Vedha on Zee5 : ಓಟಿಟಿಯಲ್ಲಿ ಹ್ಯಾಟ್ರಿಕ್ ಹೀರೋ 'ವೇದ' ಹೊಸ ರೆಕಾರ್ಡ್.. ಜೀ5 ಗ್ರ್ಯಾಂಡ್ ಸೆಲೆಬ್ರೇಶನ್..!

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ ʼವೇದʼ ಚಿತ್ರಮಂದಿರದಲ್ಲಿ ಅಬ್ಬರಿಸಿ ಇತಿಹಾಸ ಸೃಷ್ಟಿಸಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಥಿಯೇಟರ್‌ಗಳಲ್ಲಿ ಸೂಪರ್ ಸಕ್ಸಸ್ ಕಂಡ ಶಿವಣ್ಣನ ಸಿನಿಮಾ ಫೆಬ್ರವರಿ 10ರಂದು ZEE5ನಲ್ಲಿ ಬಿಡುಗಡೆಗೊಂಡು ಇಲ್ಲಿಯೂ ಹೊಸ ದಾಖಲೆ ಬರೆದಿದೆ. ಬಿಡುಗಡೆಯಾದ ಕೆಲವೇ ದಿನದಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡು ರೆಕಾರ್ಡ್ ಕ್ರಿಯೇಟ್ ಮಾಡಿದೆ. ಇದೇ ಖುಷಿಯಲ್ಲಿ ZEE5 ಸಂತೋಷ್ ಚಿತ್ರಮಂದಿರದಲ್ಲಿ ಸಂಭ್ರಮ ಆಚರಿಸಿದೆ. 

Written by - Krishna N K | Last Updated : Mar 2, 2023, 03:17 PM IST
  • ʼವೇದʼ ಸಿನಿಮಾ ಚಿತ್ರಮಂದಿರದಲ್ಲಿ ಅಬ್ಬರಿಸಿ ಇತಿಹಾಸ ಸೃಷ್ಟಿಸಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ.
  • ಥಿಯೇಟರ್‌ಗಳಲ್ಲಿ ಸೂಪರ್ ಸಕ್ಸಸ್ ಕಂಡ ಶಿವಣ್ಣನ ಸಿನಿಮಾ ಫೆಬ್ರವರಿ 10ರಂದು ZEE5ನಲ್ಲಿ ಬಿಡುಗಡೆಗೊಂಡಿತ್ತು.
  • ಬಿಡುಗಡೆಯಾದ ಕೆಲವೇ ದಿನದಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡು ರೆಕಾರ್ಡ್ ಕ್ರಿಯೇಟ್ ಮಾಡಿದೆ.
Vedha on Zee5 : ಓಟಿಟಿಯಲ್ಲಿ ಹ್ಯಾಟ್ರಿಕ್ ಹೀರೋ 'ವೇದ' ಹೊಸ ರೆಕಾರ್ಡ್.. ಜೀ5 ಗ್ರ್ಯಾಂಡ್ ಸೆಲೆಬ್ರೇಶನ್..! title=

Vedha on Zee5 : ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 125ನೇ ಸಿನಿಮಾ ʼವೇದʼ ಚಿತ್ರಮಂದಿರದಲ್ಲಿ ಅಬ್ಬರಿಸಿ ಇತಿಹಾಸ ಸೃಷ್ಟಿಸಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಥಿಯೇಟರ್‌ಗಳಲ್ಲಿ ಸೂಪರ್ ಸಕ್ಸಸ್ ಕಂಡ ಶಿವಣ್ಣನ ಸಿನಿಮಾ ಫೆಬ್ರವರಿ 10ರಂದು ZEE5ನಲ್ಲಿ ಬಿಡುಗಡೆಗೊಂಡು ಇಲ್ಲಿಯೂ ಹೊಸ ದಾಖಲೆ ಬರೆದಿದೆ. ಬಿಡುಗಡೆಯಾದ ಕೆಲವೇ ದಿನದಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡು ರೆಕಾರ್ಡ್ ಕ್ರಿಯೇಟ್ ಮಾಡಿದೆ. ಇದೇ ಖುಷಿಯಲ್ಲಿ ZEE5 ಸಂತೋಷ್ ಚಿತ್ರಮಂದಿರದಲ್ಲಿ ಸಂಭ್ರಮ ಆಚರಿಸಿದೆ. 

ಸಂತೋಷ್ ಚಿತ್ರಮಂದಿರದಲ್ಲಿ ‘ವೇದ’ ಚಿತ್ರದ ಶಿವಣ್ಣ ಕಟೌಟ್ ನಿಲ್ಲಿಸಿ ZEE5 ಸಂಭ್ರಮ ಆಚರಣೆ ಮಾಡಿದೆ. ಈ ಸಂಭ್ರಮಾಚರಣೆಯಲ್ಲಿ ದೊಡ್ಮನೆ ಅಭಿಮಾನಿಗಳು ಭಾಗಿಯಾಗಿ ಸಂತಸ ಪಟ್ಟಿದ್ದಾರೆ. ಓಟಿಟಿಯಲ್ಲಿ ಅತಿ ಕಡಿಮೆ ಅವಧಿಯಲ್ಲಿ 125 ಮಿಲಿಯನ್ ಸ್ಟ್ರೀಮಿಂಗ್ ಮಿನಿಟ್ಸ್ ಕಂಡಿದ್ದು ZEE5 ನಲ್ಲಿ ದಾಖಲೆ ಬರೆದಿದೆ. ಈ ಮೂಲಕ ಚಿತ್ರಮಂದಿರದ ಜೊತೆಗೆ ZEE5 ಒಟಿಟಿಯಲ್ಲೂ ಈ ಸಿನಿಮಾ ಹೊಸ ದಾಖಲೆ ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ಐಷಾರಾಮಿ ಕಾರು ಬಿಟ್ಟು ಸ್ಕೂಟಿಯಲ್ಲಿ ಗೆಳತಿ ಜೊತೆ ಓಡಾಡಿದ ಮೋಹಕ ತಾರೆ ರಮ್ಯಾ..!

ʼವೇದʼ ಸಿನಿಮಾ ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್‌ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಸಾಕಷ್ಟು ನಿರೀಕ್ಷೆಯೊಂದಿಗೆ ಡಿಸೆಂಬರ್ 23ರಂದು ಬಿಡುಗಡೆಗೊಂಡಿತ್ತು. ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾವಾಗಿರುವ ಈ ಚಿತ್ರ ಶಿವಣ್ಣ ಅಭಿನಯದ 125ನೇ ಸಿನಿಮಾ ಅನ್ನೋದು ವಿಶೇಷ. ಚಿತ್ರದಲ್ಲಿ ಗಾನವಿ ಲಕ್ಷ್ಮಣ್, ಶ್ವೇತ ಚೆಂಗಪ್ಪ, ಉಮಾಶ್ರೀ, ಅದಿತಿ ಸಾಗರ್, ವೀಣಾ ಪೊನ್ನಪ್ಪ, ಕುರಿ ಪ್ರತಾಪ್, ಲಾಸ್ಯ ನಾಗರಾಜ್ ಸೇರಿದಂತೆ ಬಹುದೊಡ್ಡ ತಾರಗಣ ‘ವೇದ' ಚಿತ್ರದಲ್ಲಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೋಡಿ ಮಾಡಿದ್ದು, ಸ್ವಾಮಿ ಜೆ ಗೌಡ ಛಾಯಾಗ್ರಹಣ, ದೀಪು.ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News