ʻಡಂಕಿ’ ಧಮಾಕ.. ಅಭಿಮಾನಿಗಳನ್ನು ಭೇಟಿಯಾದ ಶಾರುಖ್ ಖಾನ್.!

Shah Rukh Khan: ಶಾರುಖ್ ಖಾನ್ ನಟನೆಯ 'ಡಂಕಿ' ಸಿನಿಮಾ ಗೆಲುವಿನ ಓಟ ಮುಂದುವರೆದಿದೆ. ಡಿ.21ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. 

Written by - Chetana Devarmani | Last Updated : Dec 26, 2023, 06:05 PM IST
  • ಶಾರುಖ್ ಖಾನ್ ನಟನೆಯ 'ಡಂಕಿ' ಸಿನಿಮಾ
  • ಅಭಿಮಾನಿಗಳನ್ನು ಭೇಟಿಯಾದ ಶಾರುಖ್ ಖಾನ್
  • ಉತ್ತಮ ಪ್ರದರ್ಶನ ಕಾಣುತ್ತಿರುವ ಡಂಕಿ ಸಿನಿಮಾ
ʻಡಂಕಿ’ ಧಮಾಕ.. ಅಭಿಮಾನಿಗಳನ್ನು ಭೇಟಿಯಾದ ಶಾರುಖ್ ಖಾನ್.!  title=

Shah Rukh Khan: ಶಾರುಖ್ ಖಾನ್ ನಟನೆಯ 'ಡಂಕಿ' ಸಿನಿಮಾ ಗೆಲುವಿನ ಓಟ ಮುಂದುವರೆದಿದೆ. ಡಿ.21ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಡಂಕಿ ಸಿನಿಮಾಗೆ ಪ್ರೇಕ್ಷಕ ತೋರಿಸುತ್ತಿರುವ ಪ್ರೀತಿಗೆ ಕಿಂಗ್ ಖಾನ್ ಫಿದಾ ಆಗಿದ್ದಾರೆ. ಈ ಹಿನ್ನೆಲೆ ಭಾನುವಾರದಂದು ತಮ್ಮ ನಿವಾಸ ಮನ್ನತ್ ಎದುರು ಜಮಾಯಿಸಿದ್ದ ನೂರಾರು ಅಭಿಮಾನಿಗಳಿಗೆ ಶಾರುಖ್ ದರ್ಶನ ಕೊಟ್ಟಿದ್ದಾರೆ. ತಮ್ಮ ಸಿಗ್ನೇಚರ್ ಶೈಲಿಯ ಪೋಸ್ ನೀಡಿ ಫ್ಯಾನ್ಸ್ ಗೆ ಧನ್ಯವಾದ ತಿಳಿಸಿದ್ದಾರೆ.

ರಾಜ್‌ಕುಮಾರ್ ಹಿರಾನಿ ನಿರ್ದೇಶನದ ಕಾಮಿಡಿ ಡ್ರಾಮಾ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ಬೊಮಾನ್ ಇರಾನಿ ನಟಿಸಿದ್ದಾರೆ. ಜಿಯೋ ಸ್ಟುಡಿಯೋಸ್ ಜೊತೆ ಸೇರಿ ಶಾರುಖ್ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಒಂದು ಸಿಂಪಲ್ ಕಥೆಯನ್ನು ಬಹಳ ತಮಾಷೆಯಾಗಿ ಅಷ್ಟೇ ಭಾವನಾತ್ಮಕವಾಗಿ ರಾಜ್‌ಕುಮಾರ್ ಹಿರಾನಿ ಹೇಳಿ ಗೆದ್ದಿದ್ದಾರೆ.

ಇದನ್ನೂ ಓದಿ: ಮಾಲಿವುಡ್‌ಗೆ ಕಾಲಿಟ್ಟ ದಿಯಾ ಹೀರೋ ದೀಕ್ಷಿತ್ ಶೆಟ್ಟಿ.. ಸೆಟ್ಟೇರಿತು ಒಪ್ಪೀಸ್ ಸಿನಿಮಾ! 

 ಕಿಂಗ್ ಖಾನ್- ಹಿರಾನಿ ಒಟ್ಟಿಗೆ ಕೈಜೋಡಿಸುತ್ತಿದ್ದಾರೆ ಎಂದಾಗಲೇ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿತ್ತು. 'ಡಂಕಿ' ಎನ್ನುವ ವಿಭಿನ್ನ ಟೈಟಲ್ ಕೂಡ ಕುತೂಹಲ ಮೂಡಿಸಿದ್ದು ಸುಳ್ಳಲ್ಲ. 'ಮುನ್ನಾಭಾಯ್' ಸರಣಿ, 'ಪಿಕೆ', 'ಸಂಜು' ರೀತಿಯ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದ ನಿರ್ದೇಶಕರು ಈ ಬಾರಿ ಯಾವ ಕಥೆ ಹೇಳುತ್ತಾರೆ ಎನ್ನುವ ನಿರೀಕ್ಷೆ ಇತ್ತು. 'ಜೀರೊ' ಸಿನಿಮಾ ಸೋಲಿನ ಬಳಿಕ ಸೈಲೆಂಟ್ ಆಗಿದ್ದ ಶಾರುಖ್ ಖಾನ್ ಈ ವರ್ಷ 'ಪಠಾಣ್' ಆಗಿ ಭರ್ಜರಿ ಕಂಬ್ಯಾಕ್ ಮಾಡಿದ್ದರು. ಚಿತ್ರ ಸಾವಿರ ಕೋಟಿ ರೂ. ಕಲೆಕ್ಷನ್ ಗಡಿ ದಾಟಿತ್ತು. ಬಳಿಕ ಬಂದ 'ಜವಾನ್' ಕೂಡ ಬಾಕ್ಸಾಫೀಸ್ ಶೇಕ್ ಮಾಡಿತ್ತು. ಈ ಸಿನಿಮಾ ಕೂಡ 1000 ಕೋಟಿ ರೂ. ಕ್ಲಬ್ ಸೇರಿತ್ತು. ಹಾಗಾಗಿ 'ಡಂಕಿ' ಸಿನಿಮಾ ಬಗ್ಗೆ ಸಹಜವಾಗಿಯೇ ಕ್ರೇಜ್ ಹೆಚ್ಚಾಗಿತ್ತು. 

ಸುಖಿ(ವಿಕ್ಕಿ ಕೌಶಲ್), ಮನು(ತಾಪ್ಸಿ), ಬಲ್ಲಿ(ಅನಿಲ್ ಗೋವರ್), ಬುಗ್ಗು(ವಿಕ್ರಂ ಕೌಚರ್) ಎನ್ನುವ ನಾಲ್ಕು ಜನ ಸ್ನೇಹಿತರು. 1995ರಲ್ಲಿ ಪಂಜಾಬ್‌ನ ಒಂದು ಹಳ್ಳಿಯಲ್ಲಿ ವಾಸಿಸುತ್ತಿರುತ್ತಾರೆ. ಆರ್ಥಿಕ ಸಮಸ್ಯೆ ಎದುರಿಸುವ ಇವರು ಲಂಡನ್‌ಗೆ ಹೋಗಿ ಹಣ ಸಂಪಾದಿಸುವ ಕನಸು ಕಾಣುತ್ತಾರೆ. ಆದರೆ ಅದಕ್ಕೆ ಬೇಕಾದ ವಿದ್ಯಾರ್ಹತೆ, ಇಂಗ್ಲೀಷ್ ಮಾತನಾಡುವ ಕೌಶಲ್ಯ ಇರುವುದಿಲ್ಲ. ಅಷ್ಟರಲ್ಲಿ ಹರ್ಡಿ ಸಿಂಗ್ ಎನ್ನುವ ಮಾಜಿ ಸೈನಿಕ ಆ ಊರಿಗೆ ಬರ್ತಾನೆ. ಆತ ಇವರನ್ನು ಲಂಡನ್‌ಗೆ ತಲುಪಿಸಲು ಪ್ರಯತ್ನಿಸುತ್ತಾನೆ. ಆದರೆ ಅದು ಲೀಗಲ್ ಆಗಿ ಅಲ್ಲ. ಇಲ್ಲೀಗಲ್ ಆಗಿ. ಅಷ್ಟಕ್ಕೂ ಅವರೆಲ್ಲಾ ವಾಮಮಾರ್ಗ(ಡಂಕಿ)ದಲ್ಲಿ ಲಂಡನ್‌ಗೆ ಹೋದ್ರಾ? ಮುಂದೆ ಏನಾಯ್ತು? ಎನ್ನುವುದೇ ಸಿನಿಮಾ ಕಥೆ.

ಇದನ್ನೂ ಓದಿ: Charithrya Ganesh: ಸೀರೆಯುಟ್ಟು ಮಿಂಚಿದ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News