Yuva: ಬಹುನಿರೀಕ್ಷಿತ ʻಯುವʼ ಸಿನಿಮಾದ ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌!

Yuva Update: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಯುವ ಸಿನಿಮಾ ಟ್ರೇಲರ್‌ ರಿಲೀಸ್‌ ಡೇಟ್‌ ಫಿಕ್ಸ್‌ ಆಗಿದೆ ಮತ್ತು ಚಿತ್ರದ ಪ್ರೀ-ರಿಲೀಸ್‌ ಇವೆಂಟ್‌ಗೂ ಪ್ಲಾನ್‌ ಚಿತ್ರತಂಡ ಪ್ಲಾನ್‌ ಮಾಡಿದೆ. ಹಾಗಾದ್ರೇ ಈ ಸಿನಿಮಾದ ಝಲಕ್‌ ಬಿಡುಗಡೆಯಾಗುವುದು ಯಾವಾಗ? ಪ್ರಿ-ರಿಲೀಸ್‌ ಕಾರ್ಯಕ್ರಮ ಯಾವತ್ತು ಇದೆ? ಇಲ್ಲಿದೆ ಸಂಪೂರ್ಣ ವಿವರ.  

Written by - Zee Kannada News Desk | Last Updated : Mar 20, 2024, 04:39 PM IST
  • ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಬಹಳ ದೊಡ್ಡಮಟ್ಟದಲ್ಲಿ ಯುವ ಸಿನಿಮಾ ನಿರ್ಮಾಣ ಮಾಡಿದ್ದು, ಅದರಂತೆ ಪ್ರಮೋಷನ್ ಹಾಗೂ ರಿಲೀಸ್ ಕೂಡ ತಯಾರಿ ನಡೆಸುತ್ತಾಯಿದೆ.
  • ಯುವ ಚಿತ್ರತಂಡ ನಿಧಾನವಾಗಿ ಸಿನಿಮಾ ಪ್ರಮೋಷನ್ ಆರಂಭಿಸುತ್ತಿದ್ದು, ಈಗಾಗಲೇ ಈ ಚಿತ್ರದ ಫಸ್ಟ್‌ ಲುಕ್‌, ಮೂರು ಹಾಡುಗಳು ಎಲ್ಲರ ಗಮನ ಸೆಳೆದಿದೆ.
  • ಇನ್ನುಳಿದಂತೆ 'ಯುವ' ಚಿತ್ರದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಅಭಿನಯಿಸಿದ್ದು, ಇವರೊಂದಿಗೆ ಅಚ್ಯುತ್ ಕುಮಾರ್, ಸುಧಾರಾಣಿ ಸೇರಿದಂತೆ ದೊಡ್ಡ ತಾರಾಬಳಗವೆ ಇದೆ.
Yuva: ಬಹುನಿರೀಕ್ಷಿತ ʻಯುವʼ ಸಿನಿಮಾದ ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌! title=

Yuva Trailer Release Date: ಚಂದನವನದ ಪ್ರತಿಭಾನ್ವಿತ ನಟ, ದೊಡ್ಮನೆ ಕುಡಿ ಯುವ ರಾಜ್‌ಕುಮಾರ್‌ ಅಭಿನಯದ ಬಹುನಿರೀಕ್ಷಿತ ಯುವ ಚಿತ್ರದ ಟ್ರೇಲರ್‌ ಬಿಡುಗಡೆಗೆ ದಿನಾಂಕ ಫಿಕ್ಸ್‌ ಆಗಿದೆ. ಇನ್ನೇನು ಯುವ ಸಿನಿಮಾದ ರಿಲೀಸ್‌ಗೆ ಒಂದು ವಾರ ಬಾಕಿಯಿದೆ. ಈಗಾಗಲೇ ಚಿತ್ರದ ಮೂರು ಹಾಡುಗಳು ಕೂಡ ಬಿಡುಗಡೆಯಾಗಿದೆ. ಇದೀಗ ಸಿನಿಮಾ ಟ್ರೇಲರ್‌ ರಿಲೀಸರ್‌ ಡೇಟ್‌ ಜೊತೆಗೆ ಪ್ರೀ-ರಿಲೀಸ್‌ ಇವೆಂಟ್‌ಗೂ ಚಿತ್ರತಂಡ ಪ್ಲಾನ್‌ ಮಾಡಿದೆ.

ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಬಹಳ ದೊಡ್ಡಮಟ್ಟದಲ್ಲಿ ಯುವ ಸಿನಿಮಾ ನಿರ್ಮಾಣ ಮಾಡಿದ್ದು, ಅದರಂತೆ ಪ್ರಮೋಷನ್ ಹಾಗೂ ರಿಲೀಸ್ ಕೂಡ ತಯಾರಿ ನಡೆಸುತ್ತಾಯಿದೆ. ಯುವ ಚಿತ್ರದ ಟ್ರೇಲರ್‌ ಅನ್ನು ಇದೇ ಮಾರ್ಚ್ 21 ರಂದು ಗುರುವಾರ ಮಧ್ಯಾಹ್ನ 1 ಗಂಟೆ 1 ನಿಮಿಷಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ಹಾಗೆಯೇ ಈ ಸಿನಿಮಾದ ಪ್ರೀ-ರಿಲೀಸ್‌ ಇವೆಂಟ್‌ ಮಾರ್ಚ್ 23 ರಂದು ಶನಿವಾರ ಹೊಸಪೇಟೆಯಲ್ಲಿ ನಡೆಯಲಿದೆ.

ಇದನ್ನೂ ಓದಿ: ಶ್ರೀಮುರಳಿ ಅವರಿಂದ ಅನಾವರಣವಾಯಿತು "ದಿಲ್ ಖುಷ್" ಟ್ರೇಲರ್!

ಯುವ ಚಿತ್ರತಂಡ ನಿಧಾನವಾಗಿ  ಸಿನಿಮಾ ಪ್ರಮೋಷನ್ ಆರಂಭಿಸುತ್ತಿದ್ದು, ಈಗಾಗಲೇ ಈ ಚಿತ್ರದ ಫಸ್ಟ್‌ ಲುಕ್‌, ಮೂರು ಹಾಡುಗಳು ಎಲ್ಲರ ಗಮನ ಸೆಳೆದಿದೆ. ಈ ಸಿನಿಮಾ ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿದ್ದು, ಇದರಲ್ಲಿ ತಂದೆ – ಮಗನ ಬಾಂಧವ್ಯ ಅದ್ಭುತವಾಗಿ ಮೂಡಿಬಂದಿದೆ ಎನ್ನಲಾಗಿದೆ. 'ಯುವ' ಸೆಟ್ಟೇರುವ ಸಮಯದಲ್ಲೇ ಸಣ್ಣ ಟೀಸರ್ ರಿಲೀಸ್ ಆಗಿ ಹೈಪ್ ಕ್ರಿಯೇಟ್ ಆಗಿತ್ತು.

ಇನ್ನುಳಿದಂತೆ 'ಯುವ' ಚಿತ್ರದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಅಭಿನಯಿಸಿದ್ದು, ಇವರೊಂದಿಗೆ ಅಚ್ಯುತ್ ಕುಮಾರ್, ಸುಧಾರಾಣಿ ಸೇರಿದಂತೆ ದೊಡ್ಡ ತಾರಾಬಳಗವೆ ಇದೆ. ಈ ಚಿತ್ರಕ್ಕೆ ನಿರ್ದೇಶಕ ಸಂತೋಷ್‌ ಆನಂದ್‌ರಾಮ್‌ ಆಕ್ಷನ್‌ ಕಟ್‌ ಹೇಳಿದ್ದಾರೆ. ಹಾಗೆಯೇ ಈ ಸಿನಿಮಾದ ಹಾಡುಗಳಿಗೆ ಮ್ಯೂಸಿಕ್‌ ಡೈರೆಕ್ಟರ್‌ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿದ್ದಾರೆ. ಯುವ ಸಿನಿಮಾ ಇದೇ ಮಾರ್ಚ್‌ 29 ರಂದು ರಾಜ್ಯಾದ್ಯಂತ ಬೆಳ್ಳಿತೆರೆಗೆ ಅಪ್ಪಳಿಸಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News