್ತು. ಬಳಿಕ ನಿನ್ನೆ ರಶ್ಮಿಕಾ ಅವರ ಡೀಪ್ ಫೇಕ್ ವಿಡಿಯೋ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.. ಆಂಧ್ರಪ್ರದೇಶ ಮೂಲದ ಎಮಾನಿ ನವೀನ್ ನನ್ನು ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದ್ದು, ದೆಹಲಿ ಪೊಲೀಸರು ಬಂಧಿಸಿ ದೆಹಲಿಗೆ ಕರೆದೊಯ್ದಿದ್ದಾರೆ...

ಇದನ್ನೂ ಓದಿ-ಒಂದು ಕಾಲದಲ್ಲಿ ಹಿಂದಿ ಚಿತ್ರರಂಗವನ್ನೇ ದ್ವೇಷಿಸುತ್ತಿದ್ದ ಈಕೆ ಸದ್ಯ ಬಾಲಿವುಡ್‌ನ ಡ್ರೀಮ್‌ ಗರ್ಲ್!

ಸದ್ಯ ಈ ಡೀಪ್ ಫೇಕ್ ಕೇಸ್ ನ ಆರೋಪಿಗಳ ಬಂಧನದ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿದ್ದು.. "ಇದಕ್ಕೆ ಕಾರಣರಾದವರನ್ನು ಬಂಧಿಸಿದ್ದಕ್ಕಾಗಿ ನಾನು ದೆಹಲಿ ಪೊಲೀಸರಿಗೆ ಧನ್ಯವಾದ ಹೇಳುತ್ತೇನೆ. ಈ ವಿಷಯದಲ್ಲಿ ನನ್ನನ್ನು ಬೆಂಬಲಿಸಿದ ಮತ್ತು ನನ್ನ ಮೇಲೆ ಪ್ರೀತಿ ತೋರಿದವರಿಗೆ ಧನ್ಯವಾದಗಳು... ಹುಡುಗರೇ, ಹುಡುಗಿಯರೇ.. ನಿಮಗೆ ತಿಳಿಯದಂತೆ ನಿಮ್ಮ ಫೋಟೋವನ್ನು ಮಾರ್ಫಿಂಗ್ ಮಾಡುವುದು ಖಂಡಿತ ತಪ್ಪು.. ಇದನ್ನು ನೆನಪಿಟ್ಟುಕೊಳ್ಳಿ" ಎಂದು ಪೋಸ್ಟ್ ಮಾಡಿದ್ದಾರೆ..

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News