ಆಕೆ ಬಿರುಗಾಳಿಗೂ ಮುಂಚೆ ಬರುವ ಗುಡುಗು: 'ಜವಾನ್' ಚಿತ್ರದ ನಯನತಾರಾ ಪೋಸ್ಟರ್ ಬಿಡುಗಡೆ ಬಳಿಕ ಶಾರುಖ್

Jawaan Film Poster: ಪ್ರಿವ್ಯೂನಲ್ಲಿ ನಯನತಾರಾ ಅವರನ್ನು ಆಕ್ಷನ್ ದೃಶ್ಯಗಳಲ್ಲಿ ಕಂಡು ಪ್ರೇಕ್ಷಕರು ಸಖತ್ ಥ್ರಿಲ್ ಆಗಿದ್ದು, ಆಕೆಯನ್ನು ಇನ್ನಷ್ಟು ನೋಡಬಯಸಿದ್ದರು. ಈಗ ನಯನತಾರಾ ಪೋಸ್ಟರ್ ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. 

Written by - YASHODHA POOJARI | Last Updated : Jul 20, 2023, 10:34 AM IST
  • ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಮತ್ತು ನಯನತಾರಾ ಒಟ್ಟಿಗೆ ನಟಿಸಿರುವ ಚಿತ್ರ ಜವಾನ್
  • ಈ ಚಿತ್ರವನ್ನೂ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಗೌರಿ ಖಾನ್ ನಿರ್ಮಿಸಿದ್ದಾರೆ.
  • ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ.
ಆಕೆ ಬಿರುಗಾಳಿಗೂ ಮುಂಚೆ ಬರುವ ಗುಡುಗು: 'ಜವಾನ್' ಚಿತ್ರದ ನಯನತಾರಾ ಪೋಸ್ಟರ್ ಬಿಡುಗಡೆ ಬಳಿಕ ಶಾರುಖ್ title=

Jawaan Film Poster: ಇತ್ತೀಚೆಗಷ್ಟೇ ಬಿಡುಗಡೆಯಾದ ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ, ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟುಹಾಕಿದೆ. ಈಗ ಚಿತ್ರದಲ್ಲಿನ ನಯನತಾರಾ ಅವರ ಪಾತ್ರದ ಪೋಸ್ಟರನ್ನು ನಾಯಕ ನಟ ಶಾರುಖ್ ಖಾನ್ ಬಿಡುಗಡೆ ಮಾಡಿದ್ದು, ಈ ಪೋಸ್ಟರ್ ಇಂಟರ್ನೆಟ್ ನಲ್ಲಿ ಸಾಕಷ್ಟು ವೈರಲ್ ಆಗಿದೆ.

ಪ್ರಿವ್ಯೂನಲ್ಲಿ ನಯನತಾರಾ ಅವರನ್ನು ಆಕ್ಷನ್ ದೃಶ್ಯಗಳಲ್ಲಿ ಕಂಡು ಪ್ರೇಕ್ಷಕರು ಸಖತ್ ಥ್ರಿಲ್ ಆಗಿದ್ದು, ಆಕೆಯನ್ನು ಇನ್ನಷ್ಟು ನೋಡಬಯಸಿದ್ದರು. ಈಗ ನಯನತಾರಾ ಪೋಸ್ಟರ್ ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. 

ನಯನತಾರಾ ಅವರ ಪಾತ್ರವನ್ನು ‘ಬಿರುಗಾಳಿಗೂ ಮುಂಚೆ ಬರುವ ಗುಡುಗು’ ಎಂದು ಶಾರುಖ್ ಖಾನ್ ವರ್ಣಿಸಿದ್ದು, ಆಕೆಯ ಪಾತ್ರದ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ- Soundarya: ಸಾವಿನ ಸಮಯದಲ್ಲಿ 2 ತಿಂಗಳ ಗರ್ಭಿಣಿ ಆಗಿದ್ರು ನಟಿ ಸೌಂದರ್ಯ.!

ಇದೇ ಮೊದಲ ಬಾರಿಗೆ ಶಾರುಖ್ ಖಾನ್ ಮತ್ತು ನಯನತಾರಾ, ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಜವಾನ್’ನಲ್ಲಿ ನಯನತಾರಾ, ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಇಡೀ ಚಿತ್ರದ ಹೈಲೈಟ್ ಆಗಲಿದೆ ಎಂದು ಹೇಳಲಾಗುತ್ತಿದೆ. ಚಿತ್ರದಲ್ಲಿ ಸಾಕಷ್ಟು ಸಾಹಸಮಯ ದೃಶ್ಯಗಳಲ್ಲಿ ನಯನತಾರಾ ಕಾಣಿಸಿಕೊಂಡಿದ್ದಾರೆ. 

ಇದನ್ನೂ ಓದಿ- ಕೈಯಲ್ಲಿ ಟೊಮೆಟೊ ಹಿಡಿದು ಕಚ್ಚಿ ತಿಂದ ಉರ್ಫಿ..! ಏನಮ್ಮಾ ನಿನ್ನ ಅವತಾರ..

‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಗೌರಿ ಖಾನ್ ನಿರ್ಮಿಸಿದ್ದು, ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಗೌರವ್ ವರ್ಮ ಈ ಚಿತ್ರದ ಸಹನಿರ್ಮಾಪಕರು. ಸೆಪ್ಟೆಂಬರ್ 7ರಂದು ಈ ಚಿತ್ರವು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News