Rashmika Movie: ಪ್ರಭಾಸ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಗ್ರ್ಯಾಂಡ್ ಎಂಟ್ರಿ.!

Rashmika Mandanna In Prabhas Movie: ನಟ ಪ್ರಭಾಸ್ ಅವರ ಹೊಸ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಎಂಟ್ರಿ ನೀಡುತ್ತಿದ್ದಾರೆ ಎಂಬ ಸುದ್ದಿ ಸಿನಿ ಪ್ರೇಕ್ಷಕರಲ್ಲಿ ಸಂತಸ ಮೂಡಿಸಿದೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಚಿತ್ರದಲ್ಲಿ ಪ್ರಭಾಸ್ ಜೊತೆ ರಶ್ಮಿಕಾ ನಟಿಸಲಿದ್ದಾರೆ ಎನ್ನಲಾಗ್ತಿದೆ. 

Written by - Chetana Devarmani | Last Updated : Feb 12, 2024, 12:03 PM IST
  • ರಶ್ಮಿಕಾ ಮಂದಣ್ಣ ಜೊತೆ ಪ್ರಭಾಸ್‌ ಸಿನಿಮಾ
  • ಪ್ರಭಾಸ್‌ ಸ್ಪಿರಿಟ್‌ ಸಿನಿಮಾದಲ್ಲಿ ರಶ್ಮಿಕಾ
  • ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಸ್ಪಿರಿಟ್‌
Rashmika Movie: ಪ್ರಭಾಸ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಗ್ರ್ಯಾಂಡ್ ಎಂಟ್ರಿ.!  title=
Rashmika Mandanna

Rashmika Mandanna Next Movie With Prabhas: ಅನಿಮಲ್ ಚಿತ್ರದ ಅದ್ಭುತ ಯಶಸ್ಸಿನ ನಂತರ‌ ಸಂದೀಪ್ ರೆಡ್ಡಿ ವಂಗಾ ಅವರ ಮುಂದಿನ ಸಿನಿಮಾದಲ್ಲಿ ರಶ್ಮಿಕಾ ಚಾನ್ಸ್‌ ಪಡೆದಿದ್ದಾರೆ ಎನ್ನಲಾಗ್ತಿದೆ. ಸಂದೀಪ್ ರೆಡ್ಡಿ ವಂಗಾ ಅವರು ನಟ ಪ್ರಭಾಸ್ ಜೊತೆ ಮುಂದಿನ ಸಿನಿಮಾ ಮಾಡುತ್ತಿದ್ದಾರೆ. ಸಂದೀಪ್ ರೆಡ್ಡಿ ವಂಗಾ ಮತ್ತು ಪ್ರಭಾಸ್ ಜೊತೆ ಪ್ಯಾನ್ ಇಂಡಿಯಾ ಸಿನಿಮಾ 'ಸ್ಪಿರಿಟ್' ಅನ್ನು ಬಹಳ ಹಿಂದೆಯೇ ಘೋಷಿಸಿದ್ದಾರೆ. 

ಇದೀಗ 'ಸ್ಪಿರಿಟ್'ಗೆ ಸಂಬಂಧಿಸಿದಂತೆ ಹೊಸ ಅಪ್‌ಡೇಟ್‌ ಒಂದು ಹೊರಬಿದ್ದಿದೆ. ಅದರ ಪ್ರಕಾರ, ರಶ್ಮಿಕಾ ಮಂದಣ್ಣ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಮತ್ತು ಪ್ರಭಾಸ್ ಅಭಿನಯದ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಿಚ್ಚ ಸುದೀಪ್‌ʼಗೆ ಈ ಬಾಲಿವುಡ್‌ ನಟಿಯ ಮೇಲೆ ಕ್ರಶ್ ಅಂತೆ ‌! 

ಪ್ರಭಾಸ್ ಗೆ ಜೋಡಿಯಾಗಲಿದ್ದಾರೆ ರಶ್ಮಿಕಾ 

ವರದಿಗಳ ಪ್ರಕಾರ, ರಶ್ಮಿಕಾ ಮಂದಣ್ಣ ಸಂದೀಪ್ ರೆಡ್ಡಿ ವಂಗಾ ಅವರೊಂದಿಗೆ ಎರಡನೇ ಬಾರಿಗೆ ಕೆಲಸ ಮಾಡಲಿದ್ದಾರೆ. 'ಅನಿಮಲ್' ಚಿತ್ರದಲ್ಲಿ ರಣಬೀರ್ ಕಪೂರ್ ಜೊತೆ ತೆರೆ ಹಂಚಿಕೊಂಡ ನಂತರ ರಶ್ಮಿಕಾ ಮಂದಣ್ಣ‌ ಇದೀಗ ಪ್ರಭಾಸ್ ಜೊತೆ 'ಸ್ಪಿರಿಟ್' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

'ಸ್ಪಿರಿಟ್' ಬಗ್ಗೆ ಚಲನಚಿತ್ರ ನಿರ್ಮಾಪಕರು ಅಥವಾ ತಂಡದಿಂದ ಯಾವುದೇ ಅಪ್‌ಡೇಟ್‌ ಹೊರಬಿದ್ದಿಲ್ಲ. ಆದರೆ 2024 ರ ದ್ವಿತೀಯಾರ್ಧದಲ್ಲಿ ಸಂದೀಪ್ ರೆಡ್ಡಿ ವಂಗಾ ಈ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಬಹುದು ಎಂದು ವೈರಲ್ ವರದಿಗಳಲ್ಲಿ ಹೇಳಲಾಗುತ್ತಿದೆ.

ರಶ್ಮಿಕಾ ಮಂದಣ್ಣ ಮುಂದಿನ ಸಿನಿಮಾ 

ಅನಿಮಲ್‌ ಚಿತ್ರದ ನಂತರ ರಶ್ಮಿಕಾ ಮಂದಣ್ಣ ಪುಷ್ಪ 2 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲು ಅರ್ಜುನ್ ಅಭಿನಯದ 'ಪುಷ್ಪ 2' ಚಿತ್ರದ ಶೂಟಿಂಗ್ ಪ್ರಸ್ತುತ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. 

ಇದನ್ನೂ ಓದಿ: ಪ್ರಭುದೇವ ಜೊತೆ ಪ್ರೀತಿ.. ಕಿರಿಯ ನಿರ್ದೇಶಕನ ಜೊತೆ ಮದುವೆ, ಸೌತ್‌ʼನ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಈಕೆ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News