ರಿಷಿ ʼರುದ್ರ ಗರುಡ ಪುರಾಣʼ ಚಿತ್ರದ ಫಸ್ಟ್ ಲುಕ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್‌..!

actor Rishi : ರುದ್ರ ಗರುಡ ಪುರಾಣ ಸಿನಿಮಾದ ಫಸ್ಟ್‌ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

Written by - Krishna N K | Last Updated : May 1, 2024, 10:25 PM IST
    • ʼರುದ್ರ ಗರುಡ ಪುರಾಣʼ ಚಿತ್ರದ ಫಸ್ಟ್ ಲುಕ್ ರಿಲೀಸ್‌
    • ಸಿನಿಮಾದ ಫಸ್ಟ್‌ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ
    • ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ(ತನಿಖಾಧಿಕಾರಿ) ಕಾಣಿಸಿಕೊಂಡಿದ್ದಾರೆ.
ರಿಷಿ ʼರುದ್ರ ಗರುಡ ಪುರಾಣʼ ಚಿತ್ರದ ಫಸ್ಟ್ ಲುಕ್ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್‌..! title=

Rudra Ggaruda Purana movie : "ಆಪರೇಶನ್ ಅಲಮೇಲ್ಲಮ್ಮ", "ಕವಲುದಾರಿ" ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಹಾಗೂ ಜನಪ್ರಿಯ "ಸೈತಾನ್" ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ "ರುದ್ರ ಗರುಡ ಪುರಾಣ" ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ರಿಷಿ ಅವರು ಅಭಿನಯಿಸಿದ್ದ "ಕವಲುದಾರಿ" ಚಿತ್ರ ಪುನೀತ್ ರಾಜಕುಮಾರ್ ಅವರ ಪಿ.ಆರ್.ಕೆ ಪ್ರೊಡಕ್ಷನ್ಸ್ ನಿಂದ ನಿರ್ಮಾಣವಾಗಿತ್ತು. 

ಬಿಡುಗಡೆಯಾದ ಕ್ಷಣದಿಂದಲೇ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ(ತನಿಖಾಧಿಕಾರಿ)  ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ನೋಡಿದ ಕೂಡಲೇ ಚಿತ್ರವನ್ನು ನೋಡಲೇಬೇಕು ಎನ್ನುವ ಉತ್ಸಾಹವನ್ನು ನಿರ್ದೇಶಕರು ಹುಟ್ಟಿ ಹಾಕಿದ್ದಾರೆ. ರಿಷಿ, ಕನ್ನಡ ಹಾಗೂ ತೆಲುಗು ಎರಡು ಚಿತ್ರರಂಗದಲ್ಲೂ ಹೆಸರು ಮಾಡಿದ್ದಾರೆ‌‌.  "ರುದ್ರ ಗರುಡ  ಪುರಾಣ" ಚಿತ್ರದ ರಿಷಿ ಅವರ ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ‌ ಹಾಗೂ ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. 

ಇದನ್ನೂ ಓದಿ:ಗ್ಲಾಮರ್‌ಸ್ ಲುಕ್ ನಲ್ಲಿ ಅದಿತಿ, ಮೋಡಿಮಾಡುವ ಫೋಟೋಸ್ ಇಲ್ಲಿವೆ

ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. "ಚಂಬಲ್", " ಡಿಯರ್ ವಿಕ್ರಮ್"  ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಕೆಪಿ ಸಂಗೀತ ನಿರ್ದೇಶನ, ಸಂದೀಪ್ ಕುಮಾರ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನ ಈ ಚಿತ್ರಕ್ಕಿದೆ.

ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರಿ, ಕೆ.ಎಸ್ ಶ್ರೀಧರ್, ಅಶ್ವಿನಿ ಗೌಡ,  ರಾಮ್ ಪವನ್, ವಂಶಿ, ಆಕರ್ಷ್, ಜೋಸೆಫ್, ಪ್ರಭಾಕರ್, ಗೌತಮ್ ಮೈಸೂರು, ಸ್ನೇಕ್ ಶ್ಯಾಮ್, ರಂಗನಾಥ್ ಭಾರದ್ವಾಜ್, ಕಾಮಿಡಿ ಕಿಲಾಡಿಗಳು ಜಗಪ್ಪ, ಪ್ರಸನ್ನ ಹಂಡ್ರಂಗಿ, ರದ್ವಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈಗಾಗಲೇ "ರುದ್ರ ಗರುಡ ಪುರಾಣ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ‌. ಜುಲೈ ವೇಳೆಗೆ ಬಹು ನಿರೀಕ್ಷಿತ ಈ ಚಿತ್ರ ತೆರೆಗೆ ಬರಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News