Rakshit Shetty: ಟೊವಿನೋ ಥಾಮಸ್ ʼARMʼ ಟೀಸರ್ ರಿಲೀಸ್ ಮಾಡಿದ  ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ARMʼ Teaser Released By Rakshit Shetty: 777 ಚಾರ್ಲಿ' ಸಿನಿಮಾದ ಸಕ್ಸಸ್ ಬಳಿಕ ರಕ್ಷಿತ್ ಶೆಟ್ಟಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ಶೂಟಿಂಗ್‌ನಲ್ಲಿ  ಬ್ಯೂಸಿಯಾಗಿದ್ದರು. ಇದರ ನಡುವೆ ಮಿನ್ನಲ್ ಮುರಳಿ ನಟನೆಯ  ಟೊವಿನೋ ಥಾಮಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅಜಯಂತೆ ರಂದಂ ಮೋಷನಂ ಚಿತ್ರದ ಟೀಸರ್ ನ್ನು ಸಿಂಪಲ್ ಸ್ಟಾರ್ ರಿಲೀಸ್ ಮಾಡಿದ್ದಾರೆ. 

Last Updated : May 20, 2023, 05:39 PM IST
  • ಟೊವಿನೋ ಥಾಮಸ್ ನಟನೆಯ ʼARMʼ ಟೀಸರ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ
  • ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದಲ್ಲಿ ಬ್ಯೂಸಿಯಾಗಿರುವ ಸಿಂಪಲ್ ಸ್ಟಾರ್
  • ಟೀಸರ್ ರಿಲೀಸ್ ಮಾಡುವ ಮೂಲಕ ಮಾಲಿವುಡ್ ಸ್ಟಾರ್ ಗೆ ಸಾಥ್
Rakshit Shetty: ಟೊವಿನೋ ಥಾಮಸ್ ʼARMʼ ಟೀಸರ್ ರಿಲೀಸ್ ಮಾಡಿದ  ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ title=

ಬೆಂಗಳೂರು: 777 ಚಾರ್ಲಿ' ಸಿನಿಮಾದ ಸಕ್ಸಸ್ ಬಳಿಕ ರಕ್ಷಿತ್ ಶೆಟ್ಟಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದ್ದರು. ಇದೀಗ ಆ ಸಿನಿಮಾದ ಶೂಟಿಂಗ್ ಕೂಡ ಮುಕ್ತಾಯವಾಗಿದ್ದು, ಸದ್ಯ ಪೋಸ್ಟ್‌ ಪ್ರೊಡಕ್ಷನ್ಸ್ ಕೆಲಸಗಳು ನಡೆಯುತ್ತಿವೆ ಎಂಬ ಮಾಹಿತಿ ಹೊರ ಬಿದ್ದಿದೆ.

ಸಿಂಪಲ್ ಸ್ಟಾರ್ ಗೆ ಸ್ಯಾಂಡಲ್ವುಡ್‌ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ  ರಕ್ಷಿತ್ ಶೆಟ್ಟಿ ತಮ್ಮ ಸಿನಿಮಾ ನಡುವೆ ಹೊಸ ಸಿನಿಮಾಗಳನ್ನುಪ್ರೋತ್ಸಾಹ ನೀಡುತ್ತಾರೆ. ಈ ನಿಟ್ಟಿನಲ್ಲಿ ಟೊವಿನೋ ಥಾಮಸ್ ನಟನೆಯ ARM ಟೀಸರ್ ರಿಲೀಸ್ ಮಾಡುವ ಮೂಲಕ ಮಾಲಿವುಡ್ ಸ್ಟಾರ್ ಗೆ ಸಾಥ್ ನೀಡಿದ್ದಾರೆ. 

ಇದನ್ನೂ ಓದಿ: Karnataka CM: ʼಜೋಡೆತ್ತುʼ ಸರ್ಕಾರಕ್ಕೆ ಶುಭ ಕೋರಿದ ಸಲಗ..! ಛಲ ಬಿಡದ ತ್ರಿವಿಕ್ರಮನಂತೆ ಕೆಲಸ ನಿರ್ವಹಿಸಿ ಎಂದ ವಿಜಿ..

ಮಿನ್ನಲ್ ಮುರಳಿ ಎಂಬ ಸೂಪರ್ ಹೀರೋ ಸಿನಿಮಾ ಮೂಲಕ ಖ್ಯಾತಿ ಪಡೆದಿರುವ ಟೊವಿನೋ ಥಾಮಸ್ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಅಜಯಂತೆ ರಂದಂ ಮೋಷನಂ ಟೀಸರ್ ರಿಲೀಸ್ ಆಗಿದೆ. ಹಿಂದಿಯಲ್ಲಿ ಹೃತಿಕ್ ರೋಷನ್, ತೆಲುಗಿನಲ್ಲಿ ನಾನಿ, ತಮಿಳಿನಲ್ಲಿ ಲೋಕೇಶ್ ಕನಕರಾಜ್ ಮತ್ತು ಆರ್ಯ, ಕನ್ನಡದಲ್ಲಿ ರಕ್ಷಿತ್ ಶೆಟ್ಟಿ, ಮಲಯಾಳಂ ಪೃಥ್ವಿರಾಜ್ ಸುಕುಮಾರನ್ ಸೋಷಿಯಲ್ ಮೀಡಿಯಾ ಮೂಲಕ ಟೀಸರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. 

ಟೊವಿನೋ ಥಾಮಸ್ ಮಾಸ್ ಅವತಾರ ತಾಳಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಘಟನೆ ಸುತ್ತ ಇಡೀ ಟೀಸರ್ ಸಾಗುತ್ತದೆ. ಟೊವಿನೋ ಥಾಮಸ್ ವೃತ್ತಿ ಜೀವನದ ಬಹುವಿಶೇಷ ಸಿನಿಮಾ ಇದಾಗಿದೆ. ಈ  ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ  ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ.  ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್ ವೃತ್ತಿ ಜೀವನದ ಬಹು ವಿಶೇಷ ಸಿನಿಮಾ ಇದಾಗಿದೆ.  

ಚಿತ್ರದಲ್ಲಿ ಟೊವಿನೋ ಥಾಮಸ್ ತ್ರಿಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಮೂಲಕ ಕಲಾವಿದನಾಗಿ ಮೊದಲ ಬಾರಿ ಬಹು ದೊಡ್ಡ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರ ಹೊಮ್ಮುತ್ತಿದ್ದಾರೆ. ಸೌತ್ ಸಿನಿರಂಗದ ಸೆನ್ಸೇಷನಲ್ ನಟಿ ಕೃತಿ ಶೆಟ್ಟಿಗೂ ಸ್ಪೆಷಲ್ ಆಗಿದ್ದು ತೆಲುಗು, ತಮಿಳಿನಲ್ಲಿ ಮಿಂಚಿದ್ದ ಕೃತಿ ಶೆಟ್ಟಿ ಈಗ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ನೀಡುತ್ತಿದ್ದಾರೆ. ಟೊವಿನೋ ಥಾಮಸ್ ಜೋಡಿಯಾಗಿ ಕೃತಿ ನಟಿಸುತ್ತಿದ್ದು, ಉಳಿದಂತೆ ನಟಿಯರಾದ ಐಶ್ವರ್ಯ ರಾಜೇಶ್, ಸುರಭಿ ಲಕ್ಷಿ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

 

ಇದನ್ನೂ ಓದಿ: Radha Kalyan Actress: ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ ʼರಾಧಾ ಕಲ್ಯಾಣʼ ನಟಿ ರಾಧಿಕಾ : ಇಲ್ಲಿವೆ ನೋಡಿ ಫೋಟೊಸ್‌ 

‘ಅಜಯಂತೆ ರಂದಂ ಮೋಷನಂ’ ನಿರ್ದೇಶಕ ಜಿತಿನ್ ಲಾಲ್ ನಿರ್ದೇಶಿಸುತ್ತಿದ್ದು ಇದು ಇವರ ಮೊದಲ ಸಿನಿಮಾ. ಸುಜಿತ್ ನಂಬಿಯಾರ್ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದು, ಬಾಸಿಲ್ ಜೋಸೆಫ್, ಕಿಶೋರ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಜಗದೀಶ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರ್ಮಾಣವಾಗುತ್ತಿರುವ 3ಡಿಯಲ್ಲಿ ತೆರೆ ಕಾಣುವ ‘ಅಜಯಂತೆ ರಂದಂ ಮೋಷನಂ’ ಚಿತ್ರವನ್ನು ಯುಜಿಎಂ ಪ್ರೊಡಕ್ಷನ್ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಮ್ಯಾಜಿಕ್ ಫ್ರೇಮ್ಸ್ ಸಹ ನಿರ್ಮಾಣ ಮಾಡುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

 

Trending News