ಇಂದ್ರಜಿತ್ ಲಂಕೇಶ್ ಪುತ್ರನ ಮೊದಲ ಸಿನಿಮಾ ʻಗೌರಿʼ ಸಾಂಗ್‌ ರಿಲೀಸ್‌

Gauri song release: ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ "ಗೌರಿ" ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು.

Written by - YASHODHA POOJARI | Last Updated : May 14, 2024, 04:35 PM IST
  • ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್
  • ʼಗೌರಿʼ ಮೂಲಕ ಸ್ಯಾಂಡಲ್‌ವುಡ್‌ಗೆ ಸಮರ್ಜಿತ್‌ ಲಂಕೇಶ್‌ ಎಂಟ್ರಿ
  • ಬೆಂಗಳೂರಿನಲ್ಲಿ ʻಗೌರಿʼ ಚಿತ್ರದ ಮೊದಲ ಹಾಡು ಲೋಕಾರ್ಪಣೆ
ಇಂದ್ರಜಿತ್ ಲಂಕೇಶ್ ಪುತ್ರನ ಮೊದಲ ಸಿನಿಮಾ ʻಗೌರಿʼ ಸಾಂಗ್‌ ರಿಲೀಸ್‌  title=

Indrajit Lankesh Son First Movie : ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ "ಗೌರಿ" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚಿಗೆ ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ "ಗೌರಿ" ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು.

ಇಂದ್ರಜಿತ್ ಲಂಕೇಶ್, ಸಮರ್ಜಿತ್ ಲಂಕೇಶ್, ಸಾನ್ಯಾ ಅಯ್ಯರ್, ಅವಿನಾಶ್, ವಿಷ್ಣು ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಜಯ್ ಈಶ್ವರ್ ಬರೆದಿರುವ "ಟೈಮ್ ಬರತ್ತೆ" ಎಂಬ ಹಾಡು ಈ ಚಿತ್ರದ ಚೊಚ್ಚಲಗೀತೆಯಾಗಿ ಬಿಡುಗಡೆಯಾಗಿದ್ದು, ಖ್ಯಾತ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಯವಜನತೆಗೆ ಹತ್ತಿರವಾಗಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಇದನ್ನೂ ಓದಿ: ನಟಿ ಅನಸೂಯಾ ಕೇವಲ 500 ರೂಪಾಯಿಗಾಗಿ ಇಂಥ ಕೆಲಸ ಮಾಡಿದ್ದರಂತೆ !!

ಹಾಡು ಬಿಡುಗಡೆ ನಂತರ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್, ಇಂದು "ಗೌರಿ" ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದೆ. ಐದು ಜನ ಸಂಗೀತ ನಿರ್ದೇಶಕರು ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಭಾರತದ ಹನ್ನೆರಡಕ್ಕೂ ಅಧಿಕ ಹೆಸರಾಂತ ಗಾಯಕರು "ಗೌರಿ" ಚಿತ್ರದ ಹಾಡುಗಳನ್ನು ಹಾಡಿದ್ದಾರೆ. 

ಚಂದನ್ ಶೆಟ್ಟಿ ಸಂಗೀತ ನೀಡಿ ಹಾಡಿರುವ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ‌. ಇದರ ಜೊತೆಗೆ ಈ ಹಾಡಿಗೆ ನಾಯಕ ಸಮರ್ಜಿತ್, ನಾಯಕಿ ಸಾನ್ಯಾ ಅಯ್ಯರ್ ಹಾಗೂ ನಟಿ ಸಂಯುಕ್ತ ಹೆಗಡೆ ರೀಲ್ಸ್ ಕೂಡ ಮಾಡಿದ್ದಾರೆ‌. ಈ ಹಾಡಿನ ಲಿರಿಕಲ್ ವಿಡಿಯೋ ಹಾಗೂ ರೀಲ್ಸ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಉಳಿದ ಹಾಡುಗಳು ಅನಾವರಣವಾಗಲಿದೆ. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌‌ ಎಂದರು.

"ಗೌರಿ" ಚಿತ್ರದ ಮೊದಲ ಹಾಡಿಗೆ ಸಿಗುತ್ತಿರುವ ಮೆಚ್ಚುಗೆಗೆ ಮನ ತುಂಬಿ ಬಂದಿದೆ ನಿಮ್ಮೆಲ್ಲರ ಹಾರೈಕೆ ನಮ್ಮ ಚಿತ್ರಕ್ಕಿರಲಿ ಎಂದರು ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್.

ಇದನ್ನೂ ಓದಿ: ಮತ್ತೊಂದು ಕರಾವಳಿ ಕಥೆ ಹೊತ್ತು ಬಂದ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News