ಹಾರಾರ್ ಕಾಮಿಡಿ ʼಛೂ ಮಂತರ್ʼ ಚಿತ್ರದಲ್ಲಿ ಶರಣ್, ಚಿಕ್ಕಣ್ಣ..! ಮತ್ತೇ ಒಂದಾದ ಅಧ್ಯಕ್ಷ, ಉಪಾಧ್ಯಕ್ಷ

ತಮ್ಮ ಅಮೋಘ ‌ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ ʼಛೂ ಮಂತರ್ʼ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್‌ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ. 

Written by - Krishna N K | Last Updated : Dec 20, 2022, 02:06 PM IST
  • ನಟ ಶರಣ್ ʼಛೂ ಮಂತರ್ʼ ಸಿನಿಮಾದ ನಾಯಕರಾಗಿ ನಟಿಸುತ್ತಿದ್ದಾರೆ.
  • ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದಲ್ಲಿದ್ದಾರೆ.
  • ಅಧ್ಯಕ್ಷ, ಉಪಾಧ್ಯಕ್ಷ ಮತ್ತೇ ಒಂದಾಗಿದ್ದು, ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ಖಚಿತ.
ಹಾರಾರ್ ಕಾಮಿಡಿ ʼಛೂ ಮಂತರ್ʼ ಚಿತ್ರದಲ್ಲಿ ಶರಣ್, ಚಿಕ್ಕಣ್ಣ..! ಮತ್ತೇ ಒಂದಾದ ಅಧ್ಯಕ್ಷ, ಉಪಾಧ್ಯಕ್ಷ title=

Chhoo Mantar Kannada movie : ತಮ್ಮ ಅಮೋಘ ‌ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ ʼಛೂ ಮಂತರ್ʼ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ. ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್‌ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ. 

ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡುತ್ತಾ ಬಂದಿರುವ, ತರುಣ್ ಸ್ಟುಡಿಯೋಸ್  ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇದು ಈ ಸಂಸ್ಥೆಯಿಂದ ನಿರ್ಮಾಣವಾಗಿರುವ ಐದನೇ ಚಿತ್ರ. "ಕರ್ವ" ಚಿತ್ರದ‌ ಮೂಲಕ ಕನ್ನಡಿಗರ ಮನಗೆದ್ದಿರುವ ನವನೀತ್, ಕಥೆ, ಚಿತ್ರಕಥೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 

ಇದನ್ನೂ ಓದಿ: pushpa 2 : ಅಲ್ಲು ಎದುರು ಅಬ್ಬರಿಸಲು ಜಾಲಿರೆಡ್ಡಿ ಸಿದ್ದ... ಪುಷ್ಪ 2ಗೆ ಡಾಲಿ ರೆಡಿ..!

ಹಾರಾರ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆಗೆ ಸಿದ್ದವಾಗುತ್ತಿದೆ. ಬೆಂಗಳೂರು, ಮೈಸೂರು, ಉತ್ತರಕಾಂಡ ಹಾಗೂ ಲಂಡನ್ ನಲ್ಲಿ ಚಿತ್ರೀಕರಣ ನಡೆದಿದೆ.ಅನೂಪ್ ಕಟ್ಟುಕರನ್ ಮೊದಲ ಬಾರಿಗೆ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ. ವೆಂಕಿ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶಿವಕುಮಾರ್(ಕೆ.ಜಿ.ಎಫ್ ಖ್ಯಾತಿ) ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ "ಛೂ ಮಂತರ್" ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News